ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಅವಮಾನಿಸಿದ, ವಸತಿ ನಿಲಯದಲ್ಲಿ ಬಾಲಕನ ಅರೆಬೆತ್ತಲೆ ಮೆರವಣಿಗೆ ಮಾಡಿದ, ಭಗವಾ ಧ್ವಜವನ್ನು ಕಿತ್ತು ಹಾಕಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗೃತಿ ಸೇನೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಪೊಲೀಸ್ ಆಯುಕ್ತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ, ಅಂಬೇಡ್ಕರ್ ಪುತ್ಥಳಿಗೆ ಅವಮಾನ ಖಂಡನೀಯ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಅದೇ ದಿನ ನಗರದ ಅಂಗಡಿ, ಮುಂಗಟ್ಟುಗಳ ಮೇಲೆ ದಾಳಿ ಮಾಡಿ, ಕಲ್ಲು ತೂರಾಟ ನಡೆಸಿದ, ಭಗವಾ ಧ್ವಜವನ್ನು ಕಿತ್ತು ಹಾಕಿದ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿ, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಗರದ ಹೈಕೋರ್ಟ್ ಹತ್ತಿರದ ಬಾಲಕರ ವಸತಿ ನಿಲಯದಲ್ಲಿ ಬಾಲಕನೊಬ್ಬನನ್ನು ಥಳಿಸಿ ಅರೆಬೆತ್ತಲೆ ಮಾಡಿ, ಮೆರವಣಿಗೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಶೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಸೇನೆ ಜಿಲ್ಲಾಧ್ಯಕ್ಷ ಲಕ್ಷಿö್ಮÃಕಾಂತ ಸ್ವಾದಿ, ದಶರಥ ಇಂಗೋಳೆ, ಮಹಾದೇವ ಕೋಟನೂರ, ಸಂಗಮೇಶ ಕಾಳಗನೂರ, ಚೇತನ ಪಾಟೀಲ್, ರಾಕೇಶ ಮಠ, ಸಿದ್ದು ಕಂದಗಲ್ ಇತರರಿದ್ದರು.