ಸಿನಿಮಾ

ಕಳಪೆ ರಸಗೊಬ್ಬರ ವಶ

ತಾಲೂಕಿನ ಕಸಬಾ ಹೋಬಳಿಯ ಮೇಟಗಳ್ಳಿ ಗ್ರಾಮದಲ್ಲಿ ಕಳಪೆ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಪೊಲೀಸ್ ಇಲಾಖೆ ಸಹಯೋಗದೊಂದಿಗೆ ದಾಳಿ ನಡೆಸಿದ್ದು, ಅಲ್ಲಿದ್ದ ರಸಗೊಬ್ಬರ ವಶಪಡಿಸಿಕೊಂಡಿದ್ದಾರೆ.

ಸಹಾಯಕ ಕೃಷಿ ನಿರ್ದೇಶಕ ಕೃಷ್ಣ ನೀಡಿದ ದೂರು ಅನ್ವಯ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ರೀತಿ ಅನುಮಾನಾಸ್ಪದವಾಗಿ ಯಾರಾದರೂ ಕಳಪೆ ರಸಗೊಬ್ಬರ ಮಾರಾಟ ಮಾಡುವುದು ಕಂಡುಬಂದರೆ, ಕೂಡಲೇ ಕೃಷಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ಡಾ.ಎಚ್.ಬಿ.ಮಧುಲತಾ ತಿಳಿಸಿದ್ದಾರೆ.

ದಾಳಿ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ.ಚಂದ್ರಶೇಖರ್, ಉಪ ಕೃಷಿ ನಿರ್ದೇಶಕ ಡಾ.ಧನಂಜಯ್, ಸಹಾಯಕ ಕೃಷಿ ನಿರ್ದೇಶಕರಾದ ಕೃಷ್ಣ, ಮಧುಲತಾ, ಕೃಷಿ ಅಧಿಕಾರಿಗಳಾದ ಪಿ.ಎನ್.ಜೀವನ್, ಸಿ.ಎಂ.ಕಾರ್ತಿಕ್, ಶ್ರೀನಿವಾಸ್ ಇದ್ದರು.

Latest Posts

ಲೈಫ್‌ಸ್ಟೈಲ್