More

  ಕಾಲುವೆಗಳಿಗೆ ನೀರು ಹರಿಸಲು ಆಗ್ರಹ

  ದೇವರಹಿಪ್ಪರಗಿ: ಮಳೆಗಾಲ ಆರಂಭವಾಗಿ ಎರಡು ತಿಂಗಳಾದರೂ ಉತ್ತಮ ಮಳೆಯಾಗುತ್ತಿಲ್ಲ. ಕೂಡಲೇ ಕಾಲುವೆಗಳಿಗೆ ನೀರು ಹರಿಸಬೇಕೆಂದು ತಾಲೂಕು ರೈತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

  ಪ್ರಸಕ್ತ ಮುಂಗಾರಿನಲ್ಲಿ ಬಹುತೇಕ ಮಳೆಗಳು ವಾಡಿಕೆಯಂತೆ ಸುರಿಯದೇ ಕೈಕೊಟ್ಟಿವೆ. ಇದೇ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಪೂರೈಸುವ ಆಲಮಟ್ಟಿ ಆಣೆಕಟ್ಟಿನಲ್ಲಿ ನೀರು ಕಡಿಮೆಯಾಗಿ ನೀರು ಬರದಂತಾಗಿತ್ತು. ಈಗ ಮಹಾರಾಷ್ಟ್ರ ಸೇರಿದಂತೆ ಕೃಷ್ಣಾ ನದಿ ತೀರದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಆಲಮಟ್ಟಿ ಆಣೆಕಟ್ಟಿನಲ್ಲಿ 40ಟಿಎಂಸಿಗಿಂತಲೂ ಹೆಚ್ಚಿನ ನೀರು ಸಂಗ್ರಹವಾಗಿದೆ. ಈ ನೀರನ್ನು ಕಾಲುವೆಗಳಿಗೆ ಹರಿಸಲು ಯಾವುದೇ ತೊಂದರೆಯಿಲ್ಲ. ಅದಕ್ಕಾಗಿ ತಕ್ಷಣವೇ ಕಾಲುವೆಗಳ ಮುಖಾಂತರ ನೀರು ಹರಿಸಿ ಕೆರೆಗಳನ್ನು ತುಂಬಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

  ದೇವರಹಿಪ್ಪರಗಿ ಭಾಗದ ಚಿಮ್ಮಲಗಿ ಮುಖ್ಯ ಕಾಲುವೆ ಹಾಗೂ ನಾಗಠಾಣ ಉಪಕಾಲುವೆಗಳಿಗೆ ಕೂಡಲೇ ನೀರು ಹರಿಸಲು ಕೆಬಿಜೆಎನ್‌ಎಲ್ ಅಧಿಕಾರಿಗಳು ಕ್ರಮವಹಿಸಬೇಕು ಎಂದು ರೈತ ಸಂಘದ ಪದಾಧಿಕಾರಿಗಳಾದ ಅಜೀಜ ಯಲಗಾರ, ಸೋಮಶೇಖರ ಹಿರೇಮಠ, ಬಸವರಾಜ ಕಲ್ಲೂರ (ಮುಳಸಾವಳಗಿ), ಶಂಕರಗೌಡ ಕೋಟಿಖಾನಿ (ಹರನಾಳ), ಗುರು ಕರಭಂಟನಾಳ (ಪಡಗಾನೂರ) ಶಿವಾನಂದ ಯಾಳಗಿ, ಗುರುರಾಜ ಜಡಗೊಂಡ, ನಾಗೇಂದ್ರ ಇಂಡಿ, ಸಿದ್ದಣ್ಣ ಮಡ್ನಳ್ಳಿ, ಮಂಜುನಾಥ ಒಂಟೆತ್ತೀನ ಹಾಗೂ ವಿವಿಧ ಗ್ರಾಮಗಳ ರೈತರು ಆಗ್ರಹಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts