25.1 C
Bangalore
Friday, December 6, 2019

ಕೊಳಚೆ ಕೆರೆಯಾದ ನವನಗರ ಮೈದಾನ!

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಬಸವರಾಜ ಇದ್ಲಿ ಹುಬ್ಬಳ್ಳಿ

ಇಲ್ಲಿಯ ನವನಗರದಲ್ಲಿ ಮಹಾನಗರ ಪಾಲಿಕೆ ಅಭಿವೃದ್ಧಿಪಡಿಸಲು ಮುಂದಾಗಿರುವ ಮೈದಾನದ ಅರ್ಧಂಬರ್ಧ ಕಾಮಗಾರಿಯಿಂದಾಗಿ ಪುನಃ ಕೆರೆಯಾಗಿ ಮಾರ್ಪಟ್ಟಿದ್ದು, ಸುತ್ತಲಿನ ವಾತಾವರಣ ಹದಗೆಡಿಸಿದೆ.

ನವನಗರದಲ್ಲಿ ಯುವಜನಸೇವೆ ಹಾಗೂ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಮಹಾನಗರ ಪಾಲಿಕೆ ಸುಸಜ್ಜಿತ ಮೈದಾನ (ಈ ಮೊದಲು ಬಸವಣ್ಣ ದೇವರ ಕೆರೆ) ನಿರ್ಮಾಣ ಮಾಡುತ್ತಿದೆ. ಆದರೆ, ವಿಳಂಬ ಕಾಮಗಾರಿಯಿಂದ ನೂರೆಂಟು ಸಮಸ್ಯೆಗಳು ಉದ್ಭವಿಸಿವೆ.

ಈ ಮೊದಲು ಕೆರೆಯಾಗಿದ್ದ ಪ್ರದೇಶ ನಗರೀಕರಣ ಪರಿಣಾಮ ಒಳಚರಂಡಿ ನೀರು ಸೇರಿ ಕಲುಷಿತಗೊಂಡಿತ್ತು. ಸ್ಥಳೀಯ ಆಡಳಿತದ ನಿರ್ಲಕ್ಷ್ಯದಿಂದಾಗಿ ಕೆರೆ ತನ್ನ ಅಸ್ತಿತ್ವ ಕಳೆದುಕೊಂಡ ನಂತರ ಅದನ್ನು ಮೈದಾನವಾಗಿ ಮಾರ್ಪಡಿಸುವ ಯೋಜನೆ ರೂಪಿಸಲಾಯಿತು. ಅದರಂತೆ 1.34 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾರ್ಯಕ್ಕೆ ವರ್ಷದ ಹಿಂದೆ ಚಾಲನೆ ನೀಡಲಾಗಿತ್ತು.

ಅಂದಿನ ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಹೊರಕೇರಿಯವರು ಒಂದಿಷ್ಟು ಮುತುವರ್ಜಿ ವಹಿಸಿ ಮೈದಾನ ಕಾಮಗಾರಿ ಶೀಘ್ರ ಕೈಗೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದರು. ಆದರೆ, ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಕುಂಟುತ್ತ ಸಾಗಿದ್ದಲ್ಲದೇ ಮಳೆಗಾಲ ಆರಂಭವಾಗುತ್ತಿದ್ದಂತೆ ಸ್ಥಗಿತಗೊಂಡಿದೆ ಎನ್ನಲಾಗಿದೆ.

ಎಲ್ಲಕ್ಕೂ ಮೊದಲು ಮೈದಾನ ಸುತ್ತಲೂ ಚರಂಡಿ ನಿರ್ವಿುಸಿ ವಿವಿಧೆಡೆಯಿಂದ ಹರಿದು ಬರುವ ನೀರನ್ನು ಹೊರಗೆ ಕಳುಹಿಸುವ ವ್ಯವಸ್ಥೆ ಮಾಡಬೇಕಿತ್ತು. ಗಟಾರಿನ ಕೆಲಸ ಅರ್ಧ ಆಗಿದ್ದರಿಂದ ಈಗ ಕೊಳಚೆ ಮತ್ತೆ ಮೈದಾನದಲ್ಲಿ ನಿಲ್ಲುತ್ತಿದೆ. ಮೊದಲಿನಂತೆ ಕೆರೆ ನಿರ್ವಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸದ್ಯ ಮೈದಾನ ತುಂಬ ಮಳೆ ನೀರು ಹಾಗೂ ಒಳಚರಂಡಿ ಕೊಳಚೆ ನಿಂತಿರುವುದರಿಂದ ಸೊಳ್ಳೆಗಳ ಉತ್ಪಾದನಾ ತಾಣವಾಗಿಯೂ ಮಾರ್ಪಟ್ಟಿದೆ. ಇದರಿಂದ ಡೆಂಘೆ, ಚಿಕೂನ್ ಗುನ್ಯಾ, ಮಲೇರಿಯಾದಂತ ಕಾಯಿಲೆಗಳ ಭೀತಿ ಎದುರಾಗಿದೆ ಎಂದು ನಿವಾಸಿಗಳಾದ ರಾಘವೇಂದ್ರ ಪೂಜಾರ, ಗುರು ಢಗೆ, ವಾಸು ಎಂ., ವೈ.ಎಫ್. ಮಡಿವಾಳರ, ಎಸ್.ಎನ್. ಪುರಾಣಿಕಮಠ, ಎನ್.ಎಸ್. ಅಕ್ಕಿ, ಕೆ.ಎಂ. ಪೂಜಾರ, ಮಂಜುನಾಥ ಹಳ್ಳೂರ, ರಿಜ್ವಾನ್ ಬಿಜಾಪುರ, ಮುಂತಾದವರು ತಿಳಿಸಿದ್ದಾರೆ.

ಸಮರ್ಪಕ ನಿರ್ವಹಣೆ ಇಲ್ಲ: ಮೈದಾನ ಕಾಮಗಾರಿಯ ಗುತ್ತಿಗೆದಾರರಿಗೆ ಕಾಲಕಾಲಕ್ಕೆ ಸೂಚನೆ ನೀಡಿ ಕೆಲಸ ಮುಗಿಸುವಂತೆ ಹೇಳಿದ್ದೆ. ಆದರೆ, ಈ ವಿಷಯದಲ್ಲಿ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು, ಸರಿಯಾದ ನಿರ್ವಹಣೆ ಮಾಡದೇ ಇರುವುದಕ್ಕೆ ಈ ಸ್ಥಿತಿ ನಿರ್ವಣವಾಗಿದೆ ಎಂದು ಪಾಲಿಕೆ ಮಾಜಿ ಸದಸ್ಯ ಮಲ್ಲಿಕಾರ್ಜುನ ಹೊರಕೇರಿ ದೂರಿದರು. 1.34 ಕೋಟಿ ರೂ.ನಲ್ಲಿ ಮೈದಾನದಲ್ಲಿ ವೇದಿಕೆ, ಸುತ್ತಲೂ ಗಟಾರ್, ಪೇವರ್ಸ್ ಸೇರಿ ಹಲವು ಕಾಮಗಾರಿ ಕೈಗೊಳ್ಳಲಾಗುತ್ತದೆ. ಪಾಲಿಕೆ ಅಧಿಕಾರಿಗಳು ಗುತ್ತಿಗೆದಾರರಿಗೆ ಸೂಚಿಸಿ ಕೆಲಸ ಮಾಡಿಸಬೇಕು ಎಂದು ಹೊರಕೇರಿ ಹೇಳುತ್ತಾರೆ.

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುತ್ತಲಿನ ವಾತಾವರಣ ಸಂಪೂರ್ಣ ಹದಗೆಟ್ಟಿದೆ. ಈ ಬಗ್ಗೆ ಪಾಲಿಕೆ ವಲಯ ಕಚೇರಿ ಅಧಿಕಾರಿಗೆ ತಿಳಿಸಿದರೂ ಗಮನ ಹರಿಸುತ್ತಿಲ್ಲ. ಕನಿಷ್ಠ ಚರಂಡಿ ನೀರಾದರೂ ಹೊರಗೆ ಹೋಗುವ ವ್ಯವಸ್ಥೆ ಮಾಡಬೇಕು. ಅದರಿಂದ ರೋಗ ಭೀತಿ ಕಡಿಮೆಯಾಗುತ್ತದೆ. ನವನಗರದಲ್ಲಿ ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ವಲಯ ಅಧಿಕಾರಿಗಳು ಸಾರ್ವಜನಿಕರಿಗೆ ಸಿಗುತ್ತಿಲ್ಲ.

|ಸ್ವಾಮಿ ಮಹಾಜನಶೆಟ್ಟರ್ ಅಧ್ಯಕ್ಷ, ಜೈ ಕರ್ನಾಟಕ ಯುವಕ ಮಂಡಳ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...