More

  ಕುಶಾಲನಗರ ಪೊಲೀಸ್ ಠಾಣೆಗೆ ಐಜಿ ಭೇಟಿ

  ಕುಶಾಲನಗರ: ಕುಶಾಲನಗರ ನಗರ ಪೊಲೀಸ್ ಠಾಣೆಗೆ ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಬಿ.ಬೋರಲಿಂಗಯ್ಯ ಮಂಗಳವಾರ ಭೇಟಿ ನೀಡಿದ್ದರು.

  ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಐಜಿ ಅಗತ್ಯ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಿ ಹಲವು ಪ್ರಕರಣಗಳನ್ನು ಬೇಧಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಮುಖ ಪೆಡ್ಲರ್‌ಗಳನ್ನು ಬಂಧಿಸಿ ಗಾಂಜಾ ಸಾಗಾಟ, ಮಾರಾಟಕ್ಕೆ ನಿಯಂತ್ರಣ ಹೇರಿರುವುದು ಶ್ಲಾಘನೀಯ ವಿಚಾರ. ಇಂತಹ ಕಾರ್ಯಾಚರಣೆ ಮುಂದೆಯೂ ಹೆಚ್ಚಾಗಿ ನಡೆಯಲಿದೆ ಎಂದು ತಿಳಿಸಿದರು.

  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಸೋಮವಾರಪೇಟೆ ಉಪವಿಭಾಗ ಡಿವೈಎಸ್ಪಿ ಗಂಗಾಧರಪ್ಪ, ವೃತ್ತ ನಿರೀಕ್ಷಕ ಮಹೇಶ್, ಪಿಎಸ್‌ಐಗಳಾದ ಚಂದ್ರಶೇಖರ್, ಗೀತಾ ಮತ್ತು ಸಿಬ್ಬಂದಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts