22.8 C
Bengaluru
Saturday, January 18, 2020

ಕೇಸರಿ ಪಾಳಯ ಸೇರಿದ ಕೌರವನಿಗೆ ಮತ್ತೆ ಪಟ್ಟ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಹಾವೇರಿ: ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲೆಯ ಹಿರೇಕೆರೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಜೋಡೆತ್ತಿಗೆ ಮತದಾರ ಜೈ ಎಂದಿದ್ದಾರೆ. ಯು.ಬಿ. ಬಣಕಾರ ನಂತರ 25 ವರ್ಷಗಳ ಬಳಿಕ ಬಿ.ಸಿ. ಪಾಟೀಲ ಕ್ಷೇತ್ರದಲ್ಲಿ ಕಮಲವನ್ನು ಅರಳಿಸಿದ್ದಾರೆ. ಇದೇ ಮೊದಲ ಬಾರಿಗೆ ಅತಿಹೆಚ್ಚು ಮತಗಳ ಅಂತರದಲ್ಲಿ ಈ ಕ್ಷೇತ್ರದಲ್ಲಿ ಗೆದ್ದ ದಾಖಲೆಯೂ ನಿರ್ವಣವಾಗಿದೆ.

ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 29,076 ಮತಗಳ ಅಂತರದಿಂದ ಗೆದ್ದು ಅನರ್ಹತೆ ಕಳಂಕದಿಂದ ಮುಕ್ತರಾಗಿದ್ದಾರೆ.

ಕಳೆದ ನಾಲ್ಕು ಚುನಾವಣೆಗಳಿಂದ ನೇರ ಪ್ರತಿಸ್ಪರ್ಧಿಗಳಾಗಿದ್ದ ಬಿ.ಸಿ. ಪಾಟೀಲ ಮತ್ತು ಯು.ಬಿ. ಬಣಕಾರ ಒಂದಾಗಿದ್ದು, ಆರಂಭದಲ್ಲಿಯೇ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿತ್ತು. 2018ರ ಚುನಾವಣೆಯಲ್ಲಿ ಇವರಿಬ್ಬರೇ ಒಟ್ಟು ಮತಗಳಲ್ಲಿ ಶೇ. 95ರಷ್ಟು ಮತಗಳನ್ನು ಗಳಿಸಿದ್ದರು. ಈ ಚುನಾವಣೆಯಲ್ಲಿ ಇಬ್ಬರು ಒಂದಾಗಿದ್ದು, ಕಾಂಗ್ರೆಸ್ ಪಾಳಯಕ್ಕೆ ನಡುಕ ಹುಟ್ಟಿಸಿತ್ತು. ಇದರಿಂದ ಅನಿವಾರ್ಯವಾಗಿ ಜೋಡೆತ್ತುಗಳ ವಿರುದ್ಧ ಸೆಣಸಲು ಅಭ್ಯರ್ಥಿ ಹುಡುಕಾಟ ನಡೆಸಿದ ಕಾಂಗ್ರೆಸ್, ಅನುಕಂಪ ಗಿಟ್ಟಿಸಲು ಬಿ.ಎಚ್. ಬನ್ನಿಕೋಡರಿಗೆ ಮಣೆ ಹಾಕಿತ್ತು. ಆದರೆ, ಜೋಡೆತ್ತುಗಳ ಕಮಾಲ್​ಗೆ ಮತದಾರರು ಜೈ ಎಂದರು. ಯು.ಬಿ. ಬಣಕಾರ ಹಾಗೂ ಪಾಟೀಲರನ್ನು ಒಂದುಗೂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಕ್ಷೇತ್ರದಲ್ಲಿ ಎರಡು ಬಾರಿ ಪ್ರಚಾರ ನಡೆಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಚುನಾವಣೆಗೂ ಮುನ್ನ ನೂರಾರು ಕೋಟಿ ರೂ. ಅನುದಾನ ನೀಡಿದರು. ಇವರಿಬ್ಬರ ವರ್ಚಸ್ಸಿನ ಎದುರು ಕಾಂಗ್ರೆಸ್​ನ ಬಿ.ಎಚ್. ಬನ್ನಿಕೋಡ ಮಂಕಾದರು. ಸಂಸದ ಬಿ.ವೈ. ರಾಘವೇಂದ್ರ ಕ್ಷೇತ್ರದಲ್ಲೇ ಠಿಕಾಣಿ ಹೂಡಿ ನಡೆಸಿದ ತಂತ್ರಗಾರಿಕೆ ಬಿಜೆಪಿ ಬಾವುಟ 2ನೇ ಬಾರಿಗೆ ಹಾರುವಂತೆ ಮಾಡಿದೆ. ಗೆದ್ದ ಬಳಿಕ ಬಿ.ಸಿ. ಪಾಟೀಲರಿಗೆ ಮಂತ್ರಿ ಪಟ್ಟ ಗ್ಯಾರಂಟಿ, ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ಧಿ ಸುಲಭ ಎಂಬ ಅಂಶವೂ ಇಲ್ಲಿ ಕೆಲಸ ಮಾಡಿದೆ.

ಬನ್ನಿಕೋಡರಿಗೆ ವರ್ಕೌಟ್ ಆಗದ ಅನುಕಂಪ: 2004ರಿಂದ ಕ್ಷೇತ್ರದಲ್ಲಿ ಪರಸ್ಪರ ಎದುರಾಳಿಗಳಾಗಿ ಕ್ಷೇತ್ರದಲ್ಲಿ ಹಿಡಿತ ಸಾಧಿಸಿದ್ದ ಬಿ.ಸಿ. ಪಾಟೀಲ ಮತ್ತು ಯು.ಬಿ. ಬಣಕಾರ ಒಂದಾಗಿದ್ದು, ಕಾಂಗ್ರೆಸ್ ಮುಗ್ಗರಿಸಲು ಪ್ರಮುಖ ಕಾರಣವಾಯಿತು. ಅದರ ಜೊತೆಗೆ ಬಿಜೆಪಿಯ ಅಬ್ಬರ ಪ್ರಚಾರದ ಎದುರು ಕಾಂಗ್ರೆಸ್ ಮಂಕಾಯಿತು. ಅಲ್ಲದೆ, ಬಿ.ಸಿ. ಪಾಟೀಲ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಂತೆ, ಕಾಂಗ್ರೆಸ್​ನ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಬಿಜೆಪಿಗೆ ಸೇರ್ಪಡೆಗೊಂಡರು. ಪ್ರಚಾರದ ವೇಳೆಯಲ್ಲಿ ಕೈ ನಾಯಕರು, ಅಭ್ಯರ್ಥಿ ಬನ್ನಿಕೋಡ ಅವರು ಬಿ.ಸಿ. ಪಾಟೀಲರನ್ನು ಅತಿಯಾಗಿ ತೆಗಳಿದರು. ಇದರಿಂದ ಕ್ಷೇತ್ರದಲ್ಲಿ ಕೈ ನಾಯಕರು ಬನ್ನಿಕೋಡರ ಪರ ಒಲವು ತೋರುತ್ತಾರೆ ಎಂದುಕೊಂಡಿದ್ದ ಅನುಕಂಪದ ಅಲೆಯೂ ಸಿಗದೇ ಹೋಯಿತು. ಬಿಜೆಪಿ ಗೆದ್ದರೆ ಬಿ.ಎಸ್. ಯಡಿಯೂರಪ್ಪ ಸರ್ಕಾರ ಸುಭದ್ರ ಎನ್ನುವ ಅಂಶವೂ ಕೈ ಸೋಲಿಗೆ ಕಾರಣವಾಯಿತು.

ಕಾಂಗ್ರೆಸ್ ಮುಕ್ತವಾದ ಜಿಲ್ಲೆ: 1957ರ ನಂತರ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಅನ್ನು ಪ್ರತಿನಿಧಿಸುವ ಒಬ್ಬ ಶಾಸಕರೂ ಇಲ್ಲವಾಯಿತು. 2008ರಲ್ಲಿ ಜಿಲ್ಲೆಯ 5 ಕ್ಷೇತ್ರಗಳಲ್ಲಿಯೂ ಕಮಲ ಅರಳಿದ್ದರೆ, ಹಿರೇಕೆರೂರು ಕ್ಷೇತ್ರದಲ್ಲಿ ಮಾತ್ರ ಬಿ.ಸಿ. ಪಾಟೀಲ ಕಾಂಗ್ರೆಸ್ ಗೆಲ್ಲಿಸಿದ್ದರು. ಇದರ ನಂತರ 2018ರಲ್ಲಿ ಮತ್ತೆ ಹಿರೇಕೆರೂರಿನಲ್ಲಿ ಮಾತ್ರ ಕಾಂಗ್ರೆಸ್ ಗೆದ್ದಿತ್ತು. ಇದೀಗ ಇಲ್ಲಿಯೂ ಬಿ.ಸಿ. ಪಾಟೀಲರೇ ಕಮಲವನ್ನು ಅರಳಿಸಿದ್ದಾರೆ. ಬಿ.ಸಿ. ಪಾಟೀಲ, ಯು.ಬಿ. ಬಣಕಾರ ಎಂಬ ಜೋಡೆತ್ತುಗಳ ಕಮಾಲ್ ಎದುರು ಕಾಂಗ್ರೆಸ್ ಧೂಳೀಪಟವಾಗಿದೆ. ಮೊದಲ ಬಾರಿಗೆ ಜಿಲ್ಲೆ ಕಾಂಗ್ರೆಸ್ ಮುಕ್ತವಾದಂತಾಗಿದೆ.

ಪರಶುರಾಮ ಕೆರಿ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...