ಚಾಮರಾಜನಗರ: ತಾಲೂಕಿನ ಬಂಡಿಗೆರೆ ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 120ಕ್ಕೂ ಹೆಚ್ಚು ಎಮ್ಮೆಗಳನ್ನು ಹಿಂದು ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತರು ಬುಧವಾರ ರಕ್ಷಿಸಿದ್ದಾರೆ.

ಕ್ಯಾಂಟರ್‌ನಲ್ಲಿ ತಮಿಳುನಾಡಿಗೆ ಎಮ್ಮೆಗಳ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಿಂದು ರಾಷ್ಟ್ರ ರಕ್ಷಣಾಪಡೆಯ ಕಾರ್ಯಕರ್ತರು ವಾಹನವನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಚಾಮರಾಜನಗರ ಪೂರ್ವ ಠಾಣೆ ಪೊಲೀಸರ ಭೇಟಿ ನೀಡಿ, ಕ್ಯಾಂಟರ್ ಮತ್ತು 120ಕ್ಕೂ ಅಧಿಕ ಎಮ್ಮೆಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮವಹಿಸಿದ್ದಾರೆ.
TAGGED:chamarajanagara news