ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಗೆಲುವು

blank

ಕೊಳ್ಳೇಗಾಲ: ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಈಗಾಗಲೇ ಮತದಾನದ ಹೇಗೆ ನಡೆದಿದೆ ಎಂಬುದರ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಲಭ್ಯವಾಗಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎನ್.ಮಹೇಶ್ ತಿಳಿಸಿದರು.


ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಜನರ ಪರವಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಿದ್ದೇನೆ. ಕಳೆದ 5 ವರ್ಷದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ನನ್ನ ಜವಾಬ್ದಾರಿ ನಿರ್ವಹಿಸಿದ್ದೇನೆ. ಇವೆಲ್ಲವನ್ನು ಗಟ್ಟಿಗೊಳಿಸಲು ಕ್ಷೇತ್ರದ ಜನರಿಂದ ಮತ್ತೊಂದು ಅವಕಾಶ ಸಿಗುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಪ್ರಸ್ತುತ ಅವಧಿಯಲ್ಲಿ ಮುಂದೆ ಬರುವ ರಾಜಕಾರಣಿಗಳಿಗೂ ಅನುಕೂಲವಾಗುವ ರೀತಿ ಕ್ಷೇತ್ರ ಅಭಿವೃದ್ಧಿ ಪಡಿಸೋಣ. ನಾವು ಮಾಡಿದ ಕೆಲಸ ಪಕ್ಷದ ಗೆಲುವಿಗೆ ಸಹಕಾರ ನೀಡಲಿದೆ ಎಂಬ ಆತ್ಮವಿಶ್ವಾಸ ಇದೆ. ಇದುವರೆಗೂ ತನು, ಮನ, ಧನ ಅರ್ಪಿಸಿ ಬಿಜೆಪಿಗಾಗಿ ಶ್ರಮಿಸಿದ ಎಲ್ಲ ಶಕ್ತಿಗಳು ಹಾಗೂ ಮತದಾರರಿಗೆ ಗೌರವ ಪೂರ್ವಕ ಧನ್ಯವಾದ ತಿಳಿಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಹಾಗೂ ಮುಖಂಡರು ಆತಂಕ ಪಡದೇ ಫಲಿತಾಂಶ ಬರುವಿಕೆ ನಡುವಿನ ಕ್ಷಣವನ್ನು ಆನಂದಿಸಿ, ಕುತೂಹಲದಿಂದ ಇರಿ ಎಂದು ಸಲಹೆ ನೀಡಿದರು.


ಮಾಜಿ ಶಾಸಕ ಎಸ್.ಬಾಲರಾಜು ಮಾತನಾಡಿ, ಈ ಬಾರಿ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ. ಫಲಿತಾಂಶ ಬರುವವರೆಗೂ ಆರಾಮ ಹಾಗೂ ಸಂತೋಷದಿಂದ ಇರಿ. ಯಾವುದೇ ಪರ-ವಿರೋಧದ ಚರ್ಚೆ ಮಾಡಬೇಡಿ. ದಯವಿಟ್ಟು ಬೆಟ್ಟಿಂಗ್ ಕಟ್ಟಬೇಡಿ. ಅದು ಕೆಟ್ಟ ಅಭ್ಯಾಸ ಎಂದು ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಕಿವಿಮಾತು ಹೇಳಿದರು.

ಬಿಜೆಪಿ ಜಿಲ್ಲಾ ವಕ್ತಾರ ಬಸವರಾಜಪ್ಪ, ನಗರ ಮಂಡಲ ಅಧ್ಯಕ್ಷ ರಮೇಶ್ ಮೂರಾರಿ, ಶಿವಕುಮಾರ್, ಚಂದ್ರು ಇತರರು ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…