ಕಾರ್ಯಾಗಾರ

ಸಂವಿಧಾನದ ಆಶಯಗಳು ವಿಷಯದ ಕುರಿತು ಜನವರಿ 27 ರಂದು ಮಡಿಕೇರಿಯಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಾರ್ಯಾಗಾರ ನಡೆಯಲಿದೆ. ಮಾನವ ಬಂಧುತ್ವ ವೇದಿಕೆಯಿಂದ ನಡೆಯುವ ಕಾರ್ಯಕ್ರಮವನ್ನು ಹೈಕೋರ್ಟ್ ನಿವೃತ ನ್ಯಾಯಾಧೀಶರಾದ ಎಚ್.ಎನ್. ನಾಗಮೋಹನ್ ದಾಸ್ ಉದ್ಘಾಟಿಸಲಿದ್ದಾರೆಂದು ವೇದಿಕೆ ಅಧ್ಯಕ್ಷ ಟಿ.ಎ. ಸುರೇಶ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.