ಹಾಸನ: ಜಿಲ್ಲೆಯ ಬೇಲೂರು, ಆಲೂರು, ಸಕಲೇಶಪುರ ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಶಾಶ್ವತ ಪರಿಹಾರ ಒದಗಿಸುವಂತೆ ಜಯ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ಆರ್ ಸೋಮೇಶ್ ಒತ್ತಾಯಿಸಿದರು.
ಮಲೆನಾಡು ಭಾಗದಲಿ ್ಲ ಹಲವು ದಶಕಗಳಿಂದ ಕಾಡಾನೆಗಳ ಸಮಸ್ಯೆ ಅನೇಕ ರೀತಿಯ ಸಮಸ್ಯೆ, ತೊಂದರೆ ತಂದೊಡ್ಡಿದೆ. ಇದರಿಂದ ರೈತರು, ಕಾಫಿ ಬೆಳೆಗಾರರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ, ಅನುಭವಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಡಿಸಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಟಿಯಲ್ಲಿ ಎಚ್ಚರಿಸಿದರು.
ಕಾಡಾನೆ ಸಮಸ್ಯೆ ಜೀವಂತವಾಗಿ ಉಳಿಯಲು ಜಿಲ್ಲಾಡಳಿತ, ಅರಣ್ಯ ಇಲಾಖೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳದೇ ಉದಾಸೀನ ಅನುಸರಿಸಿರುವುದೇ ಕಾರಣ. ಇದು ಬದಲಾಗಬೇಕು.ಇತ್ತೀಚಿನ ದಿನಗಳಲ್ಲಿ ವಿವಿಧ ಗ್ರಾಮಗಳಲ್ಲಿ ನೂರಾರು ಕಾಡಾನೆಗಳು ಬೀಡು ಬಿಟ್ಟಿದ್ದು, ಕಾಫಿ ಗಿಡಗಳನ್ನು ತುಳಿದು, ಬಾಳೆ ಇತ್ಯಾದಿ ಬೆಳೆ ತಿಂದು ನಾಶಪಡಿಸುತ್ತಿವೆ. ಜನವಸತಿ ಪ್ರದೇಶಗಳಲ್ಲಿ ಓಡಾಡುತ್ತಾ ಆತಂಕದ ವಾತಾವರಣ ಸೃಷ್ಟಿ ಮಾಡಿದ್ದು, ಜೀವ ಹಾನಿಗೂ ಕಾರಣವಾಗಿದೆ ಎಂದು ದೂರಿದರು.
10 ವರ್ಷಗಳ ಹಿಂದೆ ಜಯ ಕರ್ನಾಟಕ ಸಂಘಟನೆಯಿಂದ ಆನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಬಾಳ್ಳುಪೇಟೆಯಿಂದ ಹಾಸನದವರೆಗೂ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗಿತ್ತು. ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಕಾಡಾನೆಯಿಂದ ಬೆಳೆ ನಷ್ಟ ಸಂಭವಿಸಿದ ರೈತರಿಗೆ ಹಾಗೂ ಕಾಫಿ ಬೆಳೆಗಾರರಿಗೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದರು.
ಈಗಲಾದರೂ ಜಿಲ್ಲಾಡಳಿತ ಅರಣ್ಯ ಇಲಾಖೆ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸುವ ಮೂಲಕ ರೈತರು ಕಾಫಿ ಬೆಳೆಗಾರರ ಹಿತ ಕಾಯಬೇಕು. ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡಬೇಕು. ಮುಂದಿನ 10 ದಿನಗಳೊಳಗೆ ಸೂಕ್ತ ಕ್ರಮಕೈಗೊಳ್ಳದೆ ಇದ್ದಲ್ಲಿ ಡಿಸಿ ಕಚೇರಿ ಎದುರು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಗಂ, ಅಬ್ದುಲ್ ರಜಾಕ್, ಚೇತನ್, ಸಂದೇಶ್, ಸಮೀರ್, ರಾಜು ಇದ್ದರು
ಕಾಡಾನೆಗಳ ಉಪಟಳ ಶಾಶ್ವತ ಪರಿಹಾರಕ್ಕೆ ಒತ್ತಾಯ
You Might Also Like
ಈ 3 ನಕ್ಷತ್ರದವರು ಕೋಟೇಶ್ವರ ಯೋಗದೊಂದಿಗೆ ಹುಟ್ತಾರೆ! ಇವರನ್ನು ಅರಸಿ ಬರುತ್ತೆ ಅಪಾರ ಸಂಪತ್ತು | Birth of Stars
Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…
ನಿಮ್ಮ ಕನಸಿನಲ್ಲಿ ಹಾವು ಕಾಣಿಸಿಕೊಂಡರೆ ಅದರರ್ಥ ಏನು ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿ ಸಂಗತಿ | Snakes in a Dream
Snakes in a Dream : ಯಾವುದೇ ವ್ಯಕ್ತಿ ನಿದ್ರೆಗೆ ಜಾರಿದಾಗ ಸಹಜವಾಗಿ ಎದುರಾಗುವ ಸಂಗತಿಯೆಂದರೆ,…
ಈ ವಸ್ತುಗಳು ನಿಮ್ಮ ಮನೆಯಲ್ಲಿದ್ದರೆ ಈ ಕೂಡಲೇ ಹೊರಗೆ ಎಸೆಯಿರಿ… ಇಲ್ಲದಿದ್ರೆ ಅಪಾಯ ತಪ್ಪಿದ್ದಲ್ಲ! Household items
Household items : ಎಂದಾದರೂ ಮನೆಯನ್ನು ವಿಷಪೂರಿತಗೊಳಿಸುವ ವಸ್ತುಗಳು ಬಗ್ಗೆ ನೀವು ಯೋಚನೆ ಮಾಡಿದ್ದೀರಾ? ಮಾರುಕಟ್ಟೆಯಲ್ಲಿ…