More

    ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದ್ ರಾವ್ ನಿಧನ / ನುಡಿನಮನ

    ವಿಜಯವಾಣಿ ಸುದ್ದಿಜಾಲ ಕೋಲಾರ

    ಕೋಲಾರ ಪತ್ರಿಕೆ ಪ್ರಧಾನ ಸಂಪಾದಕ ಕೆ.ಪ್ರಹ್ಲಾದ್ ರಾವ್ (೮೩) ರವರು ಸೋಮವಾರ ತಡರಾತ್ರಿ ಮೃತಪಟ್ಟಿದ್ದು, ಕಳೆದ ೨ ವರ್ಷಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು.

    ಮೃತರು ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ೧೯೭೫ರಲ್ಲಿ ಕೋಲಾರ ಪತ್ರಿಕೆಯನ್ನು ಪ್ರಥಮ ಬಾರಿ ಕೋಲಾರದಲ್ಲಿ ಪ್ರಾರಂಭಿಸಿದ್ದು, ಇಲ್ಲಿಯವರೆವಿಗೂ ನಿರಂತರವಾಗಿ ಪತ್ರಿಕೆಯನ್ನು ಮುನ್ನೆಡೆಸಿಕೊಂಡು ಬರುತ್ತಿದ್ದಾರೆ.

    ೧೯೪೩ರಲ್ಲಿ ಮುಳಬಾಗಿಲಿನ ಸಂಗಸAದ್ರ ಗ್ರಾಮದಲ್ಲಿ ಜನಿಸಿದ ರಾಯರು ೧೯೬೩ ರಿಂದ ೧೯೭೧ರ ತನಕ ಹಾಸನ ಜನಮಿತ್ರ ಪತ್ರಿಕೆಯ ಉಪ ಸಂಪಾದಕರಾಗಿ ನಂತರ ಚಿಕ್ಕಮಂಗಳೂರು, ದಾವಣಗೆರೆ ನಗರವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕರಾಗಿ ಸೇವೆ ಸಲ್ಲಿಸಿದರು.

    ಕೋಲಾರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕರ್ನಾಟಕ ಗೆಜೆಟಿಯರ್ ವಿಶೇಷ ಸದಸ್ಯರಾಗಿ ಕರ್ನಾಟಕ ರಾಜ್ಯ ಜಿಲ್ಲಾ ಪತ್ರಿಕಾ ಸಂಪಾದಕ ಸಂಘದ ಅಧ್ಯಕ್ಷರಾಗಿ ಮತ್ತು ಪತ್ರಿಕಾ ಮಾನ್ಯತಾ ಸಮಿತಿ ಸದಸ್ಯರಾಗಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಡಿ.ವಿ.ಜಿ.ಶತಮಾನೋತ್ಸವ ಸಮಿತಿ ಕಾರ್ಯದರ್ಶಿ ಸೇರಿದಂತೆ ಕೋಲಾರ ಜಿಲ್ಲೆಯ ಅನೇಕ ಸಂಸ್ಥೆಗಳ ಹುದ್ದೆಗಳನ್ನು ಅಲಂಕರಿಸಿದ್ದರು.

    ೧೯೯೭ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಆಂದೋಲನ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಬಾಜನಾಗಿದ್ದರು. ಮೃತರ ಅಂತ್ಯಕ್ರಿಯೆ ಮಂಗಳವಾರ ಕೋಲಾರದಲ್ಲಿ ನೆರವೇರಿತು. ಅಂತ್ಯಕ್ರಿಯೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಎಂ.ಎಲ್.ಸಿ.ಗಳಾದ ಇಂಚರ ಗೋವಿಂದರಾಜು, ಎಂ.ಎಲ್.ಅನಿಲ್ ಕುಮಾರ್, ಮಾಜಿ ಶಾಸಕ ಶ್ರೀನಿವಾಸಗೌಡ ಸೇರಿದಂತೆ ಅನೇಕ ಗಣ್ಯರು, ಸಾಹಿತಿಗಳು ಭಾಗವಹಿಸಿದ್ದರು.

    ನುಡಿನಮನ

    ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಆವರಣದಲ್ಲಿ ಮಂಗಳವಾರ ಮೃತ ಕೆ.ಪ್ರಹ್ಲಾದ್ ರಾವ್ ರವರಿಗೆ ನುಡಿನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

    ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಕಾರ್ಯದರ್ಶಿ ಚಂದ್ರಶೇಖರ್, ಹಿರಿಯ ಪತ್ರಕರ್ತ ಹೊನ್ನುಡಿ ಪ್ರಭಾಕರ್, ಪಾ.ಶ. ಅನಂತರಾಮ್, ರಾಜ್ಯ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಕೆ.ಎಸ್.ಗಣೇಶ್, ವಿ.ಮುನಿರಾಜು ಸೇರಿದಂತೆ ಪತ್ರಕರ್ತರು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಜಯ ಕರ್ನಾಟಕ ಸಂಘಟನೆ ಮತ್ತು ಭುವನೇಶ್ವರಿ ಕನ್ನಡ ಸಂಘದ ವತಿಯಿಂದಲೂ ಕೆ.ಪ್ರಹ್ಲಾದ್ ರಾವ್ ರವರಿಗೆ ಸಂತಾಪ ಸೂಚನಾ ಸಭೆಯನ್ನು ಏರ್ಪಡಿಸಿದ್ದರು.

    ಚಿತ್ರ ೧೦ ಕೆ.ಎಲ್.ಆರ್. ೦೧ : ಕೆ.ಪ್ರಹ್ಲಾದ್ ರಾವ್ ರವರ ಭಾವಚಿತ್ರ

    ಕೋಲಾರ ಪತ್ರಿಕೆ ಸಂಪಾದಕ ಕೆ.ಪ್ರಹ್ಲಾದ್ ರಾವ್ ನಿಧನ / ನುಡಿನಮನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts