17 C
Bangalore
Friday, December 13, 2019

ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಶ್ರಮಿಸಿದ ಶಿವಶರಣ

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

ಬಂಕಾಪುರ: ಕಲ್ಯಾಣ ರಾಜ್ಯ ನಿರ್ಮಾಣ ಮಾಡಲು ಬಸವಣ್ಣನವರ ಜೊತೆಗೆ ಹೆಗಲಿಗೆ ಹೆಗಲು ಕೊಟ್ಟು ಹಡಪದ ಅಪ್ಪಣ್ಣನವರು ಶ್ರಮಿಸಿದರು ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾಂವಿ ಪಟ್ಟಣದ ಸಂಗನಬಸವ ಮಂಗಲ ಭವನದಲ್ಲಿ ಶನಿವಾರ ಜರುಗಿದ ಹಡಪದ ಅಪ್ಪಣ್ಣನವರ 885ನೇ ಜಯಂತ್ಯುತ್ಸವ ಹಾಗೂ ಹಡಪದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿಷ್ಠೆಯ ಕಾಯಕದೊಂದಿಗೆ ಸಮಾಜ ಪರಿವರ್ತನೆಗಾಗಿ ಜೀವನ ತ್ಯಾಗ ಮಾಡಿದ 12ನೇ ಶತಮಾನದ ಶರಣ ಅಪ್ಪಣ್ಣನವರನ್ನು ನೆನೆಯುವುದು ಅವಶ್ಯವಾಗಿದೆ. ಶರಣರ ಚಿಂತನೆಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲು ಜಯಂತಿ ಅವಶ್ಯವಾಗಿದೆ. ಸಭಾಭವನ, ಸಮುದಾಯ ಭವನ ನಿರ್ವಣದಿಂದ ಸಮಾಜ ಅಭಿವೃದ್ಧಿಯಾಗುವುದಿಲ್ಲ ಎಂದರು.

ಕುನ್ನೂರ ಗ್ರಾಮದಲ್ಲಿ ಸಮಾಜದ ಸಭಾಭವನಕ್ಕೆ 15 ಲಕ್ಷ ರೂ. ಮಂಜುರಾತಿ ನೀಡಲಾಗಿದ್ದು, ಹೆಚ್ಚುವರಿಯಾಗಿ ಇನ್ನೂ 5 ಲಕ್ಷ ರೂ. ನೀಡಲಾಗುವುದು. ಪ್ರತಿವರ್ಷ ಹಡಪದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಂಗಮ್ಮ ಟ್ರಸ್ಟ್ ವತಿಯಿಂದ ಶಿಷ್ಯವೇತನ ನೀಡಲಾಗುವುದು ಎಂದರು.

ಭರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ, ಹಡಪದ ಸಮಾಜ ಆರ್ಥಿಕ, ಶೈಕ್ಷಣಿಕವಾಗಿ ಮುಂದೆ ಬರಬೇಕಿದೆ. ದುಡಿಮೆಯ ಮಾರ್ಗ ಬದಲಿಸಿಕೊಳ್ಳುವ ಅವಶ್ಯಕತೆ ಇದೆ ಎಂದರು.

20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಪಟ್ಟಣದ ಸಂತೆ ಮೈದಾನದಿಂದ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಂಗನಬಸವ ಮಂಗಲಭವನದ ಬಳಿ ಮುಕ್ತಾಯಗೊಂಡಿತು.

ಶಿಕ್ಷಕ ಶಶಿಕಾಂತ ರಾಠೋಡ ಉಪನ್ಯಾಸ ನೀಡಿದರು. ಡಿಎಸ್​ಎಸ್ ಮುಖಂಡ ಡಿ.ಎಸ್. ಮಾಳಗಿ, ಮಲ್ಲಿಕಾರ್ಜುನ ಹಡಪದ, ಬಸವರಾಜ ಹಡಪದ ಮಾತನಾಡಿದರು. ವಿರಕ್ತಮಠ ಸಂಗನಬಸವ ಮಹಾಸ್ವಾಮಿಗಳು, ತಂಗಡಗಿಯ ಅನ್ನದಾನ ಭಾರತಿ ಅಪ್ಪಣ್ಣ ಸ್ವಾಮಿಗಳು ಕಾರ್ಯಕ್ರಮದ ಸಾನ್ನಿšಧ್ಯ ವಹಿಸಿದ್ದರು. ತಹಸೀಲ್ದಾರ್ ಚಂದ್ರಶೇಖರ ಗಾಳಿ, ಶಿವಾನಂದ ಮ್ಯಾಗೇರಿ, ಶಿವಾನಂದ ಬಾಗೂರ, ಪ್ರೇಮಾ ಪಾಟೀಲ, ಕರಿಯಪ್ಪ ಕಟ್ಟಿಮನಿ, ಸಂಜನಾ ರಾಯ್ಕರ, ಬಸವರಾಜ ದೊಡಮನಿ ಇತರರು ಇದ್ದರು.

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...