26.8 C
Bangalore
Friday, December 13, 2019

ಕಾನೂನು ಪಾಲನೆಯಿಂದ ಒಳಿತು

Latest News

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ: ಈಕೆಯ ದಿಟ್ಟತನಕ್ಕೆ ನೆಟ್ಟಿಗರ ಶಹಬ್ಬಾಸ್​ ಗಿರಿ!

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ...

ದೊಡ್ಡಬಳ್ಳಾಪುರ: ಸಾರ್ವಜನಿಕರ ಹಿತದೃಷ್ಟಿಯಿಂದಲೇ ಸರ್ಕಾರ ಕಾನೂನು ರೂಪಿಸುತ್ತದೆೆ. ಕಾನೂನು ಪಾಲನೆ ಮಾಡಿದರೆ ಜನರಿಗೆ ಯಾವುದೂ ಹೊರೆಯಾಗುವುದಿಲ್ಲ ಎಂದು ಎಸ್‌ಪಿ ರವಿ ಡಿ.ಚನ್ನಣ್ಣನವರ್ ಹೇಳಿದರು.
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಡಿಎಲ್ ಮೇಳದಲ್ಲಿ ಮಾತನಾಡಿದರು.
ಕೊಲೆಯಿಂದಾಗಿ ಜಿಲ್ಲೆಯಲ್ಲಿ ಕಳೆದ ವರ್ಷ ಹತ್ಯೆಗೀಡಾದವರ ಸಂಖ್ಯೆ 60. ಆದರೆ ಅಪಘಾತದಲ್ಲಿ 706 ಮಂದಿ ಸಾವಿಗೀಡಾಗಿದ್ದಾರೆ. ಗ್ರಾಮಗಳಲ್ಲಿ ಒಂದು ಹತ್ಯೆಯಾದರೆ ಉಂಟಾಗುವಂತಹ ಆತಂಕ, ಜಾಗೃತಿ ಅಪಘಾತದಲ್ಲಿ ಮಡಿದವರ ಕುರಿತು ಉಂಟಾಗದಿರುವುದು ವಿಪರ್ಯಾಸ. ದಂಡಕ್ಕೆ ಹೆದರಿ ಪೊಲೀಸರಿಗೆ ಕಾನೂನು ಪಾಲನೆ ಮಾಡುವುದಲ್ಲ. ಸಾರಿಗೆ ನಿಯಮ ಪಾಲನೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಎಂದರು.
ಸಾರಿಗೆ ನಿಯಮ ಪಾಲನೆ ಮೊದಲ ಹಂತವಾಗಿ ಜಾಗೃತಿ ಮೂಡಿಸುವುದು, ಗ್ರಾಮೀಣ ಜನತೆಗೆ ಸಹಾಯವಾಗುವಂತೆ ಮಧ್ಯವರ್ತಿಗಳ ಹಾವಳಿ ತಪ್ಪಿಸುವುದು ಹಾಗೂ ನಿಯಮದ ದರದಲ್ಲಿ ಸೇವೆ ಒದಗಿಸಲು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಮೇಳ ಆರಂಭಿಸಲಾಗಿದ್ದು, 100 ದಿನಗಳ ನಿರಂತರ ಪ್ರಕ್ರಿಯೆಯಾಗಿದೆ. ಹಾಗೆಂದು ಜಾಗೃತಿಗೆ ಸೀಮಿತವಾಗುವುದಿಲ್ಲ. ಮುಂದಿನ ಹಂತವಾಗಿ ಕಾನೂನು ಪಾಲನೆ ಮಾಡದವರ ವಿರುದ್ಧ ಕ್ರಮ ಆರಂಭಿಸಲಾಗುವುದು. ಮೊದಲಿಗೆ ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡುವ ಪಾಲಕರಿಗೆ, ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ದೇವನಹಳ್ಳಿ ಸಹಾಯಕ ಸಾರಿಗೆ ಅಧಿಕಾರಿ ಉಮೇಶ್ ಮಾತನಾಡಿ, ಅಪಘಾತ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘನೆ ಕಾನೂನನ್ನು ಬಿಗಿಗೊಳಿಸಲಾಗುತ್ತಿದೆ. ದಂಡಕ್ಕೆ ಹೆದರಿ ಕಾನೂನು ಪಾಲನೆ ಮಾಡುವುದಕ್ಕಿಂತ ಸ್ವ ಇಚ್ಛೆಯಿಂದ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕಿದೆ ಎಂದರು.
ಅಪ್ರಾಪ್ತರಿಗೆ ವಾಹನ ಚಾಲನೆಗೆ ಅವಕಾಶ ನೀಡಿದರೆ ಎದುರಿಸಬೇಕಾಗುವ ತೊಂದರೆ, ಕಾನೂನಿನಲ್ಲಿರುವ ಕಠಿಣ ಕ್ರಮದ ಬಗ್ಗೆ ಪಾಲಕರು ಹಾಗೂ ಶಿಕ್ಷಕರು ಅರಿವು ಮೂಡಿಸಬೇಕಿದೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸುರೇಶ್ ಹೇಳಿದರು.
ಇನ್‌ಸ್ಪೆಕ್ಟರ್ ರಾಘವ ಎಸ್.ಗೌಡ, ಕಾಲೇಜಿನ ಉಪಪ್ರಾಂಶುಪಾಲ ಮಹದೇವಯ್ಯ, ಸಬ್‌ಇನ್‌ಸ್ಪೆಕ್ಟರ್ ಕೆ.ವೆಂಕಟೇಶ್, ಗ್ರಾಮಾಂತರ ಠಾಣೆ ಸಬ್‌ಇನ್‌ಸ್ಪೆಕ್ಟರ್ ಅಶೋಕ್, ದೊಡ್ಡಬೆಳವಂಗಲ ಠಾಣೆ ಎಸ್‌ಐ ಮಂಜೇಗೌಡ ಮತ್ತಿತರರಿದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....