18.5 C
Bangalore
Monday, December 16, 2019

ಕೊಳಚೆಮಯವಾದ ಶಾಲೆ ಆವರಣ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಲಕ್ಷ್ಮೇಶ್ವರ: ಪಟ್ಟಣದ ಪಾಳಾ-ಬಾದಾಮಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಅಂಬೇಡ್ಕರ್ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಕಾರ್ಯಾರಂಭವಾಗಿ 16 ವರ್ಷ ಕಳೆದರೂ ಮೂಲಸೌಲಭ್ಯಗಳಿಂದ ವಂಚಿತವಾಗಿದೆ.

ಈ ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ 68 ವಿದ್ಯಾರ್ಥಿಗಳು ಓದುತ್ತಿದ್ದು, ಸಾಕಷ್ಟು ಸ್ಥಳವಕಾಶವಿದ್ದರೂ ಕಾಂಪೌಂಡ್ ಇಲ್ಲದ್ದರಿಂದ ಶಾಲೆ ಆವರಣದಲ್ಲಿಯೇ ನಿರುಪಯುಕ್ತ ವಸ್ತುಗಳನ್ನು ತಂದು ಹಾಕಲಾಗುತ್ತಿದೆ. ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲ. ಮಳೆಯ ನೀರು ವರ್ಷಪೂರ್ತಿ ಮೈದಾನದಲ್ಲಿ ನಿಂತು ಕೊಳಚೆ ನಿರ್ವಣವಾಗುತ್ತಿದೆ. ಇದರಿಂದ ಮಕ್ಕಳಿಗೆ ಅನಾರೋಗ್ಯದ ಭೀತಿ ಎದುರಾಗಿದೆ.

ಈ ಮೊದಲು ಶಾಲೆಗೆ ಕಟ್ಟಡ ಇಲ್ಲದ್ದರಿಂದ ಸಮುದಾಯ ಭವನದಲ್ಲಿ ಶಾಲೆ ನಡೆಯುತ್ತಿತ್ತು. ಆದರೆ, ಶಾಲೆ ಈಗ ಸ್ವಂತ ಕಟ್ಟಡ ಹೊಂದಿದ್ದರೂ ಮೂಲಸೌಲಭ್ಯಗಳ ಕೊರತೆಯಿಂದ ನರಳುತ್ತಿದೆ. ಈ ಶಾಲೆಯ ಆವರಣದಲ್ಲಿಯೇ ಅತ್ಯಂತ ಹಳೆಯದಾದ ಅಂಗನವಾಡಿ ಕಟ್ಟಡವೊಂದು ಬೀಳುವ ಸ್ಥಿತಿಯಲ್ಲಿದೆ. ರಾಜ್ಯ ಹೆದ್ದಾರಿ ಪಕ್ಕದಲ್ಲಿಯೇ ಶಾಲೆ ಇದ್ದು, ಇದೇ ರಸ್ತೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ನಿತ್ಯವೂ ಸಂಚರಿಸುತ್ತಿದ್ದರೂ ಜಾಣ ಕುರುಡುತನ ತೋರುತ್ತಿದ್ದಾರೆ.

ಪಟ್ಟಣದ ಹೆಬ್ಬಾಗಿಲಿನಲ್ಲಿಯೇ ಇರುವ ಈ ಶಾಲೆಗೆ ಸುಂದರ ರೂಪ ನೀಡಿ ಆದರ್ಶ ಶಾಲೆಯನ್ನಾಗಿ ಮಾರ್ಪಡಿಸಿದ್ದರೆ ಶಿಕ್ಷಣ ಇಲಾಖೆಯ ಕಾರ್ಯವನ್ನು ಜನರು ಪ್ರಶಂಸಿಸುತ್ತಿದ್ದರು. ಆದರೆ, ಈಗ ಈ ದುಸ್ಥಿತಿ ನೋಡಿ ಅಯ್ಯೋ ಎನ್ನುತ್ತಾರೆ. ಶಾಲೆಯ ಅವ್ಯವಸ್ಥೆಯಿಂದಾಗಿ ಪಾಲಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ದಾಖಲಿಸುತ್ತಿದ್ದಾರೆ.

ಊಟ, ಪಾಠಕ್ಕೆ ಸೊಳ್ಳೆ, ನೊಣಗಳ ಕಾಟ: ಮೈದಾನದಲ್ಲಿ ಕೊಳಚೆ ನೀರು ನಿಲ್ಲುವುದರಿಂದ ಆಟವಾಡಲು ಜಾಗವಿಲ್ಲದಂತಾಗಿದೆ. ಸೊಳ್ಳೆ, ನೊಣಗಳ ಕಾಟದಿಂದ ಪಾಠ ಮತ್ತು ಊಟಕ್ಕೆ ತೊಂದರೆಯಾಗುತ್ತಿದೆ. ಶಾಲೆಗೆ ಬರಲು, ಹೋಗಲು ಕೊಳಚೆ ದಾಟಬೇಕಿದೆ. ರಸ್ತೆ ಪಕ್ಕವೇ ಶಾಲೆ ಇರುವುದರಿಂದ ಯರ್ರಾಬಿರ್ರಿ ವಾಹನಗಳು ಸಂಚರಿಸುತ್ತಿದ್ದು, ಶಾಲೆಗೆ ಕಾಂಪೌಂಡ್ ನಿರ್ವಿುಸಬೇಕು ಎಂದು ವಿದ್ಯಾರ್ಥಿಗಳು ತಮ್ಮ ಸಮಸ್ಯೆ ಹೇಳಿಕೊಂಡರು.

ಶಾಲಾ ಎಸ್​ಡಿಎಂಸಿ ರಚನೆ ಆಗಿಲ್ಲ. ಶಾಲಾ ಕಾಂಪೌಂಡ್, ಮೈದಾನ ಸೇರಿ ಮೂಲಸೌಲಭ್ಯಕ್ಕಾಗಿ ಶೈಕ್ಷಣಿಕ ಸಭೆಗಳಲ್ಲಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.
| ಎ.ಬಿ. ನಿಂಗಮ್ಮನವರ ಮುಖ್ಯ ಶಿಕ್ಷಕಿ

ಶಾಲಾ ನಿವೇಶನದ ದಾಖಲೆ ಇದ್ದರೂ ಅಳತೆಯ ಗೊಂದಲವಿರುವುದರಿಂದ ಕಾಂಪೌಂಡ್ ನಿರ್ವಣಕ್ಕೆ ಅಡ್ಡಿಯಾಗಿದೆ. ಸ್ಚಚ್ಛತೆ ಮತ್ತು ಚರಂಡಿ ನಿರ್ಮಾಣ ಕುರಿತು ಪುರಸಭೆಯ ಮುಖ್ಯಾಧಿಕಾರಿಗೆ ಪತ್ರ ಬರೆಯಲಾಗುವುದು.
| ವಿ.ವಿ.ಸಾಲಿಮಠ ಕ್ಷೇತ್ರ ಶಿಕ್ಷಣಾಧಿಕಾರಿ

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...