20.4 C
Bengaluru
Sunday, January 19, 2020

ಕೆಜಿಎಫ್ ನಗರ ಜನರಿಗೆ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಕೆಜಿಎಫ್ : ಆಕಸ್ಮಿಕವಾಗಿ ನಾನು ರಾಜಕಾರಣಕ್ಕೆ ಬಂದಿದ್ದೇನೆ. ಆದರೆ, ಶಾಸಕಿಯಾಗಿ ಆಯ್ಕೆ ಮಾಡಿದ ಕೆಜಿಎಫ್ ಮತದಾರರ ಋಣ ತೀರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕಿ ಎಂ. ರೂಪಕಲಾ ಭರವಸೆ ನೀಡಿದರು.

ತಾಲೂಕಿನ ಪಾರಂಡಹಳ್ಳಿಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಿಂದ ಶುಕ್ರವಾರ 40 ಮಹಿಳಾ ಸಂಘದ ಮಹಿಳೆಯರಿಗೆ ಮಡಿಲು ತುಂಬಿ 1.83 ಕೋಟಿ ರೂ. ಶೂನ್ಯಬಡ್ಡಿ ಸಾಲ ವಿತರಿಸಿ ಮಾತನಾಡಿದರು.
ಕೆಜಿಎಫ್ ವ್ಯಾಪ್ತಿಯ ಬಡಜನರ ಸಂಕಷ್ಟ ಕಂಡಿದ್ದೇನೆ. ಇಲ್ಲಿನ ನಿರುದ್ಯೋಗ ಸಮಸ್ಯೆ, ಹಾಗೂ ತಾಯಂದಿರು ವಸತಿಯಿಲ್ಲದೆ ಪರದಾಡುವ ಸ್ಥಿತಿ ಗಮನಿಸಿದ್ದೇನೆ. ಆದ್ದರಿಂದ ಜನರಿಗೆ ವಸತಿ, ಶೌಚಗೃಹ, ಕುಡಿಯುವ ನೀರು, ಬದುಕಲು ಆರ್ಥಿಕ ಶಕ್ತಿ ತುಂಬಲು ನಾನು ಬದ್ಧವಾಗಿದ್ದೇನೆ ಎಂದರು.

ಮತ ನೀಡಿದ ಮತದಾರರು ಹಾಗೂ ದೇವರನ್ನು ನಾನು ನಂಬಿದ್ದೇನೆ. ಆದ್ದರಿಂದ ಜನರ ಸಮಸ್ಯೆ ನಿವಾರಣೆಗೆ ನಿತ್ಯ ದೇವರನ್ನು ಪ್ರಾರ್ಥಿಸಿ ಕೈಲಾದಷ್ಟು ಸಮಸ್ಯೆ ಪರಿಹರಿಸುವ ವಿಶ್ವಾಸದೊಂದಿಗೆ ಕೆಲಸ ಮಾಡುತ್ತಿದ್ದೇನೆ. ಕೆಜಿಎಫ್ ನೂತನ ತಾಲೂಕಾಗಿರುವುದರಿಂದ ಇನ್ನೂ ಅನೇಕ ಸೌಲಭ್ಯ ಸಿಗಬೇಕಿದೆ. ಇದಕ್ಕಾಗಿ ಸದನದಲ್ಲಿ ಹೋರಾಡುತ್ತೇನೆ ಎಂದರು.
ಮೀಟರ್‌ಬಡ್ಡಿ ಸಾಲದ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಬಡ ವ್ಯಾಪಾರಿಗಳು, ತಾಯಂದಿರ ನೋವಿನ ಅರಿವು ನನಗಿದೆ. ಅವರನ್ನು ಈ ಶೋಷಣೆಯಿಂದ ತಪ್ಪಿಸಲು ಡಿಸಿಸಿ ಬ್ಯಾಂಕ್ ಮೂಲಕ ಸಾಲ ನೀಡುತ್ತಿದ್ದು, ಸ್ವಾವಲಂಬಿಗಳಾಗಿ ಬದುಕು ನಡೆಸಲು ಅನುಕೂಲವಾಗುತ್ತದೆ ಎಂದರು.

ಡಿಸಿಸಿ ಬ್ಯಾಂಕ್ ಹಿಂದೆ ದಿವಾಳಿಯಾಗಿತ್ತು. ಇದರಿಂದ ಬಡವರಿಗೆ ನೆರವು ಸಿಗುತ್ತಿರಲಿಲ್ಲ. ಇದೀಗ ಬ್ಯಾಂಕ್ ಅಧ್ಯಕ್ಷ ಗೋವಿಂದಗೌಡರ ಬದ್ಧತೆ, ಪರಿಶ್ರಮದಿಂದ ಬ್ಯಾಂಕ್ ಚೇತರಿಕೆ ಕಂಡಿರುವುದರಿಂದ ತಾಲೂಕಿನ ಪ್ರತಿ ತಾಯಂದಿರಿಗೂ ಸಾಲ ಒದಗಿಸುವ ಇಚ್ಚಾಶಕ್ತಿ ನನಗಿದೆ. ಆದರೆ, ಸಾಲ ಪಡೆದವರು ಪ್ರಾಮಾಣಿಕವಾಗಿ ಮರುಪಾವತಿ ಮೂಡುವ ಮೂಲಕ ಮತ್ತಷ್ಟು ಬಡವರಿಗೆ ಸಾಲ ಸಿಗುವಂತೆ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ನಾರಾಯಣರೆಡ್ಡಿ, ನಗರಸಭೆ ಸದಸ್ಯರಾದ ರಮೇಶ್, ಜರ್ಮನ್, ಇಂದಿರಾಗಾಂಧಿ, ಕರುಣಾಕರನ್, ಸೆಂದಿಲ್‌ನಾದನ್, ಶಕ್ತಿವೇಲ್, ಮಲರ್ವೇಣಿ, ತಸ್ಲಿಮ್ ಖಾನ್, ಶಾಂತಿ ಅನ್ಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾದಲೈಮುತ್ತು ಇತರರು ಇದ್ದರು.

 

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...