ಕಾರಿನಲ್ಲಿ ಜಾನುವಾರು ಕಳ್ಳತನ

ಸೋಮವಾರಪೇಟೆ ಪಟ್ಟಣದಲ್ಲಿ ಬೀಡಾಡಿ ದನಗಳ ಕಳ್ಳತನವಾಗುತ್ತಿರುವ ಬಗ್ಗೆ ಮೂಡಿದ್ದ ಅನುಮಾನ ನಿಜವಾಗಿದೆ. ಸೋಮವಾರ ಮಧ್ಯರಾತ್ರಿ ಜೈಲೊ ಕಾರಿನಲ್ಲಿ ಜಾನುವಾರುಗಳನ್ನು ತುಂಬಿಕೊಂಡು ಹೋಗಿರುವ ದನಗಳ್ಳರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರು ದೃಶ್ಯಾವಳಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.