21 C
Bengaluru
Thursday, January 23, 2020

ಕಲೆ ಯಾರೊಬ್ಬರ ಸ್ವತ್ತಲ್ಲ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಲಕ್ಷ್ಮೇಶ್ವರ: ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಭಾನುವಾರ ಸಂಜೆ ಸ್ಥಳೀಯ ಉದಯೋನ್ಮುಖ ಪ್ರತಿಭೆ, ಭರತನಾಟ್ಯ ಯುವ ಕಲಾವಿದೆ ಭವ್ಯ ಕತ್ತಿ ಅವರ ಭರತನಾಟ್ಯ ರಂಗಪ್ರವೇಶ ಯಶಸ್ವಿಯಾಗಿ ನೆರವೇರಿತು.

ಭರತನಾಟ್ಯ ಕಲಾವಿದೆ, ಕಿರುತೆರೆಯ ಹಿರಿಯ ನಟಿ ವಿದುಷಿ ಹರಿಣಿ ಶ್ರೀಕಾಂತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಲೆ ಯಾರೊಬ್ಬರ ಸ್ವತ್ತಲ್ಲ. ಪ್ರತಿಯೊಬ್ಬರಲ್ಲೂ ವಿಶೇಷವಾದ ಶಕ್ತಿ, ಕಲೆ, ಪ್ರತಿಭೆಯನ್ನು ಆ ದೇವರು ಕರುಣಿಸಿರುತ್ತಾನೆ. ಆಸಕ್ತಿ, ಶ್ರದ್ಧೆ, ಪ್ರಾಮಾಣಿಕತೆ, ಸತತ ಅಭ್ಯಾಸದಿಂದ ಮಾತ್ರ ಕಲೆ ಒಲಿಯುತ್ತದೆ. ಇದನ್ನು ಭವ್ಯ ಸಾಬೀತುಪಡಿಸಿದ್ದಾರೆ. ಇವರ ಭರತನಾಟ್ಯ ಸಾಧನೆ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು.

ಹೆಸರಾಂತ ಹಿಮ್ಮೇಳ ಕಲಾವಿದರು, ಭವ್ಯ ಅವರ ಗುರು ವಿದ್ವಾನ್ ಸುಜಯ ಶಾನಭಾಗ ಹಾಗೂ ಸಾವಿರಾರು ಪ್ರೇಕ್ಷಕರು ಭವ್ಯ ಅವರ ನಾಟ್ಯ ಕಲಾ ಪ್ರದರ್ಶನಕ್ಕೆ ಸಾಕ್ಷಿಯಾದರು.

ರಂಗ ಪ್ರವೇಶದ ಪರಂಪರೆಗಳನ್ವಯ ಭರತನಾಟ್ಯ ನೃತ್ಯಬಂಧಗಳಾದ ಮಲ್ಲರಿ, ಕಲ್ಯಾಣಿ ಜತಿಸ್ವರದಲ್ಲಿ ಪುಷ್ಪಾಂಜಲಿ, ಗಣೇಶ ಸ್ತುತಿ, ಶಿವಸ್ತುತಿವರ್ಣ, ದೇವರನಾಮ, ಜಾವಳಿ, ಬಸವಣ್ಣನವರ ಉಳ್ಳವರು ಶಿವಾಲಯ ಮಾಡುವರು ವಚನದ ಅಮೋಘ ನೃತ್ಯ, ತಿಲ್ಲಾನ ಹಾಗೂ ಮಂಗಳಂದೊಂದಿಗೆ ನೃತ್ಯ ಮತ್ತು ಅಭಿನಯದ ಸೂಕ್ಷ್ಮ ಸಂಗತಿಗಳನ್ನು ಭವ್ಯ ಕತ್ತಿ ಅವರು ಎರಡೂವರೆ ತಾಸು ಸೋಮೇಶ್ವರನ ಸಾನ್ನಿಧ್ಯ ಮತ್ತು ಹಿರಿಯ ಕಲಾವಿದರ ಸಮ್ಮುಖದಲ್ಲಿ ಭರತನಾಟ್ಯವನ್ನು ಯಶಸ್ವಿಯಾಗಿ ಪ್ರದರ್ಶಿಸಿ ಶಹಬ್ಬಾಸ್​ಗಿರಿ ಪಡೆದರು.

ಗುರು ವಿದ್ವಾನ್ ಸುಜಯ ಶಾನಭಾಗ್ (ನಟುವಾಂಗ), ವಿದುಷಿ ವರದಾ ಕುಲಕರ್ಣಿಯವರ ದಣಿವರಿಯದ ಅದ್ಭುತ ಗಾಯನ, ವಿದ್ವಾನ್ ಪಂಚಮ್ ಉಪಾಧ್ಯಾಯ ಅವರ ಮೃದಂಗ ವಾದನ, ವಿದ್ವಾನ್ ಶಿವಸತ್ಯ ಅವರ ರಿದಂ ಮತ್ತು ಹಿಮ್ಮೇಳದಲ್ಲಿ ಇಂಪಾದ ಕೊಳಲುವಾದನ, ಸೊಗಸಾದ ಗಾಯನ ಈ ಭರತನಾಟ್ಯಕ್ಕೆ ಮೆರುಗು ನೀಡಿದ್ದವು.

ಅತಿಥಿಗಳಾಗಿ ಆಗಮಿಸಿದ್ದ ನಟ ಬಡೆಕ್ಕಿಲ್ಲ ಪ್ರದೀಪ್, ಮಾಲಾದೇವಿ ದಂದರಗಿ ಮಾತನಾಡಿದರು. ಲತಾ ಜಮಖಂಡಿ, ಶಿವಾನಂದ ನೆಲವಿಗಿ, ಚಂಬಣ್ಣ ಬಾಳಿಕಾಯಿ, ಸೋಮಣ್ಣ ಕತ್ತಿ ದಂಪತಿ, ಇತರರು ಉಪಸ್ಥಿತರಿದ್ದರು. ವಿದ್ವಾನ್ ಸುಜಯ ಶಾನಭಾಗ ರಂಗಪ್ರವೇಶ ಎಂಬುದು ಭರತನಾಟ್ಯದ ಕಲಾವಿದರಿಗೆ ಅತ್ಯಂತ ಮಹತ್ವದ ಘಟ್ಟವಾಗಿದ್ದು ರಂಗಪ್ರವೇಶದ ವೇದಿಕೆಯಲ್ಲಿ ತಾವು ಕಲಿತ ಭರತ ನಾಟ್ಯದ ಎಲ್ಲ ಆಯಾಮಗಳನ್ನು, ನಾಟ್ಯ ಪ್ರತಿಭೆಯನ್ನು ಪ್ರೇಕ್ಷಕರ ಎದುರು ಒರೆಗೆ ಹಚ್ಚುವಂತಹ ವಿಶಿಷ್ಟ ಕಲಾ ಪ್ರದರ್ಶನವೇ ಇದು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು. ವಂದನಾ ಶಾನಭಾಗ ಹಾಗೂ ರಶ್ಮಿ ಭೋಗಾರ ನಿರ್ವಹಿಸಿದರು.ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...