ಎನ್.ಆರ್.ಪುರ: ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟ ನಡೆಸುವುದರಿಂದ ಬಾಂಧವ್ಯ ವೃದ್ಧಿಯಾಗಲಿದೆ ಎಂದು ಎನ್.ಆರ್.ಪುರ ಉಪ ವಲಯ ಅರಣ್ಯಾಧಿಕಾರಿ ಗೌಸ್ ಮಹಿಯುದ್ದೀನ್ ತಿಳಿಸಿದರು.
ಸೂಸಲವಾನಿ ಗ್ರಾಮದಲ್ಲಿ ಸೋಮವಾರ ಸೂಸಲವಾನಿ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು. ಕ್ರೀಡೆಯಿಂದ ಗ್ರಾಮೀಣ ಮಟ್ಟದಲ್ಲಿ ಹಬ್ಬದ ವಾತಾವರಣ ಉಂಟಾಗಲಿದೆ ಎಂದರು.
ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ 19 ತಂಡಗಳು ಭಾಗವಹಿಸಿದ್ದವು. ಪ್ರಥಮ ಬಹುಮಾನ ಪಡೆದ ಶೆಟ್ಟಿಕೊಪ್ಪದ ಎಸ್.ಪಿ.ಫ್ರೆಂಡ್ಸ್ ಎ ತಂಡಕ್ಕೆ 9,999 ರೂ., ಆಕಷರ್ಕ ಟ್ರೋಫಿ, ದ್ವಿತೀಯ ಬಹುಮಾನ ಪಡೆದ ಶೆಟ್ಟಿಕೊಪ್ಪದ ಎಸ್.ಪಿ.ಫ್ರೆಂಡ್ಸ್ ಬಿ.ತಂಡಕ್ಕೆ 5,555 ರೂ. ಹಾಗೂ ಆಕಷರ್ಕ ಟ್ರೋಫಿ, ತೃತೀಯ ಬಹುಮಾನ ಪಡೆದ ಮಾಕೋಡು ತಂಡಕ್ಕೆ 2,222 ರೂ., ಆಕಷರ್ಕ ಟ್ರೋಫಿ ಹಾಗೂ ಚತುರ್ಥ ಬಹುಮಾನ ಪಡೆದ ಸಿಂಸೆ ತಂಡಕ್ಕೆ ಆಕಷರ್ಕ ಟ್ರೋಫಿ ನೀಡಲಾಯಿತು.
ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷ ಸುನೀಲ್‌ಕುಮಾರ್, ಸದಸ್ಯರಾದ ಚಂದ್ರಶೇಖರ್, ಲಿಲ್ಲಿ ಮಾತುಕುಟ್ಟಿ, ಹಿರಿಯ ಆಟಗಾರ ರಂಜು ಎಲಿಯಾಸ್, ಮುಖಂಡರಾದ ಎಸ್.ಡಿ.ರಾಜೇಂದ್ರ, ಕೆಸವಿ ಮಂಜುನಾಥ್, ಪಡಿಯಟ್ ಎಲ್ದೋ, ಸೂಸಲವಾನಿ ಸ್ಪೋರ್ಟ್ ಕ್ಲಬ್‌ನ ಎಲ್ಲ ಪದಾಧಿಕಾರಿಗಳು ಇದ್ದರು.
ಕ್ರೀಡಾಕೂಟದಿಂದ ಬಾಂಧವ್ಯ ವೃದ್ಧಿ

You Might Also Like
ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt
salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…
ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts
gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ. ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…
ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream
ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…