25.7 C
Bangalore
Sunday, December 15, 2019

ಕೇಂದ್ರ ಸರ್ಕಾರದಿಂದ ತುಘಲಕ್ ಆಡಳಿತ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹಾವೇರಿ: ಕೇಂದ್ರ ಸರ್ಕಾರ ದೇಶದ ಜನರನ್ನು ವೈರಿಗಳಂತೆ ನೋಡುತ್ತಿದೆ. ತುಘಲಕ್ ದರ್ಬಾರ ರೀತಿ ಆಡಳಿತ ನಡೆಸುತ್ತಿದೆ. ಎಲ್ಲದಕ್ಕೂ ದಂಡ, ಶಿಕ್ಷೆ, ತೆರಿಗೆ ವಿಧಿಸುತ್ತಿದೆ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಟೀಕಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋಟಾರು ವಾಹನ ಪರಿಷ್ಕೃತ ಕಾಯ್ದೆಯನ್ನು ರಾಜ್ಯದ ರಸ್ತೆಗಳು ಸರಿ ಆಗುವವರೆಗೂ ಜಾರಿಗೆ ತರಲ್ಲ ಎಂದು ಗೋವಾ ಸರ್ಕಾರ ಹೇಳಿದ್ದು, ಇದನ್ನು ನಾವು ಪ್ರಶಂಸಿಸುತ್ತೇವೆ. ಆದರೆ, ರಾಜ್ಯದ ಮುಖ್ಯಮಂತ್ರಿ, ಸಂಸದರಿಗೆ ಆ ರೀತಿ ಹೇಳುವ ಧೈರ್ಯವಿಲ್ಲ. ಯಡಿಯೂರಪ್ಪ, ಸಂಸದರು ರಾಜ್ಯದ ಜನರಿಗೆ ಹೆದರಬೇಕೇ ಹೊರತು, ಮೋದಿ, ಅಮಿತ್ ಷಾ ಅವರಿಗಲ್ಲ ಎಂದರು.

ರಾಜ್ಯ ಸರ್ಕಾರಕ್ಕೆ ಜನಪರ ಕಾಳಜಿಯಿದ್ದರೆ ದುಬಾರಿ ದಂಡ ವಿಧಿಸುವುದನ್ನು ಆರು ತಿಂಗಳು ತಡೆಹಿಡಿದು, ಜನಜಾಗೃತಿ ಮೂಡಿಸಲಿ. ಬಳಿಕ ದಂಡ ಕಡಿಮೆ ಮಾಡಿ ಅನುಷ್ಠಾನಕ್ಕೆ ತರಲಿ. ಪೊಲೀಸರಿಗೆ ದಂಡ ಕಡಿಮೆಯಿದ್ದಾಗ ಇಲ್ಲದ ಆಸಕ್ತಿ ದಂಡ ಜಾಸ್ತಿಯಾದ ಮೇಲೆ ಹೆಚ್ಚಾಗಿರುವುದು ಸಹ ವಿಪರ್ಯಾಸ ಎಂದರು.

ಅಮೆರಿಕ, ದುಬೈ ನೋಡಿ ಬಂದು ಮೋಟಾರು ವಾಹನ ಕಾಯ್ದೆ ಪರಿಷ್ಕರಿಸಿದ ಭಾರಿ ದಂಡ ಕಾನೂನು ತಂದಿದ್ದಾರೆ. ಬಾಯಲ್ಲಿ ಸ್ವದೇಶಿ. ಅನುಷ್ಠಾನದಲ್ಲಿ ವಿದೇಶಿ ಅನುಕರಣೆ ಮಾಡುತ್ತಿದೆ. ದೇಶದ ಆರ್ಥಿಕತೆ ಕುಸಿದಿದೆ. ಉದ್ಯೋಗ ಕಡಿತಗೊಳ್ಳುತ್ತಿದೆ. ಹೊಸ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಎಲ್ಲ ಪರಿಸ್ಥಿತಿಯನ್ನು ನಿಭಾಯಿಸುವುದು ಬಿಟ್ಟು ಕೇಂದ್ರ ಸರ್ಕಾರ, ಜನರ ಭಾವನಾತ್ಮಕ ವಿಚಾರಗಳನ್ನಿಟ್ಟುಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ಪ್ರಧಾನಿ ಮೋದಿಯವರು ಮುಖ್ಯಮಂತ್ರಿ ಭೇಟಿಗೂ ಸಮಯ ನೀಡಿಲ್ಲ. ಇದು ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದರು.

ಸರ್ವಪಕ್ಷ ಸಭೆ ಕರೆಯಿರಿ

ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸದೇ ಸರ್ಕಾರ, ಸಂತ್ರಸ್ತರನ್ನು ಕಡೆಗಣಿಸಿದೆ. ಕೇಂದ್ರದಿಂದ ಒಂದು ನಯಾಪೈಸೆಯೂ ಬಂದಿಲ್ಲ. ನೆರೆ ವಿಚಾರವಾಗಿ ರಾಜ್ಯ ಸರ್ಕಾರ ಸರ್ವ ಪಕ್ಷಗಳ ಸಭೆ ಮಾಡಬೇಕು. ತುರ್ತು ಅಧಿವೇಶನ ನಡೆಸಬೇಕಿತ್ತು. ಅದನ್ನೂ ಮಾಡಿಲ್ಲ. ಸಂತ್ರಸ್ತರಿಗೆ ಧ್ವನಿಯಾಗುವ ಉದ್ದೇಶದಿಂದ ಪಕ್ಷವು ಸೆ. 24ರಂದು ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ ಎಂದರು.

ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಮನೋಹರ ತಹಸೀಲ್ದಾರ್, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಕಾಂಗ್ರೆಸ್ ಪ್ರಮುಖರಾದ ಕೊಟ್ರೇಶಪ್ಪ ಬಸೇಗಣ್ಣಿ, ಸಂಜೀವಕುಮಾರ ನೀರಲಗಿ, ಎಂ.ಎಂ. ಹಿರೇಮಠ, ನಾಗರಾಜ ಬಸೇಗಣ್ಣಿ, ಎಂ.ಎಂ. ಮೈದೂರ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...