ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ವಿಧಾನಸಭಾ ಕ್ಷೇತ್ರದ ಪದಾಧಿಕಾರಿಗಳ ಸಭೆ ಬುಧವಾರ ನಡೆಯಿತು. ಈ ವೇಳೆ ಮಾತನಾಡಿದ ಡಾ.ಎಂ.ಚಂದ್ರಪ್ಪ, ನನ್ನನ್ನು ನಂಬಿ ಬಂದವರಿಗೆ ಎಂದಿಗೂ ಮೋಸ ಮಾಡಿಲ್ಲ. ಅಂತಹ ರಾಜಕೀಯ ನನಗೆ ಗೊತ್ತಿಲ್ಲ. ಗೋವಿಂದ ಎಂ ಕಾರಜೋಳ ಅವರಿಗೆ ನನ್ನ ಕ್ಷೇತ್ರದಲ್ಲಿ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದರು.
ಪುತ್ರನಿಗೆ ಟಿಕೆಟ್ ತಪ್ಪಿದ್ದಕ್ಕೆ ಆವೇಶದಲ್ಲಿ ಮಾತನಾಡಿರಬಹುದು. ಆದರೆ, ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸುವುದೇ ನಮ್ಮ ಗುರಿ ಎಂದರು.