22.8 C
Bengaluru
Saturday, January 18, 2020

ಕೌಶಲ ಬಯಸುವ ಪ್ರತಿಯೊಂದು ಕ್ಷೇತ್ರ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಬಾಗಲಕೋಟೆ: ಬಸವೇಶ್ವರ ಸಹಕಾರಿ ಬ್ಯಾಂಕ್, ಸಿರಿ ಸಾಂಸ್ಕೃತಿಕ ಮಹಿಳಾ ಸಂಘ ಮತ್ತು ವನಿತಾ ಲೋಕ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಕೌಶಲ ಅಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭ ಮಂಗಳವಾರ ಜರುಗಿತು.

ನವನಗರದ ಬಸವೇಶ್ವರ ಬ್ಯಾಂಕ್ ಸಭಾಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಮಾತನಾಡಿ, ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಕೌಶಲಕ್ಕೆ ಭಾರಿ ಬೇಡಿಕೆ ಇದೆ. ಕಾಲ ಕಾಲಕ್ಕೆ ಬದಲಾದ ಶೈಲಿ, ವಿನೂತನ ಮಾದರಿಗಳನ್ನು ಕಲಿತುಕೊಳ್ಳುವುದು ಅವಶ್ಯವಾಗಿದೆ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ, ಸ್ವಯಂ ವೃತ್ತಿಯಲ್ಲಿ ತೊಡಗುವ ಮಹಿಳೆಯರಿಗೆ ಬ್ಯಾಂಕ್‌ನಿಂದ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿದರು.

ಸಮಾರಂಭದಲ್ಲಿ ತರಬೇತಿ ಪಡೆದ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಬಸವೇಶ್ವರ ಬ್ಯಾಂಕ್ ನಿರ್ದೇಶಕ ಶ್ರೀನಿವಾಸ ಬಳ್ಳಾರಿ ಹಾಗೂ ಮುಖಂಡರಾದ ಶಿಲ್ಪಾ ಯರಾಶಿ, ಜಯಶೀಲಾ ದೇಸಾಯಿಪಟ್ಟಿ, ವಿಜಯಲಕ್ಷ್ಮೀ ದಿಡ್ಡಿಬಾಗಿಲು, ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಎಂ.ಎಚ್.ಕಳ್ಳಿಗುಡ್ಡ, ಸಲಹೆಗಾರರಾದ ಎಸ್.ಬಿ. ಬದಾಮಿ, ಅಧಿಕಾರಿಗಳಾದ ಸರೋಜಾ ಕುರ್ತಕೋಟಿ, ಐಶ್ವರ್ಯ ತಪಶೆಟ್ಟಿ ಉಪಸ್ಥಿತರಿದ್ದರು. ಸುಮನ್ ಗದ್ದನಕೇರಿ ಪ್ರಾರ್ಥಿಸಿದರು. ಜಯಮ್ಮ ಅಬ್ದುಲಪುರ ವಂದಿಸಿದರು. ಮಧುಶ್ರೀ ಪಿ. ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...