More

  ಕಾಂಗ್ರೆಸ್‌ನ ಪ್ರಕೃತಿ ವಿಕೋಪ ನಿರ್ವಹಣಾ ತರಬೇತಿ ತಂಡ ರಚನೆ

  ಪುತ್ತೂರು: ಪುತ್ತೂರು ಕಾಂಗ್ರೆಸ್‌ನಿಂದ ಪ್ರಕೃತಿ ವಿಕೋಪ ನಿರ್ವಹಣಾ ತರಬೇತಿ ತಂಡ ಮಾಡಲಾಗಿದ್ದು, ಇದರ ಉದ್ಘಾಟನೆಯು ಇತ್ತೀಚೆಗೆ ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
  ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ತಂಡದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರಕೃತಿ ವಿಕೋಪದಡಿಯಲ್ಲಿ ಯಾವುದೇ ಸಂದರ್ಭದಲ್ಲಿ ಈ ತಂಡ ಸದಾ ಸನ್ನದ್ಧವಾಗಿದ್ದು ಆ ಮೂಲಕ ಸಮಾಜಕ್ಕೆ ಸೇವೆಯನ್ನು ನೀಡಲು ಮುಂದಾಗಿದೆ. ಕೇವಲ ಫೋಸ್ ಕೊಡುವ ತಂಡವಾಗದೆ ಸಮಾಜಕ್ಕೆ ಸಹಾಯ ಸಹಕಾರ ನೀಡುವ ಮೂಲಕ ಕಾಂಗ್ರೆಸ್ ತಂಡ ಎಂದರೆ ಹೀಗಿರಬೇಕು ಎಂಬ ವಿಶ್ವಾಸ ಮೂಡಿಬರಬೇಕು ಎಂದರು.
  ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮಾತನಾಡಿ, ಕಾಂಗ್ರೆಸ್ ಪ್ರಕೃತಿ ವಿಕೋಪ ತಂಡವು ಅತ್ಯುತ್ತಮ ಸೇವಾ ತಂಡವಾಗಿ ಮೂಡಿಬರಲಿ. ನಮಗೆ ಅವಶ್ಯಕವಾಗಿ ಪ್ರಕೃತಿಯಲ್ಲಿ ತೊಂದರೆ ಉಂಟಾದಾಗ ಅವರ ರಕ್ಷಣೆಗೆ ಹೋಗಿ ಈ ತಂಡ ಸಹಾಯಹಸ್ತ ನೀಡುವಂತಾಗಬೇಕು ಎಂದರು.
  ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು, ಕಿಸಾನ್ ಘಟಕದ ಅಧ್ಯಕ್ಷ ಮುರಳೀಧರ ಕೆಮ್ಮಾರ, ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್, ಕಾರ್ಮಿಕ ಘಟಕದ ಅಧ್ಯಕ್ಷೆ ಶರೂನ್ ಸಿಕ್ವೇರಾ, ಪುತ್ತೂರು ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ, ಕಾಂಗ್ರೆಸ್ ಮುಖಂಡ ಶಿವರಾಮ ಆಳ್ವ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ರೈ ಅಂಕೊತ್ತಿಮಾರ್, ಕಲಾವಿದ ಕೃಷ್ಣಪ್ಪ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಸನಮ್ ನಝೀರ್, ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೀತಾ ಭಟ್, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರೀಸ್ ಮಸ್ಕರೇನಸ್, ಮೆಲ್ವಿನ್ ಮೊಂತೆರೊ ಮೊದಲಾದವರು ಉಪಸ್ಥಿತರಿದ್ದರು.

  See also  ಕರಾವಳಿಯಲ್ಲಿ ಭಾರಿ ಮಳೆ, ತಗ್ಗು ಪ್ರದೇಶಗಳು ಜಲಾವೃತ, ಮನೆಗಳಿಗೆ ನುಗ್ಗಿದ ನೀರು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts