ಕ್ವಿಟ್ ಇಂಡಿಯಾ ಚಳವಳಿ ಸ್ಮರಣೆ

ಗದಗ: ಕ್ವಿಟ್ ಇಂಡಿಯಾ ಚಳವಳಿ ಸ್ಮರಣಾರ್ಥ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದ್ದ ಜಾಥಾಕ್ಕೆ ನಗರಸಭೆ ಅಧ್ಯಕ್ಷ ಪ್ರಕಾಶ ಬಾಕಳೆ ಗುರುವಾರ ಚಾಲನೆ ನೀಡಿದರು.

ಮಹಾತ್ಮ ಗಾಂಧೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಪ್ರಕಾಶ ಬಾಕಳೆ ಅವರು, ಸ್ವಾತಂತ್ರ್ಯ ಹೋರಾಟದ ದಿನಗಳಲ್ಲಿ ಗಾಂಧೀಜಿ ಅವರು 1942ರ ಆ. 9ರಂದು ಕ್ವಿಟ್ ಇಂಡಿಯಾ(ಬ್ರಿಟಿಷರೇ ಭಾರತ ಬಿಟ್ಟು ತೊಲಗಿ) ಚಳವಳಿ ಆರಂಭಿಸಿದ್ದರು ಎಂದರು.

ಬಿಇಒ ಎಂ.ಎ. ರಡ್ಡೇರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಅವಶ್ಯವಿದೆ ಎಂದರು. ದೈಹಿಕ ಶಿಕ್ಷಣಾಧಿಕಾರಿ ಎ.ಎಂ. ಕುಂಟೋಜಿ, ಪ್ರೌಢಶಾಲಾ ಶಿಕ್ಷಣ ಸಂಯೋಜಕ ಪಾಣಿಶೆಟ್ಟರ ಮಾತನಾಡಿದರು. ವಿದ್ಯಾರ್ಥಿಗಳು ಬೃಹತ್ ಗಾತ್ರದ ರಾಷ್ಟ್ರಧ್ವಜ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿದರು. ಮುಖ್ಯ ಶಿಕ್ಷಕ ಕೆ.ಎಂ. ಮೂಲಿಮನಿ, ಸಹಪ್ರಾಚಾರ್ಯ ಎ.ಎ. ಹದ್ಲಿ ಇದ್ದರು. ಗಣೇಶಸಿಂಗ್ ಬ್ಯಾಳಿ ನಿರ್ವಹಿಸಿದರು.

Leave a Reply

Your email address will not be published. Required fields are marked *