26.8 C
Bangalore
Friday, December 13, 2019

ಕುಡುಕರ ಕಾಟ ತಡೆಯಲು ಕಾರ್ವಿುಕರ ಕಾವಲು

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ರೋಣ: ಪುರಸಭೆಯ ವಾಣಿಜ್ಯ ಮಳಿಗೆಗಳ ತುಂಬ ಬಿದ್ದಿದ್ದ ಸರಾಯಿ ಬಾಟಲಿಗಳನ್ನು ಸ್ವಚ್ಛಗೊಳಿಸಿರುವ ಮುಖ್ಯಾಧಿಕಾರಿ, ಕುಡಕರು ಸುಳಿಯದಂತೆ ವಾಣಿಜ್ಯ ಮಳಿಗೆಗಳ ಗೇಟ್​ಗೆ ಬೀಗ ಜಡಿದು, ಪೌರ ಕಾರ್ವಿುಕರನ್ನು ಕಾವಲಿಗೆ ನಿಲ್ಲಿಸಿದ್ದಾರೆ.

ಪುರಸಭೆ ಮಳಿಗೆ ಕುಡುಕರ ಅಡ್ಡೆಯಂತಾಗಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಕಿರಿಕಿರಿಯುಂಟಾಗುತ್ತಿರುವ ಕುರಿತು ‘ಕುಡುಕರ ತಾಣವಾದ ಪುರಸಭೆ ಮಳಿಗೆ’ ಶೀರ್ಷಿಕೆಯಡಿ ನ. 20ರಂದು ‘ವಿಜಯವಾಣಿ’ಯಲ್ಲಿ ವರದಿ ಪ್ರಕಟಿಸಲಾಗಿತ್ತು. ಇದರಿಂದ ಎಚ್ಚೆತ್ತ ರೋಣ ಪುರಸಭೆ ಮುಖ್ಯಾಧಿಕಾರಿ ನೂರುಲ್ಲಾಖಾನ್ ಕ್ರಮಕ್ಕೆ ಮುಂದಾಗಿದ್ದಾರೆ.

ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಯೋಜನೆಯಡಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಪುರಸಭೆಯಿಂದ ನಿರ್ವಣಗೊಂಡಿರುವ ವಾಣಿಜ್ಯ ಮಳಿಗೆಗಳು ಕುಡುಕರ ಅಡ್ಡೆಯಾಗಿದ್ದರಿಂದ ವ್ಯಾಪಾರಸ್ಥರು ಅಲ್ಲಿ ವ್ಯಾಪಾರ ಮಾಡಲು ಹಿಂದೇಟು ಹಾಕುವಂತಾಗಿತ್ತು. ಪರಿಣಾಮ ಪ್ರತಿ ವರ್ಷ ಪುರಸಭೆ ಆದಾಯಕ್ಕೆ ಲಕ್ಷಾಂತರ ರೂ. ಕತ್ತರಿ ಬಿದ್ದಿತ್ತು. ಇದರ ಮೇಲೆ ಬೆಳೆಕು ಚೆಲ್ಲಿದ ‘ವಿಜಯವಾಣಿ’ ಸಮಸ್ಯೆ ಕುರಿತು ವಿಸõತ ವರದಿ ಪ್ರಕಟಿಸಿತ್ತು.

‘ಇನ್ನು ಮುಂದೆ ಮದ್ಯ ಕೊಂಡು ಪಕ್ಕದ ಮಳಿಗೆಗಳಲ್ಲಿ ಕುಳಿತು ಸೇವನೆ ಮಾಡಿದ್ದು ಗಮನಕ್ಕೆ ಬಂದರೆ, ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಮದ್ಯ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಳಿಗೆಗಳ ಅಕ್ಕ ಪಕ್ಕದಲ್ಲಿರುವ ಮದ್ಯದ ಅಂಗಡಿಗಳ ಮಾಲೀಕರಿಗೆ ಪುರಸಭೆ ಮುಖ್ಯಾಧಿಕಾರಿ ನೂರುಲ್ಲಾಖಾನ್ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ಯಾವೊಬ್ಬ ಕುಡುಕರು ವಾಣಿಜ್ಯ ಮಳಿಗೆ ಬಳಿ ಸುಳಿಯದಂತೆ ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಅಲ್ಲದೆ, ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ತಕ್ಷಣವೇ ಖಾಲಿ ಇರುವ ವಾಣಿಜ್ಯ ಮಳಿಗೆಗಳ ಟೆಂಡರ್ ಕರೆದು ವ್ಯಾಪಾರಸ್ಥರಿಗೆ ನೀಡಲಾಗುವುದು. | ನೂರುಲ್ಲಾಖಾನ್, ಪುರಸಭೆ ಮುಖ್ಯಾಧಿಕಾರಿ

ಸಾರ್ವಜನಿಕರ ಮೆಚ್ಚುಗೆ: ಕುಡುಕರ ಹಾವಳಿ ತಡೆದು, ವಾಣಿಜ್ಯ ಮಳಿಗೆಯ ತುಂಬ ಬಿದ್ದಿರುವ ಸರಾಯಿ ಬಾಟಲಿಗಳನ್ನು ತೆರವುಗೊಳಿಸುವಂತೆ ಸಾಕಷ್ಟು ಬಾರಿ ಪುರಸಭೆಯವರಿಗೆ ಮನವಿ ಮಾಡಿದರೂ ಕಣ್ಣು ತೆರೆದಿರಲಿಲ್ಲ. ‘ವಿಜಯವಾಣಿ’ಯಲ್ಲಿ ವರದಿ ಪ್ರಕಟವಾಗಿದ್ದರಿಂದ ಸಮಸ್ಯೆ ನಿವಾರಣೆಯಾಗಿ ನೆಮ್ಮದಿ ದೊರೆತಿದೆ ಎಂದು ವ್ಯಾಪಾರಸ್ಥರು ಪತ್ರಿಕೆ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....