ಶನಿವಾರಸಂತೆ: ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಿರುವ ಆರೋಪಿ ವಕೀಲ ವಿದ್ಯಾಧರ್‌ನ ಗಡಿಪಾರಿಗೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಬಂದ್‌ಗೆ ಶನಿವಾರಸಂತೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಫೀಲ್ಡ್‌ಮಾರ್ಷಲ್ ಕಾರ್ಯಪ್ಪ ಹುಟ್ಟೂರಾದ ಶನಿವಾರಸಂತೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಸಂಪೂರ್ಣವಾಗಿ ಯಶಸ್ವಿಯಾಯಿತು. ಪಟ್ಟಣ ಸೇರಿದಂತೆ ಗುಡುಗಳಲೆ ಜಂಕ್ಷನ್‌ನಲ್ಲಿ ಹೋಟೆಲ್, ಕ್ಯಾಂಟೀನ್, ವಿವಿಧ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದರು. ಸರ್ಕಾರಿ ಕಚೇರಿಗಳು ಮತ್ತು ಸರ್ಕಾರಿ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿತು. ಖಾಸಗಿ ಬಸ್‌ಗಳ ಓಡಾಟ ಸ್ಥಗಿತಗೊಂಡಿತ್ತು. ಆದರೆ ಸಾರಿಗೆ ನಿಮಗದ ಬಸ್‌ಗಳು ಎಂದಿನಂತೆ ಸಂಚರಿಸಿದವು.
ಪಟ್ಟಣದ ಕೆಆರ್‌ಸಿ ವೃತ್ತ ಬೆಳಗ್ಗೆ 11 ಗಂಟೆಯವರೆಗೆ ಬಿಕೋ ಎನ್ನಿಸುತ್ತಿತ್ತು. ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದ್ದ ಹಿನ್ನೆಲೆ ಊರಿಗೆ ಹೋಗಲು ಸಾಧ್ಯವಾಗದಿದ್ದರಿಂದ ಪ್ರಯಾಣಿಕರು ಪರದಾಡಿದರು.
ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸಿ.ಎಲ್.ಸುಬ್ಬಯ್ಯ, ಭಾರತದ ಮಹಾದಂಡ ನಾಯಕ ಫೀಲ್ಡ್‌ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎನ್.ತಿಮ್ಮಯ್ಯ ಅವರು ಭಾರತ ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಕೊಡಗಿನ ಸೈನಿಕರಿಗೆ ಇವರಿಬ್ಬರೂ ಸ್ಫೂರ್ತಿಯಾಗಿದ್ದಾರೆ. ಕೊಡಗಿನ ಹೆಮ್ಮೆಯ ವೀರ ಸೇನಾನಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪಮಾನ ಮಾಡಿರುವ ವಕೀಲ ವಿದ್ಯಾಧರ್ ವಿರುದ್ಧ ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುವುದರ ಜತೆಗೆ ಆತನನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪ್ರಮುಖರಾದ ಜಗನ್‌ಪಾಲ್, ಗುಂಡೇಗೌಡ, ಲೋಕೇಶ್, ಹರ್ಷ, ಈರಯ್ಯ ಮುಳ್ಳೂರು, ಶಶಿ ಜಾಗೇನಹಳ್ಳಿ, ವೆಂಕಟೇಶ್, ಯಶ್ವಂತ್, ಭರತ್, ವಿಶ್ವ ಮುಂತಾದವರು ಪಾಲ್ಗೊಂಡಿದ್ದರು.
ಕಾರ್ಯಪ್ಪ ಹುಟ್ಟೂರಿನಲ್ಲಿ ಬಂದ್‌ಗೆ ಬೆಂಬಲ
ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe
ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್ಫಾಸ್ಟ್…
ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips
ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…
ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್; ಇಲ್ಲಿದೆ ಹೆಲ್ತಿ ಮಾಹಿತಿ | Health Tips
ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…