More

    ಕೂಡಲೇ ಜಮೀನು ಗುರುತಿಸಲು ಮುಂದಾಗಿ

    ಯಾದಗಿರಿ: ಸರ್ಕಾರ ನಗರದಲ್ಲಿನ ನಿರ್ಗತಿಕ ಕುಟುಂಬಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಮನೆಗಳನ್ನು ಮಂಜೂರು ಮಾಡಿದ್ದು, ಸರ್ಕಾರಿ ಜಮೀನು ಗುರುತಿಸುವಂತೆ ಅಧಿಕಾರಿಗಳಿಗೆ ಶಾಸಕ ವೆಂಕಟರಡ್ಡಿ ಮುದ್ನಾಳ್ ಸೂಚಿಸಿದರು.

    ಶನಿವಾರ ನಗರಸಭೆ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಆಶ್ರಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ನಗರಕ್ಕೆ 100 ಮನೆ ಮಂಜೂರಾಗಿದೆ. ನಗರ ಹೊರವಲಯದಲ್ಲಿ 20-30 ಎಕರೆ ಭೂಮಿ ಗುರುತಿಸಿ ನಿವೇಶನಗಳಾಗಿ ಮಾಪರ್ಾಡು ಮಾಡಬೇಕಿದೆ. ಹೀಗಾಗಿ ಅಧಿಕಾರಿಗಳು ವಿಳಂಬ ಮಾಡದೆ ಜಮೀನು ಗುರುತಿಸಬೇಕು ಎಂದು ನಿರ್ದೇಶನ ನೀಡಿದರು.

    ಜಮೀನು ಗುರುತಿಸಿದ ನಂತರ ಅರ್ಹ ಫಲಾನುಭವಿಗಳ ಆಯ್ಕೆ ಮಾಡಲಾಗುವುದು. ಈಗಾಗಲೇ ಸಾಕಷ್ಟು ವಿಳಂವಾಗಿದ್ದು, ಸೂರು ಇಲ್ಲದ ಬಡ ವರ್ಗದವರಿಗೆ ಪಾರದರ್ಶಕವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ನಗರಸಭೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

    ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿ ಪುಸ್ತಕ ಪರಿಶೀಲಿಸಿದ ಅವರು, ಸಾರ್ವಜನಿಕರಿಂದ ಯಾವ ಕಾರಣಕ್ಕೂ ದೂರು ಕೇಳಿ ಬರದಂತೆ ನೋಡಿಕೊಳ್ಳಬೇಕು. ಹಲವು ಬಡಾವಣೆಗಳಲ್ಲಿ ಮೂಲಸೌಕರ್ಯದ ಅಭಾವವಿದೆ ಎಂದು ಜನತೆ ಹೇಳುತ್ತಿದ್ದಾರೆ. ಹಂತ-ಹಂತವಾಗಿ ಕಲ್ಪಿಸಲು ಮುಂದಾಗಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು.

    ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್, ಉಪಾಧ್ಯಕ್ಷೆ ಪ್ರಭಾವತಿ ಕಲಾಲ, ಪೌರಾಯುಕ್ತ ಬಕ್ಕಪ್ಪ ಹೊಸಮನಿ ಇದ್ದರು.

    See also  ಸುಸೂತ್ರವಾಗಿ ನಡೆದ ಟಿಇಟಿ ಪರೀಕ್ಷೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts