More

    ಕೆಎಸ್‌ಆರ್‌ಟಿಸಿ ನೌಕರರಿಂದ ಕಾಲ್ನಡಿಗೆ ಜಾಥಾ

    ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವಂತೆ ಒತ್ತಾಯಿಸಿ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಲ್ನಡಿಗೆ ಜಾಥಾ ಗುರುವಾರ ನಡೆಯಿತು.
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕೂಟ ನೇತೃತ್ವದಲ್ಲಿ ತೆರಳಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಕೆಎಸ್‌ಆರ್‌ಟಿಸಿ ನೌಕರರು ಹಗಲಿರುಳು ಎನ್ನದೆ ದುಡಿಯುತ್ತಾರೆ. ಸಂಸ್ಥೆಯಲ್ಲಿ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಿಗೂ ಸರ್ಕಾರದ ಅನುಮತಿ ಬೇಕಿರುತ್ತದೆ. ಆದರೆ ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಮಾತ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸರ್ಕಾರಿ ನೌಕರರಿಗೆ ಹೋಲಿಸಿದರೆ ವೇತನ ನಮ್ಮದು ಶೇ.30ರಷ್ಟು ಕಡಿಮೆ ಇದೆ. ಈಗಾಗಲೇ ನಮ್ಮ ಸಂಸ್ಥೆಯ ಕೆಲ ಕಾರ್ಮಿಕ ಸಂಘಟನೆಗಳು ವೇತನ ಹೆಚ್ಚಳಕ್ಕೆ ಮನವಿ ಸಲ್ಲಿಸಿವೆ. ಇದಕ್ಕೂ ಸ್ಪಂದನೆ ಸಿಗುತ್ತಿಲ್ಲ. ಪ್ರತಿಸಲ ಪ್ರತಿಭಟನೆ ಮಾಡಿಯೇ ಸಂಬಳ ಹೆಚ್ಚಿಸಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಕಡಿಮೆ ವೇತನದಲ್ಲಿ ಮಕ್ಕಳ ವಿದ್ಯಾಭ್ಯಾಸ, ಕುಟುಂಬ ನಿರ್ವಹಣೆ, ಆರೋಗ್ಯ ರಕ್ಷಣೆ ಸೇರಿ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಸಮಸ್ಯೆ ಹೇಳಿಕೊಂಡರು.
    ಈ ಕುರಿತು 3 ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಸರ್ಕಾರ ಕೂಡ ತಜ್ಞರ ಸಮಿತಿ ಮಾಡಿ ಆಶಾಭಾವ ಮೂಡಿಸಿದೆ. ಆದರೆ ತಜ್ಞರ ಸಮಿತಿಗೆ ಕಾಲಮಿತಿ ನಿಗದಿಗೊಳಿಸಿಲ್ಲ. ಬಜೆಟ್ ಅಧಿವೇಶನದಲ್ಲಿ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
    ಸಂಘಟನೆಯ ಮುಖಂಡರಾದ ಆನಂದ್, ಮಂಜುನಾಥ್, ಪರಮೇಶ್, ಗಣೇಶ್, ಪರಶುರಾಮ್ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts