ಕೌಶಲ ಬದುಕಿಗೆ ದಾರಿ ದೀಪ

blank

ಚಿತ್ರದುರ್ಗ: ವಿದ್ಯಾರ್ಥಿ ಸಮೂಹಕ್ಕೆ ಪಠ್ಯದ ಜೊತೆಗೆ ಕೌಶಲ ಕಲಿಸುವ ಕಾರ್ಯ ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಆಗಬೇಕು. ಇದು ಬದುಕಿಗೆ ದಾರಿ ದೀಪವೂ ಹೌದು ಎಂದು ಡಿಡಿಪಿಐ ಎನ್.ಆರ್. ಮಂಜುನಾಥ್ ಸಲಹೆ ನೀಡಿದರು.

ನಗರದ ಕಬೀರಾನಂದ ಬಡಾವಣೆಯ ಸದ್ಗುರು ಕಬೀರಾನಂದಸ್ವಾಮಿ ಪ್ರಾಥಮಿಕ-ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಕ್ಕಳ ಪ್ರತಿಭೋತ್ಸವ ಹಾಗೂ ಕೌಶಲ ಮೇಳ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕತೆ ಹೆಚ್ಚುತ್ತಿದೆ. ಹೀಗಾಗಿ ಚಿಕ್ಕಂದಿನಿಂದಲೇ ಮಕ್ಕಳಿಗೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸುವ ಮೂಲಕ ಸುಪ್ತ ಪ್ರತಿಭೆ ಗುರುತಿಸಿ, ಹೊರತೆಗೆಯಲು ಮುಂದಾಗಬೇಕು. ಇದರಿಂದ ಅವರ ಸರ್ವತೋಮುಖ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಕಿವಿಮಾತು ಹೇಳಿದರು.

ಮನೆಗಳಲ್ಲೂ ಮಕ್ಕಳಿಗೆ ಹೊಸತನ್ನು ಕಲಿಯುವಂತ ವಾತಾವರಣ ಪಾಲಕರು ಸೃಷ್ಟಿಸಬೇಕು. ಅಲ್ಲದೆ, ಪ್ರೋತ್ಸಾಹಿಸಬೇಕು. ಇದರಿಂದ ಅವರ ಆಸಕ್ತಿಗೆ ಅನುಗುಣವಾಗಿ ಭವಿಷ್ಯ ರೂಪಿಸಿಕೊಳ್ಳಲಿದ್ದಾರೆ ಎಂದರು.

ಚಿತ್ರದುರ್ಗ ಸೈನ್ಸ್ ಫೌಂಡೇಷನ್‌ನ ಕಾರ್ಯದರ್ಶಿ ಎಚ್‌ಎಸ್‌ಟಿ ಸ್ವಾಮಿ ಮಾತನಾಡಿ, ವಿಜ್ಞಾನ ಎಂಬುದು ನಮ್ಮೆಲ್ಲರ ಬದುಕಿನಲ್ಲಿ ಹಾಸು ಹೊಕ್ಕಾಗಿದೆ. ಅದಿಲ್ಲದ ಜಗತ್ತನ್ನು ಊಹಿಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ. ನಂಬಿಕೆ ಇರಲಿ. ಮೂಢನಂಬಿಕೆ ಒಳ್ಳೆಯ ಬೆಳವಣಿಗೆಯಲ್ಲ. ಇದು ಜನರನ್ನು ತಪ್ಪು ಮಾರ್ಗದಲ್ಲಿ ಕರೆದೊಯ್ಯುತ್ತದೆ. ಈ ಕುರಿತು ಎಚ್ಚರಿಕೆ ಅಗತ್ಯ ಎಂದು ಸಲಹೆ ನೀಡಿದರು.

ಶಿವಲಿಂಗಾನಂದ ಶ್ರೀ ನೇತೃತ್ವ ವಹಿಸಿದ್ದರು. ತಾಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್, 95ನೇ ಮಹಾಶಿವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷ ವಿಜಯಕುಮಾರ್, ಉಪಾಧ್ಯಕ್ಷ ಬದರಿನಾಥ್, ಇಲಾಖೆಯ ಶಿಕ್ಷಣಾಧಿಕಾರಿ ಗೋವಿಂದಪ್ಪ, ಗಣಪತಿ ಶಾಸ್ತ್ರಿ ಇತರರಿದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…