ಕೇಸರಿ ಪಡೆಯಲ್ಲಿ ಬಂಡಾಯ

Latest News

ರಫೇಲ್​ ತೀರ್ಪು ಸತ್ಯಕ್ಕೆ ದೊರೆತ ಗೆಲುವೆಂದು ಬಣ್ಣಿಸಿದ ಕೇಂದ್ರ ಸಚಿವ ರವಿಶಂಕರ್​ ಪ್ರಸಾದ್: ಕ್ಷಮೆ ಕೇಳುವಂತೆ ರಾಹುಲ್​ಗೆ ಆಗ್ರಹ​

ನವದೆಹಲಿ: ರಫೇಲ್​ ಒಪ್ಪಂದದ ವಿಚಾರವಾಗಿ ಕಾಂಗ್ರೆಸ್​ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂತಸ ಮನೆಮಾಡಿದೆ. ಇದು ಸತ್ಯಕ್ಕೆ...

ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಹುಲ್​ ಗಾಂಧಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು, ಹೀಗೆಂದವರು ಯಾರು?

ಪಣಜಿ: ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು ಎಂದು ಮಾಜಿ ರಕ್ಷಣಾ ಸಚಿವ ಮನೋಹರ್​...

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ

ಕಾರ್ಗಲ್: ಪಪಂ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಒದಗಿಸುವುದು ಬಿಜೆಪಿಯ ಆದ್ಯ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್ ತಿಳಿಸಿದರು. ಕಾರ್ಗಲ್​ನಲ್ಲಿ ಗುರುವಾರ...

ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ

ತ್ಯಾಗರ್ತಿ: ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ ಆಗಿದ್ದು ಇವುಗಳ ಸಂರಕ್ಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಹೇಳಿದರು. ಸಮೀಪದ...

ಗ್ರಾಮಸ್ಥರ ಒಕ್ಕಲೆಬ್ಬಿಸಲು ಬಿಡಲ್ಲ

ಹೊಳೆಹೊನ್ನೂರು: ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಗ್ರಾಮಸ್ಥರನ್ನು ಯಾವುದೆ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಅಶೋಕ್​ನಾಯ್್ಕ ಅಭಯ ನೀಡಿದರು. ಭದ್ರಾವತಿ ತಾಲೂಕಿನ...

ಶಿಗ್ಗಾಂವಿ: ಭಾವೈಕ್ಯದ ನಾಡು ಶಿಗ್ಗಾಂವಿ ಪುರಸಭೆ ಚುನಾವಣೆಯಲ್ಲಿ ಕೈ- ಕಮಲ ಪಕ್ಷಗಳಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಟಿಕೆಟ್ ವಂಚಿತರಲ್ಲಿ ಅಸಮಾಧಾನ ಭುಗಿಲೇಳುವ ಪರಿಸ್ಥಿತಿ ಕಂಡುಬರುತ್ತಿದೆ.

ಎಲ್ಲ 23 ಸ್ಥಾನಗಳಿಗೆ ಕೈ- ಕಮಲ ಪಕ್ಷದಿಂದ ಅಭ್ಯರ್ಥಿಗಳು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಟಿಕೆಟ್ ವಂಚಿತರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡೇಳುವ ಸೂಚನೆ ನೀಡಿದ್ದಾರೆ. ಮೇ 20 ನಾಮಪತ್ರ ವಾಪಸಾತಿಗೆ ಕೊನೆಯ ದಿನವಾಗಿದ್ದು, ಅಲ್ಲಿಯವರೆಗೆ ಬಂಡಾಯ ಅಭ್ಯರ್ಥಿಗಳನ್ನು ಸಮಾಧಾನಪಡಿಸುವ ಕೆಲಸ ಭರದಿಂದ ಸಾಗಿದೆ.

ಬಿಜೆಪಿಯಿಂದ ಅರ್ಧ ಡಜನ್​ಗೂ ಹೆಚ್ಚಿನ ಆಕಾಂಕ್ಷಿಗಳು ಬಂಡೇಳುವ ಸೂಚನೆ ನೀಡಿದ್ದಾರೆ.ಇನ್ನು ಪಕ್ಷದ ಹಿರಿಯ ನಾಯಕರು ಕೈಗೊಂಡ ಟಿಕೆಟ್ ಹಂಚಿಕೆಯ ನಿರ್ಣಯದಿಂದ ಅಸಮಾಧಾನ ಹೊರಹಾಕದೆ ಒಳಗೊಳಗೆ ಕುದಿಯತ್ತಿರುವ ಕೆಲ ಆಕಾಂಕ್ಷಿಗಳು, ಪಕ್ಷಕ್ಕೆ ದುಡಿದ ನಿಷ್ಟಾವಂತರನ್ನು ಕಡೆಗಣಿಸಿ, ಪಕ್ಷದ್ರೋಹ ಬಗೆದವರಿಗೆ, ಪಕ್ಷದ ಸದಸ್ಯತ್ವ ಇಲ್ಲದವರಿಗೆ, ಗುತ್ತಿಗೆದಾರರಿಗೆ ಟಿಕೆಟ್ ನೀಡಿದ್ದಾರೆ ಎಂದು ತಮ್ಮ ಆಪ್ತರ ಬಳಿ ಮಾತನಾಡಿಕೊಳ್ಳುತ್ತಿದ್ದಾರೆ.

ಹಾಲಿ ಅಧ್ಯಕ್ಷರಿಗಿಲ್ಲ ಟಿಕೆಟ್:
ಶಿಗ್ಗಾಂವಿ ಪುರಸಭೆಯ ಹಾಲಿ ಅಧ್ಯಕ್ಷ ಶಿವಪ್ರಸಾದ ಸುರಗಿಮಠ ಅವರು ಬಿಜೆಪಿಯ ಕಟ್ಟಾ ಕಾರ್ಯಕರ್ತರು. ಅವರಿಗೆ ಟಿಕೆಟ್ ತಪ್ಪಿರುವುದರಿಂದ ಬಿಜೆಪಿ ವಿರುದ್ಧ ಸಹಜವಾಗಿ ಆಕ್ರೋಶವೆದ್ದಿದೆ. ಇನ್ನೊಬ್ಬ ಬಿಜೆಪಿ ಹಾಲಿ ಸದಸ್ಯ ಫಕೀರೇಶ ಶಿಗ್ಗಾಂವಿ ಅವರಿಗೂ ಟಿಕೆಟ್ ಕೈತಪ್ಪಿರುವುದು ಕೆಲ ನಿಷ್ಠಾವಂತ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಸವಣೂರಿನಲ್ಲಿ ಆದಂತೆ ಶಿಗ್ಗಾಂವಿಯಲ್ಲಿಯೂ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಎಂಬ ಮಾತುಗಳು ಮತದಾನಕ್ಕೂ ಮುನ್ನವೇ ಬಿಜೆಪಿಯ ಕಾರ್ಯಕರ್ತರಿಂದ ಕೇಳಿಬರತೊಡಗಿವೆ.

ಬಹುಮತವಿಲ್ಲದಿದ್ದರೂ ಬಿಜೆಪಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬೆಂಬಲ ಕೊಟ್ಟಿದ್ದ ಬಿಎಸ್​ಆರ್ ಕಾಂಗ್ರೆಸ್ ಪಕ್ಷದ ಸದಸ್ಯೆ ವೀಣಾ ಕುರ್ಡೆಕರ ಅವರಿಗೂ ಈಗ ಬಿಜೆಪಿಯು ಟಿಕೆಟ್ ನಿರಾಕರಿಸಿದೆ. ಇದರಿಂದ ಬೇಸರಗೊಂಡಿರುವ ವೀಣಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸಾಮಾನ್ಯ ವಾರ್ಡ್​ಗಳಲ್ಲಿ ಪಕ್ಷ ನಿಷ್ಠೆಯುಳ್ಳವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿದೆ. ಪಕ್ಷದ್ರೋಹ ಮಾಡಿದವರು, ಗುತ್ತಿಗೆದಾರರಿಗೆ, ಪಕ್ಷದ ಸದಸ್ಯತ್ವ ಇಲ್ಲದವರಿಗೂ ಟಿಕೆಟ್ ನೀಡಿದ್ದಾರೆ. ಇದರ ಪರಿಣಾಮವನ್ನು ಬಿಜೆಪಿ ಅನುಭವಿಸುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಕಾರ್ಯಕರ್ತರೊಬ್ಬರು ‘ವಿಜಯವಾಣಿ’ಗೆ ತಿಳಿಸಿದರು.

ಕೈನಲ್ಲೂ ಬಂಡಾಯ:
ಕಾಂಗ್ರೆಸ್ ಪಕ್ಷದಲ್ಲಿಯೂ ಟಿಕೆಟ್​ಗಾಗಿ ಫೈಟ್ ನಡೆದಿದ್ದು, ಆದರೆ, ಬಿಜೆಪಿಯಷ್ಟು ಹೆಚ್ಚಿನ ಪ್ರಮಾಣದಲ್ಲಿಲ್ಲ. ನಾಯಕರಿಗೆ ಆಪ್ತರಾಗಿದ್ದ ಕೊಟ್ರಪ್ಪ ನಡೂರು, ಇಂದ್ರಮ್ಮ ಹಾವೇರಿ, ಮಂಜುನಾಥ ಮಣ್ಣಣ್ಣವರ ಅವರಿಗೆ ಟಿಕೆಟ್ ತಪ್ಪಿದೆ. ಟಿಕೆಟ್ ವಂಚಿತರಲ್ಲಿ ಕೆಲವರು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧೆ ಒಡ್ಡಲು ಸಜ್ಜಾಗಿದ್ದರೆ, ಇನ್ನು ಕೆಲವರು ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಸೋಲಿಸಲು ಈಗಲೇ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಜೆಡಿಎಸ್​ನಲ್ಲಿಲ್ಲ ಪೈಪೋಟಿ:
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದರೂ ಸ್ಥಳೀಯ ಮಟ್ಟದಲ್ಲಿ ಆ ಮೈತ್ರಿ ನಡೆದಿಲ್ಲ. ಹೀಗಾಗಿ, ಜೆಡಿಎಸ್​ನಿಂದಲೂ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಆದರೆ, ಪೂರ್ಣ ಪ್ರಮಾಣದಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಲು ಜೆಡಿಎಸ್​ಗೆ ಸಾಧ್ಯವಾಗಿಲ್ಲ.

ಬಂಡಾಯ ಶಮನಕ್ಕೆ ಸರ್ಕಸ್
ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡೆದ್ದಿರುವವರ ಮನವೊಲಿಸುವ ಸರ್ಕಸ್ ಅನ್ನು ಕೈ- ಕಮಲದ ವರಿಷ್ಠರು ಆರಂಭಿಸಿದ್ದಾರೆ. ನಾಮಪತ್ರ ವಾಪಸಾತಿಗೆ ಮೇ 20 ಕೊನೆಯ ದಿನವಾಗಿದ್ದು, ಅಷ್ಟರೊಳಗೆ ಅವರ ಮನವೊಲಿಸಿ ನಾಮಪತ್ರ ಹಿಂಪಡೆಯುವಂತೆ ಮಾಡಲು ನಿರತರಾಗಿದ್ದಾರೆ.

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...