16 C
Bangalore
Saturday, December 7, 2019

ಕಾರಣಾಂತರಗಳಿಂದ ಬೆಳಗಾವಿ ಅಧಿವೇಶನಕ್ಕೆ ಬ್ರೇಕ್

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಬೆಳಗಾವಿ: ರಾಜ್ಯದಲ್ಲಿ ನೆರೆ ಪರಿಹಾರ ಕಾರ್ಯ, ಬಜೆಟ್ ಅನುಮೋದನೆ ಪಡೆಯುವುದು ಇನ್ನಿತರ ಕಾರಣಗಳಿಂದಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸುವುದನ್ನು ಕೈ ಬಿಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳು ಮತ್ತು ರೈತರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಜಿಲ್ಲಾಡಳಿತ ಸಂಪೂರ್ಣ ನೆರೆ ಪರಿಹಾರ ಕೆಲಸದಲ್ಲಿ ತೊಡಗಿಕೊಂಡಿದೆ. ಇಂತಹ ಸಂದರ್ಭದಲ್ಲಿ ಸುವರ್ಣ ಸೌಧದಲ್ಲಿ ಅಧಿವೇಶನ ಆರಂಭಿಸಿದರೆ ಜಿಲ್ಲಾಡಳಿತ ಪರಿಹಾರ ಕೆಲಸ ಬಿಟ್ಟು ಅಧಿವೇಶನ ಕೆಲಸ ಮಾಡಬೇಕಾಗುತ್ತದೆ.ಇದರಿಂದ ಸಂತ್ರಸ್ತರಿಗೆ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಅಧಿವೇಶನ ನಡೆಸುವುದನ್ನು ಕೈಬಿಡಲಾಗಿದೆ ಎಂದರು.

ಬಿಜೆಪಿ ಸರ್ಕಾರದ ಆಡಳಿತವಿದ್ದಾಗ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭಿಸಲಾಗಿತ್ತು. ಹಾಗಾಗಿ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ. ಪ್ರವಾಹದಿಂದ ಜನರು ಸಂಕಷ್ಟದಲ್ಲಿರುವ ಸಂದರ್ಭ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಸೂಕ್ತವಲ್ಲ ಎಂದರು.

ಈಗಾಗಲೇ ಬೆಳಗಾವಿ ಸುವರ್ಣ ಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಕೆಲ ಇಲಾಖೆಗಳನ್ನು ಸ್ಥಳಾಂತರಿಸಲು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಸಚಿವ ಸಂಪುಟ ಸಭೆಗಳನ್ನು ಸುವರ್ಣ ಸೌಧದಲ್ಲಿ ನಡೆಸಲಾಗುವುದು ಎಂದು ಹೇಳಿದರು.

ನಾಯಕನಿಲ್ಲದ ಕಾಂಗ್ರೆಸ್: ಪ್ರತಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕನಿಲ್ಲದೆ ಸಮಸ್ಯೆ ಎದುರಿಸುತ್ತಿದೆ. ಇಂತಹ ಸಂದರ್ಭದಲ್ಲಿ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿಕೊಳ್ಳಲು ಮತ್ತು ಜನರನ್ನು ದಾರಿ ತಪ್ಪಿಸಲು ಸಮಾವೇಶಗಳನ್ನು ನಡೆಸುತ್ತಿದ್ದಾರೆ. ನೆರೆ ಸಂತ್ರಸ್ತರ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಆರಂಭಿಸಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರು ಒಗ್ಗಟ್ಟಾದರೆ ಜಿಲ್ಲಾ ವಿಭಜನೆ

ಸಮಗ್ರ ಅಭಿವೃದ್ಧಿ, ಆಡಳಿತಾತ್ಮಕ ಹಿತದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಗಾಗಿ ಪ್ರಯತ್ನಗಳು ನಡೆಯುತ್ತಿವೆ. ಆದರೆ, ಜಿಲ್ಲೆಯ 18 ವಿಧಾನಸಭಾ ಕ್ಷೇತ್ರದ ಶಾಸಕರು ಒಗ್ಗಟ್ಟಿನಿಂದ ಮುಂದೆ ಬಂದರೆ ಜಿಲ್ಲೆ ವಿಭಜನೆಗೆ ಸರ್ಕಾರ ಕ್ರಮ ವಹಿಸಲಿದೆ. ವಿಭಜನೆಗೆ ಕೆಲ ತಾಂತ್ರಿಕ, ಆಡಳಿತಾತ್ಮಕ ಸೇರಿದಂತೆ ಇನ್ನಿತರರ ಸಮಸ್ಯೆಗಳು ಇವೆ. ಅವುಗಳನ್ನು ಪರಿಹರಿಸಿ ವಿಭಜನೆ ಮಾಡಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...