ಕಸಾಪ ವಲಯ ಅಧ್ಯಕ್ಷರಾಗಿ ಮಡಿವಾಳಪ್ಪ

ಕೆಂಭಾವಿ: ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ವಲಯ ಕನ್ನಡ ಸಾಹಿತ್ಯ ಪರಿಷತ್‌ಗೆ ಶುಕ್ರವಾರ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಸ್ಪಂದನ ಶಾಲೆಯಲ್ಲಿ ತಾಲೂಕು ಕಸಾಪ ಅಧ್ಯಕ್ಷ ಶರಣಪ್ಪ ಯಳವಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ಕರೆದಿದ್ದ ಸಭೆಯಲ್ಲಿ ವಲಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಸಾಹಿತಿ ಮಡಿವಾಳಪ್ಪ ಪಾಟೀಲ್ ಹೆಗ್ಗಣದೊಡ್ಡಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ನಂತರ ಮಾತನಾಡಿದ ಹಿರಿಯ ಸಾಹಿತಿ ಲಿಂಗನಗೌಡ ಮಾಲಿ ಪಾಟೀಲ್, ವಲಯ ಸಾಹಿತ್ಯ ಪರಿಷತ್ ಮೊಟ್ಟ ಮೊದಲಿಗೆ ಕೇವಲ ಇಬ್ಬರು ಸದಸ್ಯರನ್ನು ಒಳಗೊಳಂಡ ಅತಿ ಹಳೆಯ ಸಾಹಿತ್ಯ ಪರಿಷತ್ ಎನಿಸಿದೆ. ಕ್ರಮೇಣ ಹೆಮ್ಮರವಾಗಿ ಬೆಳೆದು ಬೃಹತ್ ಸದಸ್ಯರ ಗುಂಪಿನಿAದ ಇಲ್ಲಿ ವಲಯ ಸಾಹಿತ್ಯ ಪರಿಷತ್ ಆಗಿದೆ. ವಯಲದಲ್ಲಿ ಅನೇಕ ಕವಿಗಳು, ಸಾಹಿತಿಗಳು, ನಾಟಕಕಾರರು ಆಗಿ ಹೋಗಿದ್ದು ಸಾಹಿತ್ಯದ ಕೃಷಿಯ ತವರೂರು ಎಂದರೆ ತಪ್ಪಾಗಲಾರದು. ವಲಯ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಡಿವಾಳಪ್ಪ ಪಾಟೀಲ್ ಪರಿಷತ್ ಇನ್ನಷ್ಟು ಬೆಳೆಯುವಂತೆ ಶ್ರಮಿಸಲಿ ಎಂದು ಹೇಳಿದರು.

ಕಸಾಪ ನೂತನ ಅಧ್ಯಕ್ಷ ಮಡಿವಾಳಪ್ಪಗೌಡ ಪಾಟೀಲ ಮಾತನಾಡಿ, ತಾಲೂಕಿನ ಎಲ್ಲ ಸಾಹಿತ್ಯಾಭಿನಿಗಳ ಸಹಕಾರದಿಂದ ಮುಂಬರುವ ದಿನಗಳಲ್ಲಿ ಪಟ್ಟಣದಲ್ಲಿ ತಾಲೂಕು ಸಮ್ಮೇಳನ ಹಮ್ಮಿಕೊಳ್ಳಲು ಯೋಜನೆ ರೂಪಿಸುವುದಾಗಿ ತಿಳಿಸಿದರು. ಪ್ರಕಾಶ ಅಂಗಡಿ ಪ್ರಾಸ್ತಾವಿಕ ಮಾತನಾಡಿದರು. ಶಹಾಪುರ ತಾಲೂಕು ಕಸಾಪ ಅಧ್ಯಕ್ಷ ರವೀಂದ್ರ ಹೊಸಮನಿ, ಸುರಪುರ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಶಾಂತಪ್ಪ ಬೂದಿಹಾಳ, ನಿಂಗನಗೌಡ ದೇಸಾಯಿ, ಶರಣಬಸವ ಬಿರಾದಾರ, ನಬಿಲಾಲ್ ಮಕಾಂದಾರ, ಡಿ.ಸಿ.ಪಾಟೀಲ್, ಡಾ.ಯಂಕನಗೌಡ ಪೊಲೀಸ್ ಪಾಟೀಲ್ ಇತರರಿದ್ದರು. ವೆಂಕಟೇಶಗೌಡ ಸ್ವಾಗತಿಸಿದರು, ದೇವು ಹೆಬ್ಬಾರ ವಂದಿಸಿದರು. ಎಚ್.ವೈ.ರಾಠೋಡ ನಿರೂಪಣೆ ಮಾಡಿದರು.

Share This Article

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…

ತೂಕ ಇಳಿಕೆಗೆ ನಂಬರ್​ 1 ಹಣ್ಣು! ಇದನ್ನು ತಿಂದರೆ ಸಾಕು ಬೆಣ್ಣೆಯಂತೆ ಕರಗಿ ಹೋಗುತ್ತದೆ ಬೊಜ್ಜು

ಎಷ್ಟೇ ಪ್ರಯತ್ನಪಟ್ಟರು ತೂಕ ಇಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವೇ? ಬೊಜ್ಜು ಸಮಸ್ಯೆಯಿಂದ ಬೇಸತ್ತಿದ್ದೀರಾ? ಈ ಒಂದು ಹಣ್ಣನ್ನು ತಿಂದರೆ…

ನಿಮ್ಮ ಅಂಗೈನಲ್ಲಿ ಈ ರೀತಿ ತ್ರಿಕೋನ ಚಿಹ್ನೆ ಇದೆಯಾ? ಇದ್ರೆ ಏನಾಗುತ್ತೆ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…