ಕಾರ್ಮೋಡ ಸರಿಸಿದ ಅದ್ವಿತಿ

Latest News

ಸ್ವಸ್ಥ ಸಮಾಜಕ್ಕೆ ರೆಡ್‌ಕ್ರಾಸ್‌ನಿಂದ ಕೊಡುಗೆ

ಹಾಸನ: ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸ್ವಸ್ಥ ಸಮಾಜ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ ವಿಷಯಗಳಲ್ಲಿ ಫೇಲ್​ ಆದರೂ ವಿಮಾನ ಮಾದರಿಗಳನ್ನು ತಯಾರಿಸಿದ ಹುಡುಗ!

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​...

ದೇಶ ದ್ರೋಹ ಪ್ರಕರಣ ದಾಖಲಿಸಲು ಒತ್ತಾಯ

ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಒಕ್ಕಣೆಯ ಕೈಪಿಡಿ ತಯಾರಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್...

ಬಾಲ್ಯದ ಜೀವನವೇ ಚೆಂದ

ಮಂಡ್ಯ: ಯಾವುದೇ ರೀತಿಯ ಒತ್ತಡವಿಲ್ಲದೆ, ಮುಕ್ತವಾಗಿ ಆಲೋಚಿಸುವ ಬಾಲ್ಯದ ಜೀವನವೇ ಚೆಂದ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಭಿಪ್ರಾಯಪಟ್ಟರು. ನಗರದ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ...

ಬಾಲಜಗತ್ ಶಾಲೆಯಲ್ಲಿ ಆಹಾರ ಮೇಳ

ಕೆ.ಆರ್.ಸಾಗರ: ಇಲ್ಲಿನ ಹುಲಿಕೆರೆ-ಕೆ.ಆರ್.ಸಾಗರ ರಸ್ತೆಯ ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಗುರುವಾರ ವಿದ್ಯಾರ್ಥಿಗಳಿಗೆ ಆಹಾರ ಮೇಳ ಏರ್ಪಡಿಸಲಾಗಿತ್ತು. ಆದಿಚುಂಚನಗಿರಿ ಮೈಸೂರು...

ಬೆಂಗಳೂರು: ಸಿನಿಮಾ ಹಾಡುಗಳ ಸಾಹಿತ್ಯವನ್ನೇ ಶೀರ್ಷಿಕೆಯನ್ನಾಗಿಸಿಕೊಂಡು ಹಲವಾರು ಚಿತ್ರಗಳು ಈಗಾಗಲೇ ತೆರೆಕಂಡಿವೆ. ಇದೀಗ ಆ ಸಾಲಿಗೆ ಇನ್ನೊಂದು ಸಿನಿಮಾ ಸೇರ್ಪಡೆಯಾಗುತ್ತಿದೆ. ‘ಮಿಸ್ಟರ್ ಆಂಡ್ ಮಿಸೆಸ್ ರಾಮಾಚಾರಿ’ ಚಿತ್ರದ ‘ಕಾಮೋಡ ಸರಿದು ಬೆಳಕೂ ಸುರಿದ ಮೇಲೂ..’ ಹಾಡಿನ ಮೊದಲೆರಡು ಪದಗಳನ್ನೇ ಇಟ್ಟುಕೊಂಡು ಸಿನಿಮಾ ಶೀರ್ಷಿಕೆ ಮಾಡಲಾಗಿದೆ. ‘..ರಾಮಾಚಾರಿ’ ಸಿನಿಮಾದಲ್ಲಿ ನಾಯಕಿಯ ಸ್ನೇಹಿತೆಯಾಗಿ ನಟಿಸಿದ್ದ ಅದ್ವಿತಿ ಶೆಟ್ಟಿ ‘ಕಾಮೋಡ ಸರಿದು’ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಅಂದಹಾಗೆ, ‘..ರಾಮಾಚಾರಿ’ ಸಿನಿಮಾದ ಎಲ್ಲ ಹಾಡುಗಳು ಅದ್ವಿತಿಗೆ ಇಷ್ಟ. ಅದರಲ್ಲೂ ‘ಕಾಮೋಡ’ ಹಾಡಂತೂ ಸಿಕ್ಕಾಪಟ್ಟೆ ಅಚ್ಚುಮೆಚ್ಚು. ಇದೀಗ ಅದೇ ಹಾಡಿನ ಶೀರ್ಷಿಕೆಯ ಸಿನಿಮಾದಲ್ಲಿ ಅದ್ವಿತಿ ನಟಿಸುತ್ತಿದ್ದು, ಬಹುತೇಕ ಸಿನಿಮಾ ಕೆಲಸಗಳನ್ನೂ ಮುಗಿಸಿಕೊಂಡಿದ್ದಾರೆ. ‘ಇದೊಂದು ಕೌಟುಂಬಿಕ ಕಥೆಯುಳ್ಳ ಸಿನಿಮಾ. ಪ್ರಸ್ತುತ ಕಾಲಘಟ್ಟದಲ್ಲಿ ಸಂಬಂಧಗಳ ಸ್ಥಿತಿ ಹೇಗಿದೆ ಎಂಬ ಅಂಶಗಳನ್ನು ಆಧರಿಸಿ ನಿರ್ದೇಶಕರು ಸಿನಿಮಾ ಮಾಡಿದ್ದಾರೆ’ ಎಂದು ಮಾಹಿತಿ ನೀಡುತ್ತಾರೆ ಅದ್ವಿತಿ. ಅದ್ವಿತಿ ‘ಕಾಮೋಡ ಸರಿದು’ ಸಿನಿಮಾದಲ್ಲಿ ಪ್ರಿಯಾ ಹೆಸರಿನ ಪಾತ್ರ ನಿಭಾಯಿಸಿದ್ದು, ವೈದ್ಯೆಯಾಗಿ ಅವರು ಕಾಣಿಸಿಕೊಂಡಿದ್ದಾರಂತೆ. ‘ಕುದುರೆಮುಖ ಸೇರಿ ಸುತ್ತಲಿನ ಮಲೆನಾಡ ಪ್ರದೇಶದಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ಆಗಿದೆ. ಚಿತ್ರದಲ್ಲಿ ಮಳೆಯೂ ಪ್ರಧಾನವಾಗಿದ್ದು, ಆಗಸ್ಟ್ ತಿಂಗಳ ಮಳೆಯಲ್ಲಿಯೇ ಶೂಟಿಂಗ್ ಮಾಡಿದ್ದೇವೆ. ಅದೇ ಒಂದು ರೀತಿ ಚಾಲೆಂಜಿಂಗ್’ ಎನ್ನುತ್ತಾರೆ ಅದ್ವಿತಿ. ಈ ಹಿಂದೆ ಧಾರಾವಾಹಿಯೊಂದರಲ್ಲಿ ವೈದ್ಯೆಯಾಗಿ ಕಾಣಿಸಿಕೊಂಡಿದ್ದ ಅದ್ವಿತಿ ಇದೇ ಮೊದಲ ಬಾರಿಗೆ ಚಿತ್ರವೊಂದರಲ್ಲಿ ಡಾಕ್ಟರ್ ಆಗಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ಗರಡಿಯಲ್ಲಿ ಪಳಗಿದ, ಅವರ ಸಿನಿಮಾಗಳಲ್ಲಿ ಕೆಲಸ ಮಾಡಿದ ಉದಯ್ ಎಂಬುವವರು ‘ಕಾಮೋಡ ಸರಿದು’ ಸಿನಿಮಾ ಕೈಗೆತ್ತಿಕೊಂಡು ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ನಾಯಕನಾಗಿ ಮಂಜು ನಟಿಸಿದ್ದಾರೆ. ಸದ್ಯ ಚಿತ್ರೀಕರಣೋತ್ತರ ಕೆಲಸಗಳಲ್ಲಿ ಚಿತ್ರತಂಡ ಬಿಜಿಯಾಗಿದೆ. ಇಂದು (ಏ. 20) ಚಿತ್ರದ ಆಡಿಯೋ ಮತ್ತು ಟ್ರೇಲರ್ ಬಿಡುಗಡೆ ಆಗಲಿದೆ.

ಇನ್ನು ಅದ್ವಿತಿ ಬೇರೆ ಸಿನಿಮಾಗಳ ವಿಚಾರಕ್ಕೆ ಬರುವುದಾದರೆ, ‘ಫ್ಯಾನ್’ ಮತ್ತು ಥ್ರಿಲ್ಲರ್ ಶೈಲಿಯ ‘188’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸೆಟ್ಟೇರಿದ್ದ ‘ಸದ್ಗುಣ ಸಂಪನ್ನ ಮಾಧವ’ ಸಿನಿಮಾದಲ್ಲಿ ರವಿಶಂಕರ್ ಮಗಳಾಗಿಯೂ ಅವರು ಅಭಿನಯಿಸುತ್ತಿದ್ದಾರೆ.

ಪ್ರತಿಯೊಬ್ಬರ ಜೀವನದಲ್ಲೂ ಕಾಮೋಡದಂತೆ ಒಂದಲ್ಲ ಒಂದು ಸಮಸ್ಯೆಗಳು ಬಂದೇ ಬರುತ್ತವೆ. ಹಾಗಂತ ಅವು ಶಾಶ್ವತವಾಗಿರಲ್ಲ. ಗಾಳಿ ಬೀಸಿದಂತೆ ಮೋಡ ಸರಿಯುತ್ತದೆ. ಇದೇ ನಮ್ಮ ‘ಕಾಮೋಡ ಸರಿದು’ ಚಿತ್ರದ ಪರಿಕಲ್ಪನೆ.

| ಅದ್ವಿತಿ ಶೆಟ್ಟಿ, ನಟಿ

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...