ಮಡಿಕೇರಿ: ಕೊಡಗಿನ ಸಿದ್ದಾಪುರ ಬಸ್ ನಿಲ್ದಾಣದ ಪಕ್ಕದ ಮಳಿಗೆಯೊಂದರಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ತಗುಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಈ ವೇಳೆ ಬೆಂಕಿ ಸಾರ್ವಜನಿಕರು ಗ್ಯಾಸ್ ಸಿಲಿಂಡರ್ ಮೇಲೆ ಗೋಣಿ ಚೀಲ ಹಾಗೂ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರು ಫಲ ಕಾಣಲಿಲ್ಲ. ಈ ವೇಳೆ ಆಟೋ ಚಾಲಕ ಜಲೀಲ್ ಎಂಬುವವರು ಜೀವದ ಹಂಗು ತೊರೆದು ಉರಿಯುತ್ತಿದ್ದ ಗ್ಯಾಸ್ ಸಿಲಿಂಡರನ್ನು ಮುಖ್ಯ ರಸ್ತೆಗೆ ಎಳೆದು ತಂದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಆಟೋ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದ್ದು ಆಟೋ ಚಾಲಕನ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ.