25.7 C
Bangalore
Sunday, December 15, 2019

ಕೇಂದ್ರದಿಂದ ನಿರುದ್ಯೋಗ ಸೃಷ್ಟಿ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಚಿಕ್ಕಮಗಳೂರು: ಜನಪರ ಆಡಳಿತ ನೀಡುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಪ್ರತಿ ವರ್ಷ ಯುವಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಕೇಂದ್ರದಲ್ಲಿ ಮೋದಿ ಇರುವವರೆಗೆ ಉದ್ಯೋಗ ಸೃಷ್ಟಿಯಾಗುವುದಿಲ್ಲ. ಉಭಯ ಸರ್ಕಾರಗಳ ಚುನಾವಣಾ ಪೂರ್ವದ ಯಾವ ಆಶ್ವಾಸನೆಗಳೂ ಈಡೇರಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಮಾತನಾಡಿ, ಆರು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಘೊಷಣೆಗಷ್ಟೇ ಸೀಮಿತವಾಗಿದೆ. ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಅವರ ಉದ್ಯಮಿ ಸ್ನೇಹಿತರಿಗೆ ಮಾತ್ರ ಒಳ್ಳೆಯ ದಿನಗಳು ಬಂದಿದೆ. ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಗ್ರಾಮೀಣ ಜನರ ಬದುಕು ಸರ್ವನಾಶವಾಗಿದೆ. ನೋಟು ಅಮಾನ್ಯೀಕರಣದಿಂದ ಕಾರ್ವಿುಕ ವಲಯ, ಸಣ್ಣ ಉದ್ಯಮಗಳು ತೊಂದರೆಗೀಡಾಗಿವೆ. ಮಾರಕ ಆರ್​ಸಿಇಪಿ ಒಪ್ಪಂದಕ್ಕೂ ಕೇಂದ್ರ ಸಹಿ ಮಾಡಲು ಮುಂದಾಗಿತ್ತು. ಕಾಂಗ್ರೆಸ್ ಹೋರಾಟದ ಪರಿಣಾಮ ಅದು ತಪ್ಪಿದೆ ಎಂದರು.

ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ. ಡಿ.ಎಲ್.ವಿಜಯಕುಮಾರ್ ಮಾತನಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ದೇಶದ ಆರ್ಥಿಕತೆ ಉತ್ತಮ ಸ್ಥಿತಿಯಲ್ಲಿತ್ತು. ಬಿಜೆಪಿ ಬಂದ ನಂತರ ಸಂಪೂರ್ಣ ಹದಗೆಟ್ಟಿದೆ. ಇದೀಗ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಲಹೆ ಪಡೆಯುವ ಹಂತಕ್ಕೆ ತಲುಪಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ರೈತರು ಅತಿವೃಷ್ಟಿ, ಅನಾವೃಷ್ಟಿಯಿಂದ ತೊಂದರೆಗೀಡಾಗಿದ್ದಾರೆ. ಇವೆಲ್ಲವನ್ನೂ ಮರೆಮಾಚಿ ಹೊರದೇಶಗಳಲ್ಲಿ ಭಾಷಣ ಮಾಡುವ ಮೋದಿ ನಮ್ಮ ದೇಶ ಸದೃಢವಾಗಿದೆ ಎನ್ನುತ್ತಿದ್ದಾರೆ ಎಂದು ದೂರಿದರು.

ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ಮಾಜಿ ಎಂಎಲ್​ಸಿ ಎ.ವಿ.ಗಾಯತ್ರಿ ಶಾಂತೇಗೌಡ, ಮುಖಂಡರಾದ ಎಂ.ಎಲ್.ಮೂರ್ತಿ, ಕೆ.ಮಹಮ್ಮದ್, ಎಚ್.ಪಿ.ಮಂಜೇಗೌಡ, ಎಂ.ಸಿ.ಶಿವಾನಂದಸ್ವಾಮಿ ಇತರರಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...