ಸಿನಿಮಾ

ಕಾಂಗ್ರೆಸ್‌ನದ್ದು ಸುಳ್ಳಿನ ಗ್ಯಾರಂಟಿ ಪ್ರಣಾಳಿಕೆ: ನವಿಲೆ ಅಣ್ಣಪ್ಪ

ಹಾಸನ : ಚುನಾವಣೆ ಹಿನ್ನೆಲೆಯಲ್ಲಿ ಜನರ ಕಣ್ಣಿಗೆ ಮಣ್ಣೆರಚಲು ಕಾಂಗ್ರೆಸ್ ಸುಳ್ಳಿನ ಗ್ಯಾರಂಟಿಗಳ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ನವಿಲೆ ಅಣ್ಣಪ್ಪ ಟೀಕಿಸಿದರು.
ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ. ಮೀಸಲಾತಿಯನ್ನು ಶೇ.75ರಷ್ಟು ಹೆಚ್ಚಳ ಮಾಡುವುದಾಗಿ ಜನರನ್ನು ಮರುಳು ಮಾಡಲು ಹೊರಟಿದೆ. ಸದನದಲ್ಲಿ ಸಂವಿಧಾನ ತಜ್ಞರಂತೆ ಭಾಷಣ ಮಾಡುವ ಸಿದ್ದರಾಮಯ್ಯನವರೇ ದಾರಿ ತಪ್ಪಿಸುತ್ತಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿರುವುದು ಖಂಡನೀಯ. ಈ ಸಂಘಟನೆ ಹಿಂದುತ್ವದ ಪರವಾಗಿ ರಾಷ್ಟ್ರವಾದಿ ಸಂಘಟನೆಯಾಗಿದೆ. ಹಿಂದು ಧಾರ್ಮಿಕ ಬೆಳವಣಿಗೆಗೆ ಸಂಘಟನೆ ಕೆಲಸ ಮಾಡುತ್ತಿದ್ದು ಯಾವುದೇ ಸಮಾಜಘಾತಕ ಕೃತಿಯಲ್ಲಿ ಭಾಗಿಯಾಗಿಲ್ಲ. ಇದೊಂದು ಮೋಸದ ರಾಜಕೀಯ ತಂತ್ರಗಾರಿಕೆ. ಪಿ.ಎಫ್.ಐ ಬ್ಯಾನ್ ಮಾಡುವ ಕುರಿತು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ತಿಳಿಸಿದೆ. ಆದರೆ, ಕೇಂದ್ರ ಸರ್ಕಾರ ಈಗಾಗಲೇ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದು, ಈ ಬಗ್ಗೆ ಮಾಹಿತಿ ಇಲ್ಲದ ಕಾಂಗ್ರೆಸ್‌ವರು ಪ್ರಣಾಳಿಕೆಯಲ್ಲಿ ಇದನ್ನು ಸೇರಿಸಿರುವುದು ಹಾಸ್ಯಸ್ಪದ ಎಂದರು.
ಹಾಸನ ಕ್ಷೇತ್ರದಲ್ಲಿ ಪ್ರೀತಂಗೌಡ ಅವರ ಗೆಲುವು ನಿಶ್ಚಿತವಾಗಿದ್ದು ಸಮರ್ಥವಾಗಿ ಪ್ರತಿಪಕ್ಷಗಳನ್ನು ಎದುರಿಸಿ ಈ ಬಾರಿಯೂ ಶಾಸಕರಾಗಿ ಆಯ್ಕೆಯಾಗಲಿದ್ದಾರೆ. ಅವರೊಂದಿಗೆ ಪಕ್ಷದ ಹಿರಿಯ ನಾಯಕರಿದ್ದು, ಸಹಕಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರೆ ವೇದಾವತಿ ಹಾಗೂ ಬಿಜೆಪಿ ಮುಖಂಡ ಪ್ರಕಾಶ್ ಹಾಜರಿದ್ದರು.

Latest Posts

ಲೈಫ್‌ಸ್ಟೈಲ್