ಕ್ರೀಡಾ ಸಾಧಕರಿಗೆ ಉದ್ಯೋಗ ಕೊಡಿ

ಕ್ರೀಡಾ ಸಾಧಕರಿಗೆ ಉದ್ಯೋಗ ಕೊಡಿ Employ sports professionals

ಪರಶುರಾಮಪುರ: ರಾಜ್ಯ ಸರ್ಕಾರ ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ, ನಗದು ಬಹುಮಾನ ನೀಡಬೇಕು ಎಂದು ಪಿಆರ್‌ಪುರ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಾರುತಿ ಆಗ್ರಹಿಸಿದರು.

ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ಬುಧವಾರ ಗ್ರಾಮದ ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಪದಾಧಿಕಾರಿಗಳು ಹಾಗೂ ಸುತ್ತಲಿನ ಗ್ರಾಮಗಳ ಕ್ರೀಡಾಪಟುಗಳು ಮುಖ್ಯಮಂತ್ರಿ ಮತ್ತು ರಾಜ್ಯಪಾಲರಿಗೆ ಪತ್ರ ಚಳವಳಿ ಕೈಗೊಂಡು ಮಾತನಾಡಿದರು.

ದೇಶದ ಇತರೆ ರಾಜ್ಯಗಳಲ್ಲಿ ಕ್ರೀಡಾ ಸಾಧಕರನ್ನು ಗೌರವಿಸುತ್ತವೆ. ಆದರೆ, ರಾಜ್ಯ ಸರ್ಕಾರ ಈವರೆಗೂ ವಿವಿಧ ಕ್ರೀಡೆಗಳ ಸಾಧಕರನ್ನು ಗೌರವಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.

ಕೇರಳ ಸರ್ಕಾರದ 2018ರ ಕ್ರೀಡಾ ನೀತಿಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು. ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಕರ್ನಾಟಕ ಒಲಿಂಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜು ಅವರ ಸಲಹೆಯನ್ನು ಸರ್ಕಾರ ಪರಿಗಣಿಸದೇ ಇತರೆ ರಾಜ್ಯಗಳಲ್ಲಿ ನೀಡುತ್ತಿರುವ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಂಸ್ಥೆ ಕಾರ್ಯದರ್ಶಿ ಗ್ರಾಪಂ ಮಾಜಿ ಸದಸ್ಯ ಆರ್.ತಿಪ್ಪೇಸ್ವಾಮಿ, ಪದಾಧಿಕಾರಿಗಳಾದ ಸಂದೀಪ್, ಪ್ರದೀಪ, ಸಾಯಿ, ಆದರ್ಶ, ಸಾಗರ್, ನಾಗರಾಜು, ನವೀನ್, ಚೇತನ, ತಿಪ್ಪೇಶಿ, ರಾಜು, ರವಿ, ಸಂತೋಷ, ಈರಣ್ಣ, ಚಿತ್ತಯ್ಯ, ನಾಗರಾಜು, ವಿವಿಧ ಗ್ರಾಮಗಳ ಕ್ರೀಡಾಪಟುಗಳು ಇದ್ದರು

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…