17 C
Bangalore
Monday, December 9, 2019

ಕೃಷಿಯನ್ನು ತಪಸ್ಸಾಗಿ ಸ್ವೀಕರಿಸಿ

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಶಿರಸಿ: ಕೃಷಿಕ ಕೃಷಿಯನ್ನು ತಪಸ್ಸನ್ನಾಗಿ ಸ್ವೀಕರಿಸದಿದ್ದರೆ ಸಾಲ ಮನ್ನಾ ಸೌಲಭ್ಯ ಸಿಕ್ಕರೂ ಕಷ್ಟದಿಂದ ಹೊರ ಬರಲು ಸಾಧ್ಯವಿಲ್ಲ. ಸಹಕಾರಿ ಸಂಸ್ಥೆಗಳು ರೈತರಿಗೆ ಮಾರ್ಗದರ್ಶನ ನೀಡಬೇಕು ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ನಗರದ ಟಿಆರ್​ಸಿ ಸೊಸೈಟಿಯ ನವೀಕೃತ ಕಟ್ಟಡವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾಮಿಗಳ ಸಾಧನೆ ಮತ್ತು ರೈತರ ಸಾಧನೆಗೆ ಸಾಮ್ಯತೆ ಇದೆ. ಸ್ವಾಮೀಜಿ ಮೋಕ್ಷಕ್ಕಾಗಿ ನಿರಂತರ ತಪಸ್ಸು ಮಾಡುತ್ತಿದ್ದರೆ, ರೈತರು ಸಾಲದ ಬಂಧನದಿಂದ ಹೊರ ಬರಲು ಸತತ ಯತ್ನ ನಡೆಸುತ್ತಾರೆ. ವಿದ್ಯೆಯಲ್ಲಿ ಸಾಧನೆ ಮಾಡುವವರು ಪ್ರತಿ ಕ್ಷಣವನ್ನೂ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಂತೆ ರೈತ ತಾನು ಪಡೆದ ಸಾಲದ ಸದ್ಬಳಕೆ ಆಗುವಂತೆ ಯತ್ನಿಸಬೇಕು. ರೈತರಿಗೆ ಹಣಕಾಸು ಒದಗಿಸುವ ಸಂಸ್ಥೆಗಳೂ ಪೂರಕವಾಗಿ ಸಹಕಾರ ನೀಡಬೇಕು. ಟಿಆರ್​ಸಿ ಸೊಸೈಟಿ 105 ವರ್ಷಗಳಿಂದ ರೈತರ ಸೇವೆ ಮಾಡುತ್ತಿದೆ. ಸಂಸ್ಥೆಗೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಲು ಸುಸಜ್ಜಿತ ಕಟ್ಟಡ ಅಗತ್ಯವಾಗಿದೆ’ ಎಂದರು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವವರೂ ನಗರದತ್ತ ಆಸಕ್ತರಾಗುತ್ತಿದ್ದಾರೆ. ಮಹಾನಗರಕ್ಕೆ ಉದ್ಯೋಗಕ್ಕಾಗಿ ಹೋದ ಯುವಕರು ಅಲ್ಲಿಯೇ ಮನೆ ಮಾಡುತ್ತಿದ್ದಾರೆ. ರೈತರು ಎರಡು ಕಡೆ ಕಾಲಿಟ್ಟ ಸ್ಥಿತಿಯಲ್ಲಿದ್ದಾರೆ. ಆದರೆ, ಹಳ್ಳಿಯ ಮನೆ ಖಾಲಿ ಮಾಡಿ ನಗರದಲ್ಲಿ ವಾಸಿಸಬಾರದು. ಹಳ್ಳಿಯ ವಾತಾವರಣ ಸಾಂಸ್ಕೃತಿಕ ಮತ್ತು ಧಾರ್ವಿುಕತೆಯಿಂದ ಕೂಡಿರುತ್ತದೆ. ಹಳ್ಳಿ ಖಾಲಿಯಾದರೆ ಈ ಸಂಸ್ಕೃತಿಯೇ ಮರೆಯಾಗುವ ಸಾಧ್ಯತೆ ಇದೆ. ಕೃಷಿಯಲ್ಲಿ ಹಾನಿ ಎಂದಿಗೂ ಇರುವುದಿಲ್ಲ. ಬೆಲೆ ಏರಿಕೆ ಇಳಿಕೆಯ ಅಪಾಯ ತಪ್ಪಿಸಿಕೊಳ್ಳುವ ಸಲುವಾಗಿ ಒಂದು ಬೆಳೆಯನ್ನು ಮಾತ್ರ ನೆಚ್ಚಿಕೊಳ್ಳದೆ ಏಲಕ್ಕಿ, ಕಾಳು ಮೆಣಸು, ಬಾಳೆ ಇನ್ನಿತರ ಬೆಳೆಯನ್ನೂ ಬೆಳೆಯುವಂತಾಗಬೇಕು ಎಂದರು.

ಕಟ್ಟಡ ನಿರ್ವಣಕಾರ ವಿ. ಎನ್. ಹೆಗಡೆ ಬೊಮ್ನಳ್ಳಿ ಅವರನ್ನು ಸನ್ಮಾನಿಸಲಾಯಿತು. ಟಿಆರ್​ಸಿ ಅಧ್ಯಕ್ಷ ರಾಮಕೃಷ್ಣ ಹೆಗಡೆ ಕಡವೆ, ಟಿಎಸ್​ಎಸ್ ಅಧ್ಯಕ್ಷ ಶಾಂತಾರಾಮ ಹೆಗಡೆ ಕಡವೆ, ಜಿ. ವಿ. ಜೋಶಿ ಕಾಗೇರಿ ಇತರರಿದ್ದರು.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...