ಕಾಲಮಿತಿಯೊಳಗೆ ಅನುದಾನ ಬಳಸಿ

blank

ಧಾರವಾಡ: ಪ್ರಗತಿ ಪರಿಶೀಲನೆ ಎಂದರೆ ಕೇವಲ ಅಂಕಿ- ಅಂಶಗಳ ಮಾಹಿತಿ ಒದಗಿಸುವುದಲ್ಲ. ಅಭಿವೃದ್ಧಿ ಕಾಮಗಾರಿಗಳು ಯೋಜನೆಗಳ ಅನುಷ್ಠಾನದ ವಾಸ್ತವಿಕ, ಭೌತಿಕ ಸಮಗ್ರ ಪರಿಶೀಲನೆಯಾಗಬೇಕು. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯೊಳಗೆ ಬಳಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರವಿಕುಮಾರ ಸುರಪುರ ಹೇಳಿದರು.

ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಅತಿವೃಷ್ಟಿ ಹಾನಿ ಹಾಗೂ ಪರಿಹಾರ ಕಾರ್ಯ ಹಾಗೂ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್​ಸಿಪಿ ಹಾಗೂ ಟಿಎಸ್​ಪಿ ಚಟುವಟಕೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸಕಾದಲ್ಲಿ ಇನ್​ಪುಟ್ ಸಬ್ಸಿಡಿ ಪ್ರಯೋಜನಗಳನ್ನು ಒದಗಿಸಬೇಕು. ಅನುದಾನಗಳನ್ನು ಕಾಲಮಿತಿಯೊಳಗೆ ಬಳಸಿ ವರದಿ ಸಲ್ಲಿಸಬೇಕು. ವರ್ಷಾಂತ್ಯದವರೆಗೆ ವಿಳಂಬ ಮಾಡಬಾರದು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾರ ಕಲ್ಯಾಣ ಇಲಾಖೆಗಳ ಮೂಲಕ ಕಿಚನ್ ಗಾರ್ಡನ್ ಅಭಿವೃದ್ಧಿಪಡಿಸಬೇಕು ಎಂದರು.

ಹುಬ್ಬಳ್ಳಿ- ಧಾರವಾಡ ಅವಳಿನಗರದ ವಾರ್ಡ್​ಗಳಲ್ಲಿ ಅಪಾಯ ಸ್ಥಿತಿಯಲ್ಲಿರುವ ಹಳೆಯ ಮನೆಗಳ ಸಮೀಕ್ಷೆ ಮಾಡಿ ಅವುಗಳ ಮೇಲೆ ಗುರುತು ಹಾಕಬೇಕು. ಅಕ್ಕಪಕ್ಕದ ನಿವಾಸಿಗಳಿಗೆ ಮಾಹಿತಿ ನೀಡಬೇಕು. ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ವಿದ್ಯುದ್ದೀಕರಣ ಮಾಡಲು ಒತ್ತು ನೀಡಬೇಕು. ನಗರ ಪ್ರದೇಶದಲ್ಲಿ ಮಾಂಸ ಮಾರುಕಟ್ಟೆ ಸ್ಥಳಗಳಲ್ಲಿ ಶುಚಿತ್ವ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದರು.

ಕರೊನಾ ಸದ್ಯ ಇಳಿಮುಖವಾಗಿದ್ದರೂ ನಿಗದಿತ ತಪಾಸಣೆ ಮುಂದುವರಿಸಬೇಕು. ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ದಂಡ ವಿಧಿಸಬೇಕು. ಹೆರಿಗೆ ಸಂದರ್ಭದಲ್ಲಿ ತಾಯಿ ಮರಣ ಕಡಿಮೆಗೊಳಿಸಲು ಲಸಿಕೆ, ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಸಾಂಸ್ಥಿಕ ಹೆರಿಗೆಗೆ ಕ್ರಮ ಜರುಗಿಸಬೇಕು ಎಂದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿ.ಪಂ. ಸಿಇಒ ಡಾ. ಸುಶೀಲಾ ಬಿ., ಅಪರ ಜಿಲ್ಲಾಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಕಾರಿ ಡಾ. ಗೋಪಾಲಕೃಷ್ಣ, ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಇತರರಿದ್ದರು.

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…