ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರೇಟ್, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಕೆಎಲ್‌ಇ ಜೀರಗೆ ಸಭಾ ಭವನದಲ್ಲಿ ಬುಧವಾರ ಮಕ್ಕಳ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಮಕ್ಕಳ ರಕ್ಷಣೆ, ಪೋಕ್ಸೊ ಹಾಗೂ ಇತ್ತೀಚೆಗೆ ಮಕ್ಕಳ ಕಳ್ಳರ ಕುರಿತು ಪ್ರಸಾರವಾಗುತ್ತಿರುವ ಸುದ್ದಿಗಳ ಕುರಿತು ಅರಿವು ಅಗತ್ಯ. ಇನ್ನಿತರ ಅಪರಾಧಗಳಿಂದ ಮಕ್ಕಳ ರಕ್ಷಣೆ ಮತ್ತು ಪಾಲಕರ, ಶಿಕ್ಷಕರ ಹಾಗೂ ಪೊಲೀಸ್ ಇಲಾಖೆ ಜವಾಬ್ದಾರಿ ಕುರಿತು ತಿಳಿಹೇಳಿದರು. ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಡಿಸಿಪಿ ಸ್ನೇಹ ಪಿ.ವಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಶಿವಾನಂದ ಮಾಸ್ತಿಹೊಳಿ, ಡಿಡಿಪಿಐ ಬಸವರಾಜ ನಲತವಾಡ, ಬಿಇಒ ವೈ.ಜೆ.ಭಜಂತ್ರಿ, ಕೆಎಸ್‌ಆರ್‌ಟಿಸಿ ಡಿಸಿ ಪಿ.ವೈ.ನಾಯ್ಕ, ಆರ್‌ಟಿಒ ಶಿವಾನಂದ ಮಗದುಮ್ಮ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಜೆ.ಟಿ.ಲೋಕೇಶ ಇತರರಿದ್ದರು.