25.7 C
Bangalore
Sunday, December 15, 2019

ಕುಸಿದುಬಿದ್ದ ಶಾಲೆ ಛಾವಣಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಕಾರವಾರ: ನಗರದ ತೇಲಂಗ ರಸ್ತೆಯ ಬಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಛಾವಣಿ ಭಾನುವಾರ ಕುಸಿದು ಬಿದ್ದಿದೆ.

ಕ್ರೀಡಾ ಕೊಠಡಿಯಾಗಿದ್ದರಿಂದ ಅಲ್ಲಿ ತರಗತಿ ನಡೆಯುತ್ತಿರಲಿಲ್ಲ. ಅದರೆ, ಮಕ್ಕಳು ಯೋಗ ಮಾಡಲು, ಕ್ರೀಡಾ ಸಾಮಗ್ರಿ ಪಡೆಯುವ ಸಲುವಾಗಿ ಶಾಲಾ ವೇಳೆಯಲ್ಲಿ ಓಡಾಡುತ್ತಿದ್ದರು. ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ.

ತಾಲೂಕಿನ ವಿವಿಧೆಡೆ ಮಣ್ಣಿನ ಗೋಡೆಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಹಲವು ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡಗಳಿದ್ದು, ಭಾನುವಾರದ ಘಟನೆ ಎಲ್ಲೆಡೆ ಆತಂಕ ಹುಟ್ಟು ಹಾಕಲು ಕಾರಣವಾಗಿದೆ.

ಭಾನುವಾರ ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಬಾಡ ಶಾಲೆಯ ಕ್ರೀಡಾ ಕೊಠಡಿಯ ಜಂತಿ ಮುರಿದು ಇಡೀ ಮೇಲ್ಛಾವಣಿ ದೊಡ್ಡ ಶಬ್ಧದೊಂದಿಗೆ ಕುಸಿದಿದೆ. ಹೆಂಚು, ಕೊಠಡಿಯ ಒಳಗಿದ್ದ ಕ್ರೀಡಾ ಸಾಮಗ್ರಿಗಳು ಸಂಪೂರ್ಣ ನಾಶವಾಗಿವೆ. ಕಾಮಗಾರಿ ಕಳಪೆ ಆರೋಪ: 1865 ರಲ್ಲಿ ಪ್ರಾರಂಭವಾದ ಬಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 150 ವರ್ಷ ಪೂರೈಸಿದೆ. ಒಟ್ಟು 12 ಕೊಠಡಿಗಳಿವೆ. 30 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇದೇ ಆವರಣದ ಇನ್ನೊಂದು ಕಟ್ಟಡದಲ್ಲಿ ಹರಿಜನಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಡೆಯುತ್ತಿದೆ. ಹಳೆಯ ಕಟ್ಟಡ ಹಾಗೇ ಇದ್ದು, 1993-94 ರಲ್ಲಿ ಕಟ್ಟಿದ ಕ್ರೀಡಾ ಕೊಠಡಿ ಕುಸಿದು ಬಿದ್ದಿದೆ. ಅದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ. ಶಾಲೆಯ ಇತರ ಕೊಠಡಿಗಳೂ ಶಿಥಿಲಾವಸ್ಥೆಯಲ್ಲಿವೆ. ಅಡುಗೆ ಕೋಣೆ ಗೋಡೆ ಮೇಲೆ ನೀರು ಸೋರುತ್ತಿದೆ. ರಿಪೇರಿ ಮಾಡುವಂತೆ ತಿಳಿಸಿದರೆ, ಈ ಕುರಿತು ಹಲವು ಬಾರಿ ಪ್ರಸ್ತಾವನೆ ಕಳಿಸಿದರೂ ಇಲಾಖೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಹಣ ಇಲ್ಲ ಎಂದು ಹೇಳುತ್ತಲೇ ಬಂದಿದ್ದಾರೆ ಎಂದು ಶಾಲೆಯವರು ಹೇಳುತ್ತಾರೆ. ಇಂಥ ಸ್ಥಿತಿಯಲ್ಲಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳಿಸುವುದು ಹೇಗೆ ಎಂದು ಸ್ಥಳೀಯ ಮುಖಂಡ ರಾಘು ನಾಯ್ಕ ಅಸಮಾಧಾನ ಹೊರಹಾಕಿದ್ದಾರೆ.

ಡಿಡಿಪಿಐ ಕೆ. ಮಂಜುನಾಥ, ಬಿಇಒ ಶಾಂತೇಶ ನಾಯಕ, ಗ್ರಾಮೀಣಾಭಿವೃದ್ಧಿ ಇಲಾಖೆ ಇಂಜಿನಿಯರ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬೀಳುವ ಸ್ಥಿತಿಯಲ್ಲಿ ದೇವಳಮಕ್ಕಿ ಶಾಲೆ
ತಾಲೂಕಿನ ದೇವಳಮಕ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲವಾಗಿದ್ದು, ಬೀಳುವ ಸ್ಥಿತಿಯಲ್ಲಿದೆ. ಶಾಲೆಯಲ್ಲಿ 64 ವಿದ್ಯಾರ್ಥಿಗಳು ಓದುತ್ತಿದ್ದಾರೆ. ನಾಲ್ಕು ಕೊಠಡಿಗಳು ಮಣ್ಣಿನ ಗೋಡೆಯದ್ದಾಗಿವೆ. ಅಲ್ಲಿ ಅಪಾಯ ಇದ್ದುದರಿಂದ ಮುಖ್ಯಾಧ್ಯಾಪಕರ ಕೋಣೆಯೂ ಸೇರಿದಂತೆ ಇತರ ಕೊಠಡಿಗಳಲ್ಲೇ ತಲಾ ಎರಡು ತರಗತಿ ನಡೆಸಲಾಗುತ್ತಿದೆ. ಈ ಹಿಂದೆ ನಾಲ್ಕು ಕೊಠಡಿಗಳು ಕುಸಿದು ಬಿದ್ದಿದ್ದವು. ಮತ್ತೆ ಅದೇ ರೀತಿ ಅಪಾಯ ಸಂಭವಿಸಿ ಮಕ್ಕಳಿಗೆ ತೊಂದರೆ ಉಂಟಾಗಬಾರದು ಎಂದು ದುರಸ್ತಿಗೆ ಹಲವು ಬಾರಿ ಮನವಿ ಮಾಡಿದರೂ ಶಿಕ್ಷಣ ಇಲಾಖೆಯಿಂದ ಸ್ಪಂದನೆ ಸಿಕ್ಕಿಲ್ಲ ಎಂದು ಎಸ್​ಡಿಎಂಸಿ ಅಧ್ಯಕ್ಷ ರೂಪೇಶ ನಾಯ್ಕ, ಉಪಾಧ್ಯಕ್ಷೆ ಅನಿಶಾ ಸಾವೋಗೇರ, ಸದಸ್ಯರಾದ ವಿಶಾಲ ಆಚಾರಿ, ಗಣಪತಿ ಗೌಡ, ಆರೋಪಿಸಿದ್ದಾರೆ.

ಕಟ್ಟಡ ಪರಿಶೀಲನೆ ಕಡ್ಡಾಯ
ಪ್ರವಾಹ ಪೀಡಿತ ಪ್ರದೇಶದ ಶಾಲೆಗಳ ಕೊಠಡಿಗಳು ಬಳಕೆಗೆ ಯೊಗ್ಯವಾಗಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಇಂಜಿನಿಯರ್​ಗಳ ದೃಢೀಕರಣವನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಆದೇಶಿಸಿದ್ದಾರೆ. ಸಾಕಷ್ಟು ದಿನ ನೀರು ನಿಂತಿದ್ದರಿಂದ ಕಟ್ಟಡಗಳಿಗೆ ಅಪಾಯ ಸಂಭವಿಸುವ ಸಾಧ್ಯತೆ ಇದ್ದು, ಈ ಕುರಿತು ಇಂಜಿನಿಯರ್​ಗಳಿಂದ ಪರಿಶೀಲನೆ ಮಾಡಿಸಬೇಕು. ತಪ್ಪಿ ಮುಂದೆ ಅನಾಹುತಗಳಾದಲ್ಲಿ ಆಯಾ ಬಿಇಒಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ. ತಾಲೂಕಿನ ಅಂಬ್ರಾಯಿ ಹಾಗೂ ಅಂಬೇಜೂಗ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡಗಳು ನೆರೆಯಲ್ಲಿ ಮುಳುಗಿದ್ದವು. ಎರಡನ್ನೂ ಇಂಜಿನಿಯರ್​ಗಳು ಪರಿಶೀಲನೆ ನಡೆಸಿದ್ದು, ಅಂಬೆಜೂಗ ಶಾಲೆಯ ಒಂದು ಕೊಠಡಿ ಹೊರತುಪಡಿಸಿ ಉಳಿದವು ಸಮರ್ಪಕವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರವಾಗಿದ್ದರಿಂದ ಶಾಲೆಯಲ್ಲಿ ಮಕ್ಕಳಿರಲಿಲ್ಲ. ಮಕ್ಕಳ ಮೇಲೆ ಮೇಲ್ಛಾವಣಿ ಬಿದ್ದಿದ್ದರೆ ಏನು ಗತಿ? ಹಿರಿಯ ಅಧಿಕಾರಿಗಳು ಬಂದು ಅಧಿಕೃತ ಭರವಸೆ ನೀಡುವವರೆಗೂ ಇಲ್ಲಿ ತರಗತಿ ನಡೆಸಲು ಅವಕಾಶ ನೀಡುವುದಿಲ್ಲ.
| ಪ್ರಕಾಶ ನಾಯ್ಕ ಸ್ಥಳೀಯ

ಇಂಗ್ಲಿಷ್ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆ ಕಟ್ಟಡದ ದುಸ್ಥಿತಿಯಿಂದ ಯಾವ ಪಾಲಕರೂ ಮಕ್ಕಳನ್ನು ಕಳಿಸಲು ಮುಂದಾಗುತ್ತಿಲ್ಲ. ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕು.
| ಪ್ರಜ್ವಲ ಶೇಟ್ ಹಳೆಯ ವಿದ್ಯಾರ್ಥಿ

ಬಾಡ ಶಾಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಇಂಜಿನಿಯರ್​ಗಳ ದೃಢೀಕರಣ ಪಡೆದು ತರಗತಿ ನಡೆಸಲಾಗುವುದು. ಉಳಿದ ಶಾಲೆಗಳನ್ನೂ ಪರಿಶೀಲಿಸಿ ವರದಿ ನೀಡುವಂತೆ ಇಂಜಿನಿಯರ್​ಗಳಿಗೆ ಮನವಿ ಮಾಡುತ್ತೇವೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಶಾಲೆ ಕೊಠಡಿಗಳ ರಿಪೇರಿ ಕಾರ್ಯಕ್ಕೆ 6 ಲಕ್ಷ ರೂ. ಪ್ರಸ್ತಾವನೆ ಕಳಿಸಿದ್ದೇವೆ. ತಕ್ಷಣ ಕಾಮಗಾರಿ ಕೈಗೊಳ್ಳಲಾಗುವುದು.
| ಶಾಂತೇಶ ನಾಯಕ ಬಿಇಒ, ಕಾರವಾರ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...