More

  ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಟ್ಟಡಕ್ಕೆ ಭೂಮಿಪೂಜೆ

  ಹುಬ್ಬಳ್ಳಿ: ಇಲ್ಲಿಯ ನವನಗರ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯ ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಹೊರ ರೋಗಿಗಳ ವಿಭಾಗದ ವಿಸ್ತರಣಾ ಕಟ್ಟಡ ನಿರ್ವಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

  ಸಂಸ್ಥೆಯ ಅಧ್ಯಕ್ಷ ಹಾಗೂ ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು ಕಟ್ಟಡ ನಿರ್ವಣಕ್ಕೆ ಭೂಮಿಪೂಜೆ ನೆರವೇರಿಸಿದರು. ಸಂಸ್ಥೆಯ ಚೇರ್ಮನ್ ಡಾ. ಬಸವರಾಜ ಪಾಟೀಲ ಶಿಲಾನ್ಯಾಸ ನೆರವೇರಿಸಿದರು. ಪೂಜಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ವರ್ಗದ ಕಾರ್ಯದರ್ಶಿ ಡಾ. ಎಸ್. ವಿ. ಬೆಂಬಳಗಿ, ಕಾರ್ಯಕಾರಿ ಮಂಡಳಿ ಸದಸ್ಯರಾದ ತಿಲಕ ವಿಕಮಸಿ, ದೀಪಕ ಶಾ, ಮಹೇಂದ್ರ ಸಿಂಘಿ, ಡಾ. ವಿ.ಜಿ. ಯಳಮಲಿ, ಪ್ರಕಾಶ ಹಿರೇಮಠ, ಆಡಳಿತಾಧಿಕಾರಿ ಡಾ. ಮಂಜುಳಾ ಹುಗ್ಗಿ, ಆಸ್ಪತ್ರೆ ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts