ದೇಶ ಮತ್ತು ರಾಜ್ಯದಲ್ಲಿನ ಕಾಂಗ್ರೆಸ್​ ಸಾಧನೆಗಳನ್ನು ಜನರಿಗೆ ತಿಳಿಸಲು ಎಸ್​. ರವಿಕುಮಾರ್​ ಕರೆ

ಚಿತ್ರದುರ್ಗ: ದೇಶ ಮತ್ತು ರಾಜ್ಯದಲ್ಲಿ ಆಗಿರುವ ಕಾಂಗ್ರೆಸ್ ಸಾಧನೆಗಳನ್ನು ಜನರಿಗೆ ತಿಳಿಸಬೇಕೆಂದು ಲೋಕಸಭಾ ಚುನಾವಣೆ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಎಸ್. ರವಿಕುಮಾರ್ ಪಕ್ಷದ ಕಾರ‌್ಯಕರ್ತರಿಗೆ ಮನವಿ ಮಾಡಿದರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ರಾಜೀವ್‌ಗಾಂಧಿ ನೇತೃತ್ವದ ಹಾಗೂ ಎರಡು ಅವಧಿ ಯುಪಿಎ ಆಡಳಿತಾವಧಿ ದೇಶದಲ್ಲಿ ಸಾಕಷ್ಟು ಪ್ರಗತಿ ಆಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಫಾತ್ಯರಾಜನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್. ಮೈಲಾರಪ್ಪ, ಕೆಪಿಸಿಸಿ ಕಾರ್ಯದರ್ಶಿ ಎಂ. ಜಯಣ್ಣ ಮತ್ತಿತರರು ಹಾಜರಿದ್ದರು.