ಕಳಪೆ ಕೆಲಸಕ್ಕೆ ಸ್ಥಳೀಯರ ಆಕ್ರೋಶ

Latest News

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಜೋಡಿ ಕೊಲೆ ಆರೋಪಿ ಸೆರೆ

ಈಶ್ವರಮಂಗಲ: ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಅಜಲಾಡಿ ಸಮೀಪದ ಹೊಸಮಾರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್...

ಕೆಪಿಎಸ್​ಸಿ ​ಸಂದರ್ಶನದ ವೇಳೆ ನಡೆಯುವ ಅವ್ಯವಹಾರ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಣಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್​ಸಿ) ಸಂದರ್ಶನ ವೇಳೆ ಆಗಬಹುದಾದ ಅವ್ಯವಹಾರ ನಿಯಂತ್ರಿಸಿ ನೇಮಕಾತಿಯಲ್ಲಿ ಬಿಗಿ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಬುಧವಾರ...

ಖಂಡಿಗೆ ಕಿಂಡಿ ಅಣೆಕಟ್ಟು ದುರಸ್ತಿಗಿಲ್ಲ ಕ್ರಮ

ಲೋಕೇಶ್ ಸುರತ್ಕಲ್ ಪಾವಂಜೆ ಖಂಡಿಗೆ ಬಳಿ ಇರುವ ನಂದಿನಿ ನದಿ ಕಿಂಡಿ ಅಣೆಕಟ್ಟಿನ ದುರಸ್ತಿಗೆ ಅಧಿಕಾರಿಗಳು ಖಚಿತ ಯೋಜನೆ ರೂಪಿಸಿಲ್ಲ. ಅಣೆಕಟ್ಟು ನಿರ್ವಹಣೆಗೆ ಸಮಿತಿಯೇ ರಚನೆಯಾಗಿಲ್ಲ. ಹಾಗಾಗಿ...

ಕುಮಟಾ: ಬಗ್ಗೋಣದಲ್ಲಿ ಒಳಚರಂಡಿ ಕಾಮಗಾರಿ ಕಳಪೆಯಾಗಿದ್ದು ವಾಹನ ಸವಾರರು, ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಸಾರಿಗೆ ಬಸ್ ಸಂಚಾರವೂ ನಿಂತಿದ್ದು ಕೇಳುವವರೇ ಇಲ್ಲದಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಸಂಜೆ ಅಕ್ಕಿ ಮಿಲ್​ಗೆ ಬಂದಿದ್ದ ಲಾರಿ ಒಳಚರಂಡಿ ಕಾಮಗಾರಿಗಾಗಿ ಅಗೆದ ತಗ್ಗಿನಲ್ಲಿ ಸಿಲುಕಿಕೊಂಡಿತ್ತು. ಅದನ್ನು ಎತ್ತಲು ಬಂದ ಕ್ರೇನ್ ಕೂಡಾ ಸಿಲುಕಿಕೊಂಡಿತ್ತು. ರಾತ್ರಿ ಸಿಲುಕಿಕೊಂಡ ಕ್ರೇನ್ ಎತ್ತಲು ಬಂದ ಇನ್ನೊಂದು ಕ್ರೇನ್ ಕೂಡಾ ಹುದುಗಿಹೋಗಿ ಬಗ್ಗೋಣ ರಸ್ತೆಯಲ್ಲಿ ಸಂಚಾರಕ್ಕೆ ತಡೆ ಉಂಟಾಗಿತ್ತು. ರಾತ್ರಿ ತಗ್ಗಿನಲ್ಲಿ ಸಿಲುಕಿಕೊಂಡ ವಾಹನಗಳನ್ನು ಎತ್ತಲಾಯಿತು. ಆದರೆ, ಶುಕ್ರವಾರ ತಂಪುಪಾನೀಯದ ವಾಹನ ಸಿಲುಕಿ ಜನ ಪರದಾಡುವಂತಾಯಿತು.

ಈ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಒಳಚರಂಡಿ ಯೋಜನೆ ನಮಗೆ ಬೇಕಾಗಿಯೇ ಇರಲಿಲ್ಲ. ಯೋಜನೆಯನ್ನು ನಮ್ಮ ಮೇಲೆ ಹೇರಲಾಗಿದೆ. ಕಾಮಗಾರಿ ಅತ್ಯಂತ ಕಳಪೆಯಾಗಿದ್ದು, ಚರಂಡಿ ಚೇಂಬರ್​ಗಳಲ್ಲಿ ಈಗ ನೀರು ಉಕ್ಕುತ್ತಿದೆ. ಮುಂದೆ ಹೊಲಸು ಉಕ್ಕಲಿದೆ. ಬೇಸಿಗೆಯಲ್ಲಿ ಧೂಳಿನ ಕಾಟ, ಮಳೆಗಾಲದಲ್ಲಿ ರಸ್ತೆಯೇ ಹಾಳು ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ಕುಮಟಾ ಪೇಟೆ ಭಾಗದಲ್ಲಿ ಒಳಚರಂಡಿ ಕೆಲಸ ಮಾಡುವಾಗ ಧೂಳು ಬಾರದಂತೆ ದಿನಕ್ಕೆ 5-6 ಬಾರಿ ನೀರು ಹೊಡೆದಿದ್ದರು. ಆದರೆ ಬಗ್ಗೋಣದಲ್ಲಿ ಒಮ್ಮೆಯೂ ಧೂಳಿಗಾಗಿ ನೀರು ಹಾಕಿಲ್ಲ. ಕಾಂಕ್ರೀಟ್ ಕೆಲಸಕ್ಕೂ ಕ್ಯೂರಿಂಗ್ ಮಾಡಿಲ್ಲ. ನಮಗೆ ಇಂಥ ಕಳಪೆ ಒಳಚರಂಡಿ ಯೋಜನೆ ಬೇಡವೇ ಬೇಡ ಎಂದು ಸ್ಥಳೀಯರಾದ ನಾಗೇಶ ನಾಯ್ಕ, ನಾರಾಯಣ ನಾಯ್ಕ, ಕೃಷ್ಣ ಗೌಡ, ಮಾರುತಿ ನಾಯ್ಕ, ಈಶ್ವರ ನಾಯ್ಕ, ದತ್ತಾತ್ರಯ ನಾಯ್ಕ, ಸುರೇಶ, ಮೋಹನ ನಾಯ್ಕ, ಜಗದೀಶ ನಾಯ್ಕ ಇನ್ನಿತರರು ವಿರೋಧ ವ್ಯಕ್ತಪಡಿಸಿದರು.

ಬಗ್ಗೋಣದಲ್ಲಿ ಒಳಚರಂಡಿ ಕಾಮಗಾರಿಯಿಂದ ಕುಸಿದ ರಸ್ತೆಗೆ ಗುತ್ತಿಗೆದಾರರು ಶುಕ್ರವಾರ ಕಲ್ಲುಮಣ್ಣು ಹಾಕಿ ಮುಚ್ಚುತ್ತಿದ್ದಾರೆ. ಮಳೆಗಾಲ ಮುಗಿಯುವವರೆಗೂ ಇದೇ ಪರಿಸ್ಥಿತಿ ಮುಂದುವರಿಯಲಿದೆ.

ಕುಮಟಾದಲ್ಲಿ ಒಳಚರಂಡಿ ಕಾಮಗಾರಿ ತೀರಾ ಕಳಪೆಯಾಗಿದ್ದು, ಬಗ್ಗೋಣದಲ್ಲಿ ಮಿತಿಮೀರಿ ಕಳಪೆಯಾಗಿದೆ. ಅರೆಬರೆ ಕೆಲಸ ಮಾಡಿ ಹೋಗಿದ್ದು ಸಮಸ್ಯೆ ಹೇಳಿದರೂ ಯಾರೂ ಸ್ಪಂದಿಸುತ್ತಿಲ್ಲ. ಬಸ್ ಸೇವೆಯೂ ಬಂದ್ ಆಗಿದೆ. ನಮಗೆ ಒಳಚರಂಡಿ ಬೇಡವೇ ಬೇಡ. | ನಾಗೇಶ ನಾಯ್ಕ ಬಗ್ಗೋಣ

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...