More

  ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಪ್ರತಿಭಟನೆ

  ರಾಮದುರ್ಗ: ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ನೀತಿಗಳ ವಿರುದ್ಧವಾಗಿ ಜ.23ರಿಂದ 25ರ ವರೆಗೆ ರಾಜ್ಯದ ಎಲ್ಲ ಸಂಸದರ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಾಗೂ ಜ.17ರಿಂದ 20ರ ವರೆಗೆ ಜಿಲ್ಲಾದ್ಯಂತ ಜನಜಾಗತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಗೈಬು ಜೈನೆಖಾನ್ ಹೇಳಿದರು.

  ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಮತ್ತಷ್ಟು ತಾಂಡವಾಡುತ್ತಿದೆ. ಕಾರ್ಮಿಕರ ಪರವಾಗಿ ಇರುವ ಕಾನೂನುಗಳ ತಿದ್ದುಪಡಿ ಮಾಡಿ ಅವರನ್ನು ಶೋಷಣೆಗೆ ಒಳಪಡಿಸಲಾಗುತ್ತಿದೆ. ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುತ್ತಿಲ್ಲ. ಪಿಎಸ್‌ಯುಗಳನ್ನು ಖಾಸಗೀಕರಣ ಮಾಡಿ ಬಂಡವಾಳಶಾಹಿ ನೀತಿ ಅನುಸರಿಸಲಾಗುತ್ತಿದೆ. ರೈತರಿಗೆ ಬೆಂಬಲ ಬೆಲೆ ದೊರೆಯುತ್ತಿಲ್ಲ ಎಂದು ಆರೋಪಿಸಿದರು.

  ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರಗಳನ್ನು ಖಂಡಿಸಿ ಸಿಐಟಿಯು ನೇತತ್ವದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತಿದೆ. ಅದಕ್ಕೂ ಮೊದಲು ಹೋರಾಟದ ಉದ್ದೇಶಗಳನ್ನು ತಿಳಿಸಿ ಜನತೆಯನ್ನು ಜಾಗತಿಗೊಳಿಸಲು ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
  ಜಿಲ್ಲಾ ಉಪಾಧ್ಯಕ್ಷ ನಾಗಪ್ಪ ಸಂಗೊಳ್ಳಿ, ಸಹಕಾರ್ಯದರ್ಶಿಗಳಾದ ಸರಸ್ವತಿ ಮಾಳಶೆಟ್ಟಿ, ತುಳಸಾ ಮಾಳದಕರ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts