18.5 C
Bangalore
Monday, December 16, 2019

ಕ್ಯಾಟ್ ಪರೀಕ್ಷೆ ನಿರಂಜನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

<<ಕರ್ನಾಟಕದ ಏಕೈಕ ಸಾಧಕ * ಅರ್ಥಶಾಸ್ತ್ರ ಬಗ್ಗೆ ಹೆಚ್ಚಿನ ಒಲವು ತೋರುವ ವಿದ್ಯಾರ್ಥಿ>>

ವಿಜಯವಾಣಿ ಸುದ್ದಿಜಾಲ ಉಡುಪಿ
ಸಾಮಾನ್ಯ ಪ್ರವೇಶ ಪರೀಕ್ಷೆ (ಕ್ಯಾಟ್) ಫಲಿತಾಂಶ ಪ್ರಕಟಗೊಂಡಿದ್ದು, ಮಣಿಪಾಲದ ನಿರಂಜನ್ ಪ್ರಸಾದ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಪರೀಕ್ಷೆ ಬರೆದ ದೇಶದ 2.9 ಲಕ್ಷ ವಿದ್ಯಾರ್ಥಿಗಳಲ್ಲಿ 11 ಮಂದಿ ಮಾತ್ರ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ನಿರಂಜನ್ ಕರ್ನಾಟಕದ ಏಕೈಕ ವಿದ್ಯಾರ್ಥಿ ಎಂಬುದು ವಿಶೇಷ. ದೇಶದ ಪ್ರತಿಷ್ಠಿತ ಐಐಎಂ ಮತ್ತು ಬಿಸ್ನೆಸ್ ಸ್ಕೂಲ್‌ಗಳಲ್ಲಿ ಪ್ರವೇಶ ಪಡೆಯಲು 2018 ನವೆಂಬರ್‌ನಲ್ಲಿ ಕಲ್ಕತ್ತ ಐಐಎಂ ಕ್ಯಾಟ್ ಪರೀಕ್ಷೆ ನಡೆಸಿತ್ತು.
ಮಣಿಪಾಲದ ಲಕ್ಷ್ಮೀಂದ್ರ ನಗರದ ನಿವಾಸಿ ನಿರಂಜನ್, ಮದ್ರಾಸ್ ಐಐಟಿಯಲ್ಲಿ ಮೆಕಾನಿಕಲ್ ಡ್ಯುಯೆಲ್ ಹಂತಿಮ ವರ್ಷದ ಪದವಿ ವಿದ್ಯಾರ್ಥಿ. ಮೂಡುಬಿದಿರೆ ಮೈಟ್ ಇನ್ಸ್‌ಟ್ಯೂಟ್‌ನಲ್ಲಿ ಎಂಬಿಎ ವಿಭಾಗ ಮುಖ್ಯಸ್ಥ ಜಯಪ್ರಸಾದ್ ಮೊಳೆಯಾರ್, ಮಣಿಪಾಲ ಮಾಹೆಯಲ್ಲಿ ಪ್ರಾಧ್ಯಾಪಕಿ ಕೀರ್ತನಾ ದಂಪತಿ ಪುತ್ರ.
ಮಗನ ಸಾಧನೆಗೆ ಹೆಮ್ಮೆ ಇದೆ. ಬಾಲ್ಯದಿಂದಲೂ ಆತ ಪ್ರತಿಭಾನ್ವಿತ. ಎಲ್ಲ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಮುಂಚೂಣಿಯಲ್ಲಿದ್ದ. ಸದ್ಯಕ್ಕೆ ಬ್ಯಾಂಕ್ ಒಂದರಲ್ಲಿ ಡಾಟ ಅನಾಲಿಸ್ಟ್ ಆಗಿ ಪ್ಲೇಸ್‌ಮೆಂಟ್ ಆಗಿದೆ. ಉನ್ನತ ಶಿಕ್ಷಣ ಪಡೆಯುವ ಕನಸು ಅವನಿಗಿದೆ. ಈ ಬಗ್ಗೆ ಆಲೋಚಿಸಬೇಕು ಎನ್ನುತ್ತಾರೆ ನಿರಂಜನ್ ತಂದೆ ಜಯಪ್ರಸಾದ್. ಬ್ರಹ್ಮಾವರ ಲಿಟಲ್‌ರಾಕ್ ಶಾಲೆಯಲ್ಲಿ 10 ಮತ್ತು 12 ನೇ ತರಗತಿಯಲ್ಲಿ ಉತ್ತಮ ಅಂಕಗಳಿಸಿ ಪದವಿ ಶಿಕ್ಷಣಕ್ಕೆ ಮದ್ರಾಸ್‌ಐಐಟಿಗೆ ನಿರಂಜನ್ ಸೇರಿದ್ದರು.

ಖುಷಿಯಾಗಿದೆ: ವಿಜಯವಾಣಿ ಜತೆ ಮಾತನಾಡಿದ ನಿರಂಜನ್ ಪ್ರಸಾದ್, ಕ್ಯಾಟ್‌ನಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವುದು ಅತ್ಯಂತ ಸಂತಸ ತಂದಿದೆ. ಐದಾರು ತಿಂಗಳಿನಲ್ಲಿ ನನ್ನ ಪದವಿ ಪೂರ್ಣಗೊಳ್ಳಲಿದೆ. ತಾಂತ್ರಿಕ ಅಥವ ಮ್ಯಾನೇಜ್‌ಮೆಂಟ್ ಶಿಕ್ಷಣದಲ್ಲಿ ಮುಂದುವರೆಯಬೇಕೇ ಎಂಬ ಬಗ್ಗೆ ಗೊಂದಲದಲ್ಲಿದ್ದೇನೆ. ಶಿಕ್ಷಕರು, ಪೋಷಕರ ಬಳಿ ಚರ್ಚಿಸಿ ನಿರ್ಧಾರ. ಆರ್‌ಬಿಐ ಗವರ್ನರ್ ಆಗಿದ್ದ ರಘುರಾಮ್, ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ನನಗೆ ಪ್ರೇರಣೆ. ಅರ್ಥಶಾಸ್ತ್ರಕ್ಕೆ ಸಂಬಂಧಿಸಿ ಇವರ ವಿಶ್ಲೇಷಣೆ, ಉಪನ್ಯಾಸಗಳು ನನ್ನಮೇಲೆ ಸಾಕಷ್ಟು ಪರಿಣಾಮ ಬೀರಿದವು. ಅರ್ಥಶಾಸ್ತ್ರದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದು, ದೇಶದ ಅರ್ಥ ವ್ಯವಸ್ಥೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ದೇಶದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡುವ ಅಪೇಕ್ಷೆ ಹೊಂದಿದ್ದೇನೆ ಎಂದರು.

ಕ್ಯಾಟ್‌ಗೆ ತಯಾರಿ ಹೇಗೆ ?: ಮೊದಲು ನನ್ನ ವೀಕ್ ಪಾಯಿಂಟ್‌ಗಳನ್ನು ನೋಟ್ ಮಾಡಿಕೊಂಡು ಅದರ ಮೇಲೆ ಓದಿನಲ್ಲಿ ತೊಡಗಿಸಿಕೊಂಡೆ. ಬಳಿಕ ಅಧ್ಯಯನ ಮತ್ತು ಪರೀಕ್ಷೆಗೆ ಸಮಯ ನಿರ್ವಹಣೆ ಬಗ್ಗೆ ಯೋಚಿಸಿದೆ. ಆ ನಿಟ್ಟಿನಲ್ಲಿ ದಿನಕ್ಕೆ 2 ರಿಂದ 3 ಗಂಟೆ ಅಭ್ಯಾಸ ನಡೆಸುತಿದ್ದೆ ಎನ್ನುತ್ತಾರೆ ನಿರಂಜನ್. ಇಂಗ್ಲಿಷ್ ಜ್ಞಾನ ಸಂಬಂಧಿಸಿ ವರ್ಬಲ್ ವೆಬಲಿಟಿ, ಗಣಿತಕ್ಕೆ ಸಂಬಂಧಿಸಿ ಕ್ವಾಂಟಿಟಿ ಟು ಎಬಿಲಿಟಿ ಮತ್ತು ಡೇಟ ಇಂಟರ್‌ಪ್ರೆಟೇಶನ್ ಆ್ಯಂಡ್ ಲಾಜಿಕಲ್ ರೀಸನಿಂಗ್ ಎಂಬ ಮೂರು ವಿಷಯದಲ್ಲಿ 300 ಅಂಕದ 100 ಪ್ರೆಶ್ನೆಗಳನ್ನು ಕೇಳಲಾಗಿತ್ತು. ನಾನು ಅಭ್ಯಾಸ ಮಾಡಿರುವ ವಿಷಯಗಳೆ ಇರುವುದರಿಂದ ಎಲ್ಲವು ಸುಲಭವಾಯಿತು ಎನ್ನುತ್ತಾರೆ ನಿರಂಜನ್.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...