25.9 C
Bengaluru
Wednesday, January 22, 2020

ಕೆಲವು ತಾಂತ್ರಿಕ ತೊಂದರೆಗಳು, ಕುಸಿದ ಸಖಿ ಮತಗಟ್ಟೆ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಯಲ್ಲಾಪುರ: ವಿಧಾನಸಭೆ ಉಪಚುನಾವಣೆಗಾಗಿ ಗುರುವಾರ ನಡೆದ ಮತದಾನ ಪ್ರಕ್ರಿಯೆಯು ಶಾಂತಿಯುತವಾಗಿ ಜರುಗಿತು. ಕೆಲ ತಾಂತ್ರಿಕ ತೊಂದರೆಗಳು ಉಂಟಾಗಿದ್ದು ಹೊರತುಪಡಿಸಿದರೆ, ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. ಕ್ಷೇತ್ರದಲ್ಲಿ 5 ಮತಗಟ್ಟೆಗಳ 6 ವಿವಿ ಪ್ಯಾಟ್ ಯಂತ್ರಗಳಲ್ಲಿ ದೋಷ ಕಂಡುಬಂತು. ತಕ್ಷಣ ಅದನ್ನು ಬದಲಾಯಿಸಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಯಿತು.

ಕುಸಿದು ಬಿದ್ದ ಪೆಂಡಾಲ್: ಪಟ್ಟಣದ ಕೆಜಿಎಸ್ ಶಾಲೆ ಮತಗಟ್ಟೆಯನ್ನು ಸಖಿ ಮತಗಟ್ಟೆಯಾಗಿ ರೂಪಿಸಲಾಗಿತ್ತು. ಈ ಶಾಲೆಯ ಆವಾರದಲ್ಲಿ ಹಾಕಲಾಗಿದ್ದ ಪೆಂಡಾಲ್ ಕುಸಿದು ಬಿದ್ದು ಆತಂಕ ಸೃಷ್ಟಿಸಿತು. ದಪ್ಪನೆಯ ಕಬ್ಬಿಣದ ಸರಳುಗಳನ್ನು ಹಗ್ಗದಿಂದ ಬಿಗಿಯದೇ, ಕಟ್ಟಡದ ಮೇಲ್ಭಾಗದಲ್ಲಿ ಹಾಗೆಯೇ ಇರಿಸಿದ್ದರಿಂದ ಅದು ಪೆಂಡಾಲ್ ಬೀಳಲು ಕಾರಣವಾಗಿದೆ. ಸಖಿ ಮತಗಟ್ಟೆಯ ಆವಾರದಲ್ಲಿ ಚಿಕ್ಕ ಮಕ್ಕಳಿಗಾಗಿ ಆಟಿಕೆ ಸಾಮಗ್ರಿಗಳನ್ನು ಇರಿಸಲಾಗಿತ್ತು. ಆದರೆ, ಕೊಂಚ ದೂರದಲ್ಲಿ ಮಕ್ಕಳು ಆಟವಾಡುತ್ತಿದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಬೆಳಗ್ಗೆ 9.30 ರ ವೇಳೆಗೆ ಪೆಂಡಾಲ್ ಕುಸಿದರೂ ಅದನ್ನು ಸರಿಪಡಿಸಿರಲಿಲ್ಲ. ನಂತರ ಮಾಧ್ಯಮದವರು ಸ್ಥಳಕ್ಕೆ ಹೋಗಿ ಫೋಟೋ ತೆಗೆಯುತ್ತಿದ್ದಂತೆ ತಕ್ಷಣ ಸರಿಪಡಿಸಲಾಯಿತು.

ವ್ಯಕ್ತಿಯೊಬ್ಬರು ಮತದಾನ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ. ಇದು ಯಲ್ಲಾಪುರ ಕ್ಷೇತ್ರದ್ದು ಎಂದು ಹೇಳಲಾಗಿದ್ದು, ಅಧಿಕಾರಿಗಳು ಖಚಿತಪಡಿಸಬೇಕಾಗಿದೆ. ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಮತಗಟ್ಟೆಯೊಂದರಿಂದ ತುಸು ದೂರದಲ್ಲಿ ವೃದ್ಧೆಯೊಬ್ಬರು ಕಡಿಮೆ ಹಣ ನೀಡಿದ ಕಾರಣಕ್ಕಾಗಿ ಸ್ಥಳೀಯ ಮುಖಂಡರೊಬ್ಬರನ್ನು ತರಾಟೆಗೆ ತೆಗೆದುಕೊಂಡರು. ‘ಒಂದು ಮತಕ್ಕೆ 1000 ರೂ. ಕೊಡುವುದಾಗಿ ತಿಳಿಸಿ 900 ರೂ. ಮಾತ್ರ ನೀಡಿದ್ದಾರೆ. ಬಡವರ ದುಡ್ಡನ್ನು ಮುಖಂಡರು ಹೊಡೆಯುತ್ತಿದ್ದಾರೆ’ ಎಂದು ಅಸಮಾಧಾನ ಹೊರ ಹಾಕಿದರು.

ಇನ್ನು ಕೋಟೆಮನೆ ಶಾಲೆಯಲ್ಲಿ ಬುಡಕಟ್ಟು ಮತಗಟ್ಟೆ ಸ್ಥಾಪಿಸುವುದಾಗಿ ತಿಳಿಸಿದ ಅಧಿಕಾರಿಗಳು ಕೊನೆ ಕ್ಷಣದವರೆಗೂ ಯಾವುದೇ ತಯಾರಿ ಮಾಡಿರದ ಕುರಿತು ‘ವಿಜಯವಾಣಿ’ ವರದಿ ಪ್ರಕಟಿಸಿತ್ತು. ಗುರುವಾರ ಬೆಳಗ್ಗೆ ಹೊತ್ತಿಗೆ ಸಂಪೂರ್ಣ ಸಿದ್ಧತೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಒಂದಷ್ಟು ಕುರ್ಚಿಗಳನ್ನು ಮತಗಟ್ಟೆಯ ಆವಾರದಲ್ಲಿ ಹಾಕಿದ್ದು ಬಿಟ್ಟರೆ ಹೆಚ್ಚುವರಿಯಾಗಿ ಮತ್ತೇನೂ ಮಾಡಿಲ್ಲ. ಕಳೆದ ಚುನಾವಣೆಯ ಭಾವಚಿತ್ರಗಳೇ ಮತದಾರರನ್ನು ಸ್ವಾಗತಿಸಿದವು.

ಪಟ್ಟಿಯಲ್ಲಿ ಹೆಸರಿಲ್ಲದೇ ಪರದಾಟ: ಪಟ್ಟಣ ಪಂಚಾಯಿತಿ ಮತಗಟ್ಟೆಯಲ್ಲಿ ಮಹಿಳೆಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣ ಮತದಾನ ಮಾಡಲು ಸಾಧ್ಯವಾಗದೇ ವಾಪಸಾದರು. ಪಾರ್ವತಿ ಭಾಸ್ಕರ ಪೈ ಎಂಬ ಮಹಿಳೆ ಮತ ಚಲಾಯಿಸಲೆಂದು ಪ.ಪಂ ಮತಗಟ್ಟೆಗೆ ಗುರುತಿನ ಚೀಟಿ ಸಹಿತ ಬಂದಾಗ ಪಟ್ಟಿಯಲ್ಲಿ ಅವರ ಹೆಸರಿಲ್ಲದೇ ಇರುವುದು ತಿಳಿದು ಬಂದಿದೆ. ನಂತರ ವೆಬ್​ಸೈಟ್​ನಲ್ಲಿ ಪರಿಶೀಲಿಸಿದಾಗ ‘ನಾಟ್ ಫೌಂಡ್’ ಎಂದು ತೋರಿಸಿದ್ದು, ಮತ ಚಲಾಯಿಸಲು ಸಾಧ್ಯವಾಗದೇ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಏಪ್ರಿಲ್​ನಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇದೇ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದೆ. ಆದರೆ, ಮತದಾರರ ಪಟ್ಟಿಯಲ್ಲಿ ಈಗ ಏಕಾಏಕಿ ಹೆಸರು ಮಾಯವಾಗಿದ್ದು ಹೇಗೆ ಎಂದು ಪ್ರಶ್ನಿಸಿದರು.

ಬೂತ್​ಗಳಿಗೆ ತೆರಳಿದ ಬಿಜೆಪಿ ಅಭ್ಯರ್ಥಿ: ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಯಲ್ಲಾಪುರ, ಮುಂಡಗೋಡ, ಬನವಾಸಿ ಭಾಗದ ವಿವಿಧೆಡೆ ಬೂತ್​ಗಳಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಿದರು.

ತಾಲೂಕಿನತ್ತ ಬಾರದ ಅಭ್ಯರ್ಥಿಗಳು: ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ, ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ಹಾಗೂ ಇತರ ಅಭ್ಯರ್ಥಿಗಳಾರೂ ತಾಲೂಕಿನತ್ತ ಸುಳಿಯಲಿಲ್ಲ. ತಾಲೂಕಿನ ಬಹುತೇಕ ಬೂತ್​ಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಏಜೆಂಟರೂ ಇರಲಿಲ್ಲ. ಗ್ರಾಮೀಣ ಭಾಗದ ಕೆಲ ಮತಗಟ್ಟೆಗಳ ಎದುರು ಕೆಲವೇ ಕೆಲವು ಕಾರ್ಯಕರ್ತರು ಜಮಾಯಿಸಿದ್ದರು.

ಚುನಾವಣೆ ಕಾರ್ಯಕ್ಕೆ ಮಕ್ಕಳ ಬಳಕೆ?: ತಾಲೂಕಿನ ಉಪಳೇಶ್ವರ ಭಾಗದಲ್ಲಿ ಚುನಾವಣೆ ಕಾರ್ಯಕ್ಕೆ ಶಿಕ್ಷಕರೊಬ್ಬರು ಮಕ್ಕಳನ್ನು ಬಳಸಿಕೊಂಡ ಬಗೆಗೆ ಆರೋಪ ಕೇಳಿ ಬಂದಿದೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...