More

  ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ

  ಮೂಡಿಗೆರೆ: ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವು ರಾಜ್ಯಾದ್ಯಂತ ಪ್ರಾರಂಭಗೊಂಡಿದ್ದು ತಾಲೂಕಿನ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಲ್ಲಿನ ಆಡಳಿತ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಕ್ಷಯರೋಗ ಪತ್ತೆ ಮಾಡಲಾಗುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸುಂದರೇಶ್ ಹೇಳಿದರು.

  ಆರೋಗ್ಯ ಇಲಾಖೆಯಿಂದ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಶನಿವಾರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಚಾಲನೆ ನೀಡಿ ಮಾತನಾಡಿ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದಲ್ಲಿ ಪ್ರತಿಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಾರೆ. 2 ವಾರಕ್ಕಿಂತ ಹೆಚ್ಚು ಕೆಮ್ಮು, ಹಸಿವಾಗದಿರುವುದು, ದೇಹದ ತೂಕದಲ್ಲಿ ಇಳಿಕೆ, ಸಂಜೆ ಜ್ವರ, ರಾತ್ರಿ ವೇಳೆ ಬೆವರುವುದು, ಕದಲ್ಲಿ ರಕ್ತದ ಕಣಗಳು ಈ ರೀತಿಯ ಲಕ್ಷಣಗಳಿದ್ದರೆ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅವರು ತಪಾಸಣೆ ನಡೆಸಿ ರೋಗಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗುತ್ತಾರೆ. ರೋಗದ ಲಕ್ಷಣಗಳಿದ್ದರೆ ಚಿಕಿತ್ಸೆ ನೀಡಲು ಎಲ್ಲ ತಯಾರಿ ನಡೆಸಲಾಗುತ್ತದೆ ಎಂದು ತಿಳಿಸಿದರು.
  ಕ್ಷಯ ರೋಗಕ್ಕೆ ಜನ ಹೆದರಬೇಕಾಗಿಲ್ಲ. ತಾಲೂಕಿನಲ್ಲಿ ಪರಿಣಾಮಕಾರಿಯಾದ ಕ್ಷಯ ರೋಗಿಗಳು ಇಲ್ಲ. ಯಾವುದೇ ಸಣ್ಣ ಕಾಯಿಲೆ ನಿರ್ಲಕ್ಷಿಸಬಾರದು. ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆಯಬೇಕು. ಮಳೆಗಾಲವಾದ್ದರಿಂದ ಶೀತ, ಜ್ವರ, ತಲೆನೋವು, ಮೈಕೈ ನೋವು ಸಾಮಾನ್ಯ. ಅಂತಹ ಸಣ್ಣ ಪುಟ್ಟ ಸೋಂಕುಗಳಿದ್ದರೂ ಚಿಕಿತ್ಸೆ ಅಗತ್ಯವಿದೆ. ಕ್ಷಯರೋಗದ ಲಕ್ಷಣಗಳು ದೇಹದಲ್ಲಿ ಕಂಡು ಬಂದಲ್ಲಿ ಸಮೀಪದ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿಕೊಂಡರೆ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
  ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಾಂಭವಿ ಮಾತನಾಡಿ, ತಾಲೂಕಿನಲ್ಲಿ ಸಂಗ್ರಹವಾಗುವ ಕದ ಮಾದರಿಯನ್ನು ತಾಲೂಕು ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಬಂದ ಬಳಿಕ ರೋಗ ಪತ್ತೆಯಾದರೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಿರಣ್, ಕ್ಷಯ ರೋಗ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಪ್ರದೀಪ್, ಆರೋಗ್ಯ ಸಿಬ್ಬಂದಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts