25.9 C
Bengaluru
Wednesday, January 22, 2020

ಕುಸಿಯುವ ಹಂತದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ತಂಗಿದ್ದ ಕಣ್ವ ಸರ್ಕಾರಿ ಶಾಲೆ ಕಟ್ಟಡ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ರಾಮನಗರ: ವಿಶ್ವದ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಸರ್.ಎಂ.ವಿಶ್ವೇಶ್ವರಯ್ಯ ಅವರು ತಂಗಿದ್ದ ಶಾಲಾ ಕಟ್ಟಡ ಇದೀಗ ಕುಸಿಯುವ ಹಂತಕ್ಕೆ ತಲುಪಿದ್ದು, ಕೂಡಲೇ ದುರಸ್ತಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ತಾಲೂಕಿನ ಗಡಿ ಗ್ರಾಮದ ಕಣ್ವದಲ್ಲಿ ಸುಮಾರು 75 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆಗಳು ಬಿರುಕು ಬಿಟ್ಟು, ಕುಸಿಯುವ ಹಂತ ತಲುಪಿವೆ.

ಮೇಲ್ನೋಟಕ್ಕೆ ಚೆಂದ: ಮೇಲೆ ತಳಕು ಒಳಗೆ ಹುಳುಕು ಎನ್ನುವಂತೆ ಶಾಲೆಯನ್ನು ದೂರದಿಂದ ನೋಡಿದರೆ ತುಂಬಾ ಚೆನ್ನಾಗಿರುವಂತೆ ಕಾಣುತ್ತದೆ. ಒಳಗೆ ನೋಡಿದರೆ ಹೆಂಚುಗಳು ಯಾವಾಗ ಬೀಳುತ್ತವೋ, ಬಿರುಕು ಬಿಟ್ಟ ಗೋಡೆಗಳು ಎಂದು ಕುಸಿಯುತ್ತವೋ ಎನ್ನುವ ಸ್ಥಿತಿಯಿದ್ದು, ವಿದ್ಯಾರ್ಥಿಗಳದು ಆತಂಕದಲ್ಲಿಯೇ ಪಾಠ ಕೇಳಬೇಕಾದ ಅನಿವಾರ್ಯ ಪರಿಸ್ಥಿತಿಯಾದರೆ, ಶಿಕ್ಷಕರ ಪಾಡು ಇದಕ್ಕಿಂತ ಭಿನ್ನವಾಗಿಲ್ಲ. ಅಲ್ಲದೇ ಮೇಲ್ಛಾವಣಿಗೆ ಅಳವಡಿಸಿರುವ ಮರಗಳು ಸಹ ಮುರಿದು ಬೀಳುವ ಸ್ಥಿತಿಯಲ್ಲಿವೆ. ವಿಷ ಜಂತುಗಳ ವಾಸಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ. ಇದೀಗ ಶಾಲೆಯ ದುಸ್ಥಿತಿಯಿಂದ ಬೆಚ್ಚಿಬಿದ್ದಿರುವ ಮಕ್ಕಳು ಬೇರೆ ಶಾಲೆಗಳತ್ತ ಮುಖಮಾಡುತ್ತಿದ್ದಾರೆ. ಪ್ರಸ್ತುತ ಶಾಲೆಯಲ್ಲಿ 43 ಮಕ್ಕಳು ಮಾತ್ರವಿದ್ದು, ಶಾಲೆಯ ಪರಿಸ್ಥಿತಿ ಹೀಗೆ ಮುಂದುವರಿದರೆ ಇರುವ ಮಕ್ಕಳೂ ಬೇರೆ ದಾರಿ ತುಳಿಯುವುದರಲ್ಲಿ ಅನುಮಾನವಿಲ್ಲ.

ಇತಿಹಾಸದ ಶಾಲೆ: ಶಾಲೆಯ ಕಟ್ಟಡ 75 ವರ್ಷಗಳ ಹಿಂದೆ ನಿರ್ಮಾಣಗೊಂಡಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ. ಕಣ್ವ ಗ್ರಾಮದ ಬಳಿ ಜಲಾಶಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಈ ಕಟ್ಟಡವನ್ನು ಕಟ್ಟಲಾಗಿತ್ತು. ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯನವರೇ ಇಲ್ಲಿನ ಶಾಲಾ ಕೊಠಡಿಯೊಂದರಲ್ಲಿ ಹಲವು ದಿನ ತಂಗಿದ್ದು, ಜಲಾಶಯದ ರೂಪರೇಷೆ ಸಿದ್ಧಪಡಿಸಿದ್ದರು ಎಂದು ಸ್ಥಳೀಯರು ಹೇಳುತ್ತಾರೆ.

ಶಾಲಾಭಿವೃದ್ಧಿಗೆ ಗಮನಹರಿಸಿ: ದುಸ್ಥಿತಿಯಲ್ಲಿರುವ ಸರ್ಕಾರಿ ಶಾಲೆಯನ್ನು ದುರಸ್ತಿ ಮಾಡಬೇಕು ಎನ್ನುವುದು ಸ್ಥಳೀಯರ ಆಗ್ರಹ. ಜತೆಗೆ ಶಾಲಾ ಕೊಠಡಿಗಳನ್ನು ನಿರ್ಮಿಸಬೇಕು. ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ ಸರ್ಕಾರ ಗಮನ ಹರಿಸಿಲ್ಲ. ಈಗಲಾದರೂ ನಮ್ಮ ಬೇಡಿಕೆಗೆ ಸ್ಪಂದಿಸಿದರೆ, ವಿಶ್ವೇಶ್ವರಯ್ಯನವರು ಇದ್ದು ಹೋಗಿದ್ದ ಶಾಲೆಯನ್ನು ಉಳಿಕೊಳ್ಳಬಹುದಾಗಿದೆ. ಜತೆಗೆ ಗ್ರಾಮೀಣ ಮಕ್ಕಳಿಗೆ ಸರ್ಕಾರಿ ಶಾಲೆಯೊಂದು ಉಳಿದಂತೆ ಆಗುತ್ತದೆ ಎನ್ನುವುದು ಸ್ಥಳೀಯರ ಅಭಿಪ್ರಾಯ.

 

ಶಾಲೆಯ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿದೆ. ಈ ಬಗ್ಗೆ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಶಾಲೆ ದುರಸ್ತಿ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಈಗಲಾದರೂ ಕಣ್ವ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಲಿ.

ಉಮೇಶ್, ಎಸ್‌ಡಿಎಂಸಿ ಅಧ್ಯಕ್ಷ, ಕಣ್ವ ಶಾಲೆ

 

ಇತಿಹಾಸವಿರುವ ಶಾಲಾ ಕಟ್ಟಡವನ್ನು ಶಿಕ್ಷಣ ಇಲಾಖೆ ದುರಸ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮಕ್ಕಳಿಗೆ ತೊಂದರೆ ಆಗುವುದರ ಜತೆಗೆ, ಐತಿಹಾಸಿಕ ಕಟ್ಟಡವನ್ನು ಕಳೆದುಕೊಳ್ಳಬೇಕಾಗುತ್ತದೆ.

ದೀಪು, ಮುಖಂಡ, ಕಣ್ವ ಉಳಿಸಿ ಹೋರಾಟ ಸಮಿತಿ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...