ಬಾಗಲಕೋಟೆ: ನವನಗರದ ಜಿಲ್ಲಾ ಸಶಸ್ತç ಮೀಸಲು ಪಡೆ ಆವರಣದಲ್ಲಿ ಕಾನೂನು ವನ ನಿರ್ಮಾಣ ಮಾಡಲಾಗುತ್ತಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ಎನ್.ವ್ಹಿ.ವಿಜಯ ಗಿಡ ನೆಟ್ಟು ಅದಕ್ಕೆ ನೀರುಣಿಸುವ ಮೂಲಕ ಶುಕ್ರವಾರ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಽಕಾರ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಿರ್ಮಾಣ ಮಾಡಲಾದ ಕಾನೂನು ವನದಲ್ಲಿ ನೀಮ, ನೆರಳೆ, ಬೀಲ್ವಾ, ಸ್ಪತೋಡಿಯಾ, ಗೋಣಿ, ಶ್ರೀಗಂಧ, ಆಕಾಶ ಮಲ್ಲಿಗೆ, ಪಂಗಾಮಿಯಾ ಪಿನ್ನಾಮಿಯಾ ಪಿನ್ನಾಟಾ ಹಾಗೂ ಶ್ರೀಗಂಧ ಸೇರಿದಂತೆ ವಿವಿಧ ಮರಗಳನ್ನು ಬೆಳೆಸು ಉದ್ದೇಶ ಹೊಂದಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಽಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಅಮರನಾಥ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಽಕಾರಿ ರುಥ್ರೇನ್ ಪಿ, ಜಿಲ್ಲಾ ಕಾನೂನು ಸೇವಾ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಉಪ ಅರಣ್ಯ ಸಂರಕ್ಷಣಾಽಕಾರಿ ಸಿ.ಜಿ.ಮಿರ್ಜಿ, ಸಹಾಯಕ ಅರಣ್ಯ ಸಂರಕ್ಷಣಾಽಕಾರಿ ರೂಪಾ ವಿ.ಕೆ ಉಪಸ್ಥಿತರಿದ್ದರು.