20.4 C
Bengaluru
Sunday, January 19, 2020

ಕಾಲೇಜ್ ಗೇಟ್​ಗೆ ಜಡಿದಿದ್ದ ಮುಳ್ಳುಕಂಟಿ ತೆರವು

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...


ರೋಣ: ಶಾಸಕ ಕಳಕಪ್ಪ ಬಂಡಿ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಗದೀಶ ಮಡಿವಾಳರ ಶುಕ್ರವಾರ ನಡೆಸಿದ ಸಂಧಾನದ ಫಲವಾಗಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಗೇಟ್ ಹಾಗೂ ರಸ್ತೆ ಮೇಲೆ ಹಚ್ಚಿದ್ದ ಮುಳ್ಳುಕಂಟಿಗಳನ್ನು ಜಮೀನಿನ ಮಾಲೀಕರು ತೆರವುಗೊಳಿಸಿದ್ದಾರೆ.

ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಮುಂದಿನ ಜಾಗ ನಮ್ಮದು ಎಂದು ಪಟ್ಟಣದ ವಿ.ಎಫ್. ಪಾಟೀಲ ಅನುದಾನಿತ ಪ್ರೌಢ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ವಿ. ಪಾಟೀಲ ಅವರು ಕಳೆದ ಹಲವು ದಿನಗಳಿಂದ ಶಾಲೆಯ ಗೇಟಿಗೆ ಮುಳ್ಳುಕಂಟಿ ಹಾಕಿದ್ದರು. ಇದರಿಂದಾಗಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸರಿಯಾದ ರಸ್ತೆಯಿಲ್ಲದೆ ಹೊಲಗದ್ದೆಗಳಲ್ಲಿ ಹಾದು ಕಾಲೇಜಿಗೆ ಹೋಗುವ ಸ್ಥಿತಿ ನಿರ್ವಣವಾಗಿತ್ತು. ಈ ಕುರಿತು ಉಪನ್ಯಾಸಕರು ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷರಿಗೆ ದೂರು ಸಲ್ಲಿಸಿದ್ದರು. ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕ ಕಳಕಪ್ಪ ಬಂಡಿ ಅವರನ್ನು ಭೇಟಿ ಮಾಡಿದ ನೌಕರರ ಸಂಘದ ಅಧ್ಯಕ್ಷ ಜಗದೀಶ ಮಡಿವಾಳರ ಈ ಬಗ್ಗೆ ಶಾಸಕರಿಗೆ ಸಂಪೂರ್ಣವಾಗಿ ಮಾಹಿತಿ ನೀಡಿದರು. ಆಗ, ಶಾಸಕ ಬಂಡಿ ರಸ್ತೆಗೆ ಮುಳ್ಳು ಜಡಿದ ಎಸ್.ವಿ. ಪಾಟೀಲರ ಜೊತೆ ಮಾತನಾಡಿ, ಇದೇ ರೀತಿಯ ತೊಂದರೆಯಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿ ಪಟ್ಟಣದ ಸರ್ಕಾರಿ ಪದವಿ ಕಾಲೇಜು ಇಲ್ಲಿಂದ ಸ್ಥಳಾಂತರಗೊಂಡಿದೆ. ಅದೇ ಸ್ಥಿತಿ ಸರ್ಕಾರಿ ಪಿಯು ಕಾಲೇಜಿಗೂ ಆಗುವುದು ಬೇಡ. ಇದರಿಂದ ತಾಲೂಕಿನ ಬಡ, ರೈತಾಪಿ ವರ್ಗದ ಮಕ್ಕಳು ಶಿಕ್ಷಣದಿಂದ ವಂಚಿರಾಗುತ್ತಾರೆ ಎಂದು ಶಾಸಕರು ಮಾಡಿದ ಮನವಿಗೆ ಜಾಗದ ಮಾಲೀಕರು ಸ್ಪಂದಿಸಿದ್ದಾರೆ ಎನ್ನಲಾಗುತ್ತಿದೆ.

ಸರ್ಕಾರಿ ಪಿಯು ಕಾಲೇಜಿನ ಗೇಟ್ ಹಾಗೂ ರಸ್ತೆ ಮೇಲೆ ಮುಳ್ಳು ಜಡಿದ ಪ್ರಕರಣ ಸದ್ಯಕ್ಕೆ ಸುಖಾಂತ್ಯಗೊಂಡಿದೆ. ಮುಂದಿನ ದಿನಗಳಲ್ಲಿ ಜಾಗದ ಮಾಲೀಕರು ಆ ಸ್ಥಳದಲ್ಲಿ ಯಾವುದಾದರೂ ಕಟ್ಟಡ ಕಟ್ಟಲು ಮುಂದಾದರೆ, ಕಾಲೇಜಿನ ಪಕ್ಕದಲ್ಲಿರುವ ನೀರಾವರಿ ಇಲಾಖೆ ಜಾಗದಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ನಿರ್ವಿುಸಿ ಕೊಡುವ ಕುರಿತು ಶಾಸಕರು ಮೇಲಧಿಕಾರಿಗಳ ಜೊತೆ ಮಾತನಾಡಿದ್ದಾರೆ.

| ಜಗದೀಶ ಮಡಿವಾಳರ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ

ಕಾಲೇಜ್ ಎದುರು ಹಚ್ಚಲಾಗಿದ್ದ ಮುಳ್ಳು, ಗಿಡಕಂಟಿಗಳನ್ನು ತೆರವುಗೊಳಿಸದಿದ್ದರೆ, ಬರುವ ಶೈಕ್ಷಣಿಕ ವರ್ಷಕ್ಕೆ ಬಹುತೇಕ ವಿದ್ಯಾರ್ಥಿಗಳು ಬೇರೆ, ಬೇರೆ ಕಾಲೇಜಿಗೆ ಹೋಗುವ ಯೋಚನೆಯಲ್ಲಿದ್ದರು. ಹಾಗೊಂದು ವೇಳೆ ಆಗಿದ್ದರೆ, ಹಾಜರಾತಿ ಕೊರತೆಯಿಂದಾಗಿ ಪಟ್ಟಣದ ಸರ್ಕಾರಿ ಪಿಯು ಕಾಲೇಜ್ ಬೇರೆಡೆ ಸ್ಥಳಾಂತರಗೊಳ್ಳುವ ಸಾಧ್ಯತೆಯಿತ್ತು.

| ಸಚಿನ ಪಾಟೀಲ, ಎಬಿವಿಪಿ ತಾಲೂಕು ಸಂಚಾಲಕವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...